ನಾನು, ಡಿ ಕೆ ಶಿವಕುಮಾರ್ ಸಹೋದರರಿದ್ದಂತೆ‌, ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ: ಸಿದ್ದರಾಮಯ್ಯ

Date:

ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಡಿ ಕೆ ಶಿವಕುಮಾರ್‌ ಮತ್ತು ನಾನು ಒಗ್ಗಟ್ಟಿನಿಂದ ಇದ್ದೇವೆ. ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆಯೇ ಹೇಳಿದ್ದೇನೆ. ಪಕ್ಷ ಕಟ್ಟುವ ಬಗ್ಗೆ ನಾವಿಬ್ಬರು ಚರ್ಚಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಡಿಸಿಎಂ ಡಿ ಕೆ ಶಿವಕುಮಾರ್‌ ಮನೆಯಲ್ಲಿ ಉಪಾಹಾರ ಸೇವಿಸಿದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ನಾನು ಮತ್ತು ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ. ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ” ಎಂದರು.

ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, “ಸಿಎಲ್‌ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ. ಆಗ ಮಾತನಾಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪಮುಖ್ಯಮಂತ್ರಿಗಳ ಮನೆಯ ಉಪಾಹಾರದಲ್ಲಿ ಮಾಂಸಾಹಾರವಿತ್ತು, ನಮ್ಮ ಮನೆಯಲ್ಲಿ ಸಸ್ಯಾಹಾರದ ಉಪಾಹಾರವಿತ್ತು. ಉಪಹಾರ ಜೊತೆ ಚುನಾವಣೆ ತಂತ್ರಗಳ ಬಗ್ಗೆ ಚರ್ಚಿಸಿದ್ದೇವೆ. ಸಮಯ ಸಿಕ್ಕು ಭೇಟಿಗೆ ಅವಕಾಶ ನೀಡಿದ ಮೇಲೆ ಹೈಕಮಾಂಡ್ ನಾಯಕರನ್ನು ನಾವು ಭೇಟಿ ಮಾಡುತ್ತೇವೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕಡ ಕೆ ಸಿ ವೇಣುಗೋಪಾಲ್ ಅವರು ಬುಧವಾರ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮ ಬರುತ್ತಿದ್ದಾರೆ. ನಾವೂ ಸಹ ಉಪಸ್ಥಿತರಿರುತ್ತೇವೆ” ಎಂದರು.

ಬೆಳಗಾವಿ ಅಧಿವೇಶನ- ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸುತ್ತೇವೆ: ಸಿಎಂ

“ಡಿ.8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು” ಎಂದು ಹೇಳಿದರು.

ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ

ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು, ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್‌ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ.ವೆರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು , ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು , ಪಶು ಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ” ಎಂದರು.

“ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶು ಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷದ ಎಥನಾಲ್ ಗಾಗಿ ಬಳಸುತ್ತಾರೆ. ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು .ಎಥನಾಲ್ ಹಾಗೂ ಎಂ ಎಸ್ ಪಿ, ಎಫ್ ಆರ್ ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು, ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...