‘ಸರ್ಕಾರ ನನ್ನ ಮನವಿ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ’ ಎಂದ ಪುನೀತ್ ಕೆರೆಹಳ್ಳಿ: ಕ್ರಮಕ್ಕೆ ಆಗ್ರಹ

Date:

ಸರ್ಕಾರ ನನ್ನ ಮನವಿಯನ್ನು ಸ್ವೀಕರಿಸದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ ಎಂದು ಮಂಡ್ಯದ ಇದ್ರೀಸ್ ಪಾಷಾ ಕೊಲೆ ಪ್ರಕರಣದ ಎ1 ಆರೋಪಿ, ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಗಲಭೆ ಉಂಟು ಮಾಡುವ ಹೇಳಿಕೆ ನೀಡಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಕಳೆದ ನಾಲ್ಕು ದಿನಗಳಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಸತ್ಯಾಗ್ರಹ ಮಾಡುತ್ತಿದ್ದ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸೇರಿದಂತೆ ಸಂಘಪರಿವಾದ ಮುಖಂಡರು ಕೆರೆಹಳ್ಳಿಯನ್ನು ಭೇಟಿಯಾಗಿ ಆತನ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧವೇ ಬಂಡಾಯವೆದ್ದು ಸ್ಪರ್ಧಿಸಿದ್ದ ಪುತ್ತೂರು ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಕೂಡ ಅ.5ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್, “ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ, ಕಾಂಗ್ರೆಸ್ ಸರಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸ್ವೀಕರಿಸಬೇಕು. ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ. ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ, ನಾನು ಹೋಗ್ತೇನೆ. ವಿಧಾನಸೌಧಕ್ಕೇ ಕಲ್ಲು ಹೊಡೆಯುತ್ತಾನೆ ಎಂದು ಹೇಳಿಕೆ ನೀಡಿದ್ದಾನೆ.

ಈ ಹೇಳಿಕೆಯು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಸುವ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿರುವ ಕೊಲೆ, ಸುಲಿಗೆ, ಮಹಿಳೆಯರ ದುರ್ಬಳಕೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಬೇಕು. ಇಲ್ಲವಾದಲ್ಲಿ ಯಾವುದಾದರೂ ಬಸ್‌ಗೆ ಬೆಂಕಿ ಇಟ್ಟು ಅಮಾಯಕರ ಜೀವ ತೆಗೆಯುತ್ತಾನೆ ಎಂದು ನೆಟ್ಟಿಗರು ವಿಡಿಯೋ ಹಂಚಿಕೊಂಡು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಇನ್ನು ಇದೇ ವಿಚಾರವಾಗಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ, ಕರಾವಳಿಯ ಸಜ್ಜನ ಬಿರುದಾಂಕಿತ ಕೋಟಾ ಶ್ರೀನಿವಾಸ ಪೂಜಾರಿ ಕೊಲೆ, ಸುಲಿಗೆ, ಮಹಿಳೆಯರ ದುರ್ಬಳಕೆ ಸೇರಿದಂತೆ ಹೀನ ಪ್ರಕರಣಗಳ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಭೇಟಿಯಾಗಿ ಆತನ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಪುನೀತ್ ಕೆರೆಹಳ್ಳಿಯ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗುವಾಗ ಬೆಂಗಳೂರು ಪೊಲೀಸ್ ಕಮೀಷನರ್ ಆಗಿದ್ದ ಭಾಸ್ಕರ ರಾವ್ (ಈಗ ಬಿಜೆಪಿ ಮುಖಂಡ) ಸಹ ಜೊತೆಯಲ್ಲಿದ್ದು ಪುನೀತ್ ಕೆರೆಹಳ್ಳಿಗೆ ನೈತಿಕ ಬೆಂಬಲ ಕೊಟ್ಟಿದ್ದಾರೆ. ಸಿಟಿ ರವಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ ಹಲವು ಬಿಜೆಪಿ ನಾಯಕರು ಕೆರೆಹಳ್ಳಿಯನ್ನು ಭೇಟಿಯಾಗಿ ಆತನ “ಸತ್ಯಾಗ್ರಹ”ದ ಜೊತೆ ನಿಂತಿದ್ದಾರೆ‌. ಇದಕ್ಕೆಲ್ಲಾ ನಾಗರಿಕ ಸಮಾಜದ ಪ್ರತಿಕ್ರಿಯೆ ಏನು? ಎಂದು ಪ್ರಶ್ನಿಸಿದ್ದಾರೆ.

ಪುನೀತ್ ಕೆರೆಹಳ್ಳಿ ತನ್ನನ್ನು ಬೆಂಬಲಿಸಲು ಬಂದ ವೇಳೆ ಬಸ್ಸುಗಳಿಗೆ ಬೆಂಕಿ ಹಾಕುವ ಹೇಳಿಕೆ ನೀಡಿದ್ದಾನೆ. ಬಸ್ಸುಗಳಿಗೆ ಬೆಂಕಿ ಹಚ್ಚುವಾಗ ಬಿಜೆಪಿಯವರು ಕೆರೆಹಳ್ಳಿಯ ಜೊತೆಗೆ ತಂಡವಾಗಿ ಇರುತ್ತಾರ? ಎಂದು ಕೂಡ ಕೊಲೆ ಆರೋಪಿಗೆ ಬೆಂಬಲ ನೀಡುತ್ತಿರುವ ಬಿಜೆಪಿ ನಾಯಕರನ್ನು ಮುನೀರ್ ಕಾಟಿಪಳ್ಳ ತರಾಟೆಗೆ ತೆಗೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...