ಔಷಧ ಸಸ್ಯ ಬೆಳೆವ ರೈತರಿಗೆ ಮಾರುಕಟ್ಟೆ ಒದಗಿಸಲು ಸಿಎಂ ಜೊತೆ ಚರ್ಚಿಸುವೆ: ಈಶ್ವರ ಖಂಡ್ರೆ

Date:


ಔಷಧೀಯ ಸಸ್ಯ ಮತ್ತು ಗಿಡಮೂಲಿಕೆ ಬೆಳೆಯುವ ರೈತರಿಗೆ ಇ-ಮಾರುಕಟ್ಟೆ ರೀತಿಯಲ್ಲಿ ವೇದಿಕೆ ಕಲ್ಪಿಸಲು ಸಹಯೋಗ ಮತ್ತು ಸಹಕಾರ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿಂದು ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಚಿಂತನ ಮಂಥನದಲ್ಲಿ ಮಾತನಾಡಿದ ಅವರು, “ಹಲವರು ಮಾಹಿತಿ ಕೊರತೆಯಿಂದ ಔಷಧೀಯ ಸಸ್ಯಗಳನ್ನು ಕಳೆ ಎಂದು ನಾಶ ಮಾಡುತ್ತಿದ್ದಾರೆ. ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ, ಗಿಡಮೂಲಿಕೆ ಸಂರಕ್ಷಿಸಲು ಅರಿವು ಮೂಡಿಸಬೇಕಿದೆ” ಎಂದರು.

“ಹಿಂದೆ ನಮ್ಮ ಪೂರ್ವಿಕರು ಮನೆಯ ಹಿತ್ತಲ್ಲಿ ಬೆಳೆದ ಗಿಡಮೂಲಿಕೆಗಳಿಂದ ಮನೆ ಮದ್ದು ಮಾಡುತ್ತಿದ್ದರು. ಭಾರತದ ಸನಾತನ ವೈದ್ಯಪದ್ಧತಿ ಆಯುರ್ವೇದದಲ್ಲಿ ನೂರಾರು ಬಗೆಯ ಔಷಧೀಯ ಸಸ್ಯ ಬಳಕೆ ಆಗುತ್ತದೆ. ಹೀಗಾಗಿ ಇಂತಹ ಸಸ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಔಷಧೀಯ ಸಸ್ಯಗಳಿಗೆ ಮಾರುಕಟ್ಟೆ ದೊರೆತರೆ ಅವುಗಳ ಸಂರಕ್ಷಣೆ ಆಗುತ್ತದೆ. ಗಿಡಮೂಲಿಕೆ, ಔಷಧೀಯ ಸಸ್ಯ ಮಾರಾಟ ಮಳಿಗೆ ತೆರೆಯಲು ಸಹಾಯಧನ ನೀಡಿಕೆ ಅಗತ್ಯವಿದ್ದಲ್ಲಿ, ಈ ಬಗ್ಗೆಯೂ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸುವೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಶ್ಚಿಮ ಘಟ್ಟ ಅಪರೂಪದ ಸಸ್ಯಸಂಕುಲ, ಕೀಟ ಸಂಕುಲ ಹಾಗೂ ಪ್ರಾಣಿ ಸಂಕುಲತ ತಾಣವಾಗಿರುವುದರ ಜೊತೆಗೆ ಜಾಗತಿಕ ಜೀವವೈವಿಧ್ಯತೆಯ ತಾಣವಾಗಿದೆ. ಇಲ್ಲಿರುವ ಅಮೂಲ್ಯ ಹಸಿರು ಸಂಪತ್ತನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಇಂದು ಕುಡಿಯುವ ನೀರು, ತಿನ್ನುವ ಆಹಾರ ಅಷ್ಟೇಕೆ ಪ್ರಾಣವಾಯುವೂ ಕಲುಷಿತವಾಗುತ್ತಿದೆ. ಇತ್ತೀಚಿನ ಅಧ್ಯಯನ ತಾಯಿಯ ಎದೆಹಾಲಲ್ಲೂ ವಿಷವಿದೆ ಎಂಬ ಅಂಶವನ್ನು ಬಹಿರಂಗಪಡಿಸಿದೆ. ಇಂತಹ ಕಾಲಘಟ್ಟದಲ್ಲಿ ನಾವು ಆರೋಗ್ಯಪೂರ್ಣವಾಗಿರಲು ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಉಳಿಸುವ ಅಗತ್ಯವಿದೆ” ಎಂದರು.

ಇದಕ್ಕೂ ಮುನ್ನ ವಿವಿಧ ಗಿಡಮೂಲಿಕೆ ಮತ್ತು ವನ ಉತ್ಪನ್ನ ಮಳಿಗೆಗಳಿಗೆ ಭೇಟಿ ನೀಡಿ ಪರಿವೀಕ್ಷಿಸಿದ ಸಚಿವರು, ಔಷಧೀಯ ಸಸ್ಯಗಳ ಉಪಯೋಗದ ಬಗ್ಗೆ ಮಾಹಿತಿ ಪಡೆದರು. ಕಾರ್ಯಕ್ರಮದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...