ಡಿ ಕೆ ಶಿವಕುಮಾರ್ ಸಿಎಂ ಆಗುವ ಭರವಸೆ, ನಂಬಿಕೆ ಈಗಲೂ ಇದೆ: ‌ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

Date:

ಸಿಎಂ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ ಕೆ ಶಿವಕುಮಾರ್ ಅವರು ಹೈಕಮಾಂಡ್ ಮಾತಿಗೆ ಬದ್ಧರಾಗಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳು ‘ನಾನೇ ಐದು ವರ್ಷ ಸಿಎಂ’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ್ದರಲ್ಲಿ ತಪ್ಪೇನಿದೆ. ಮುಖ್ಯಮಂತ್ರಿಯಾಗಿರುವವರು ಮುಂದುವರಿಯುತ್ತೇನೆ ಎಂದು ಹೇಳಿದರೆ ಅದರಲ್ಲಿ ತಪ್ಪೇನಿದೆ? ಅವರು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕಾಂಗ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡಿ ಅವರನ್ನು ಸಿಎಂ ಮಾಡಿದೆ. ಅವರು ಸರ್ಕಾರ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಚರ್ಚೆ ಯಾಕೆ” ಎಂದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನನ್ನ ಮುಂದೆ ಯಾವುದೇ ಆಯ್ಕೆ ಇಲ್ಲ, ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರು ಮೊದಲಿನಿಂದಲೂ ಅದನ್ನೇ ಹೇಳುತ್ತಿದ್ದಾರೆ, ಈಗಲೂ ಅದನ್ನೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಹಿಂದೆಯೂ ಹೇಳಿದ್ದರು. ಈಗಲೂ ಹೇಳಿದ್ದಾರೆ. ಮುಂದೆಯೂ ಹೇಳುತ್ತಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಹೈಕಮಾಂಡ್ ತೀರ್ಮಾನವನ್ನು ಪಾಲಿಸಿ ಶಿಸ್ತು ಕಾಪಾಡುವುದು ಅವರ ಕರ್ತವ್ಯ. ಹಾಗಾಗಿ ಅವರು ಕೆಲವು ವಿಚಾರವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿ.ಕೆ. ಶಿವಕುಮಾರ್ ಸಿಎಂ ಆಗುವ ಭರವಸೆ, ನಂಬಿಕೆ ಈಗಲೂ ಇದೆ

ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಆಸೆಯನ್ನು ನೀವು ವ್ಯಕ್ತಪಡಿಸಿದ್ದೀರಿ ಎಂದು ಕೇಳಿದಾಗ, “ಆ ಭರವಸೆ ಇಂದೂ ಇದೆ, ನಾಳೆಯೂ ಇರುತ್ತದೆ. ನಂಬಿಕೆ ಎಂಬುದು ನಮ್ಮ ಜೀವನ ನಡೆಸಲು ಪ್ರೇರಣೆ. ನಂಬಿಕೆ ಇಲ್ಲದಿದ್ದರೆ ಜೀವನ ಮಾಡುವುದೇ ಕಷ್ಟವಾಗುತ್ತದೆ. ನನಗೆ ಈಗಲೂ ಆಸೆ ಇದೆ. ಅವರು ಪಕ್ಷಕ್ಕೆ ಬಹಳ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಕೆಲವು ಭಾಗದ ಜನರು ವಿಶ್ವಾಸ ಇಟ್ಟು ಶಿವಕುಮಾರ್ ಅವರಿಗೆ ಒಂದು ಬಾರಿ ಅವಕಾಶ ಸಿಗಲಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಈಗ ಸಿಎಂ ಸೀಟು ಖಾಲಿ ಇಲ್ಲ” ಎಂದು ತಿಳಿಸಿದರು.

ಅಸಹಾಯಕತೆ ಅಲ್ಲ, ಪಕ್ಷಕ್ಕೆ ನೀಡುವ ಗೌರವ

ಎರಡೂವರೆ ವರ್ಷಗಳ ಬಳಿಕ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಎಂಬ ನಿರೀಕ್ಷೆ ಕೆಲವು ಶಾಸಕರು ಹಾಗೂ ಕಾರ್ಯಕರ್ತರಲ್ಲಿತ್ತು, ಏಕಾಏಕಿ ಶಿವಕುಮಾರ್ ಅವರು ಆಯ್ಕೆ ಇಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದಾಗ, “ಅದು ಅಸಹಾಯಕತೆ ಅಲ್ಲ. ಅದು ಪಕ್ಷ ಹಾಗೂ ಅದರ ನಾಯಕತ್ವಕ್ಕೆ ನೀಡುವ ಗೌರವ. ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿರುವಾಗ ನಾವು ಪಕ್ಷಕ್ಕೆ ಗೌರವ ನೀಡಬೇಕು. ಶಿವಕುಮಾರ್ ಅವರು ಆ ಕೆಲಸ ಮಾಡಿದ್ದಾರೆ” ಎಂದು ತಿಳಿಸಿದರು.

ನಂದಿನಿ ಬಳಸಿ, ರೈತರನ್ನು ಉಳಿಸಿ

ಕೆಎಂಎಫ್ ಅಧ್ಯಕ್ಷ ಸ್ಥಾನದ ಬಗ್ಗೆ ಮಾಲೂರು ಶಾಸಕ ನಂಜೇಗೌಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಯಾವುದೇ ಸ್ಥಾನಕ್ಕೆ ಅರ್ಜಿ ಹಾಕಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ನನ್ನ ಮುಂದೆ ಈ ವಿಚಾರ ಚರ್ಚೆಯೂ ಆಗಿಲ್ಲ. ಅಂತಿಮ ತೀರ್ಮಾನ ಮಾಡುವವರು ನಿರ್ದೇಶಕರುಗಳು, ಸರ್ಕಾರ, ಮುಖ್ಯಮಂತ್ರಿಗಳು ಹಾಗೂ ಪಕ್ಷ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...