ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿದ್ದರಾಮಯ್ಯ

Date:

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದರು.

“ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಅಂಗೀಕರಿಸಲಾಗಿದೆ” ಎಂದರು.

“ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ರಿಟರ್ನ್ (ಲಿಖಿತ) ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟರು. ಮನುವಾದಿಗಳು ಸಂವಿಧಾನ ಅಂಬೇಡ್ಕರ್ ಅವರಿಂದ ಆಗಿಲ್ಲ ಎಂದು ವಾದಿಸುತ್ತಾರೆ. ಆದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು. ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅಂಬೇಡ್ಕರ್ ಅವರಿಗೆ ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು” ಎಂದು ತಿಳಿಸಿದರು.

“ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ. ಬಸವಣ್ಣನವರಾದಿಯಾಗಿ ಎಲ್ಲ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟ ಭದ್ರರು ಜಾತಿ ಹೋಗಲು ಬಿಡುತ್ತಿಲ್ಲ. ಕೆಳ ಜಾತಿಯ ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ದುರ್ಬಲವಾಗುತ್ತದೆ. ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್ ಮಾಡಿದ ಕೊನೆಯ ಭಾಷಣವನ್ನು, ಈ ಭಾಷಣದ ಎಚ್ಚರಿಕೆಯ ಮಾತುಗಳನ್ನು ಪ್ರತಿಯೊಬ್ಬರೂ ಮನವರಿಕೆ ಮಾಡಿಕೊಳ್ಳಬೇಕು” ಎಂದರು.

“ದಲಿತರನ್ನು, ಶೂದ್ರರನ್ನು ಹಿಂದುಳಿದವರನ್ನು, ಮುಸ್ಲೀಮರನ್ನು, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ನಮ್ಮ ಧರ್ಮವೂ ಹೇಳುವುದಿಲ್ಲ. ಯಾವ ಧರ್ಮವೂ ಹೇಳುವುದಿಲ್ಲ. ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವಂತಹಾ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು” ಎಂದು ಹೇಳಿದರು.

“ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ. *ತುತ್ತು ಅನ್ನಕ್ಕಾಗಿ ಯಾರೂ ಯಾರ ಮನೆ ಮುಂದೆಯೂ ನಿಲ್ಲಬಾರದು ಎನ್ನುವ ಆಶಯದಿಂದ ಅನ್ನಭಾಗ್ಯ ತಂದೆ, ಯಾರ ಮನೆ ಮಕ್ಕಳೂ ಬರಿಗಾಗಲ್ಲಿ ಶಾಲೆಗೆ ಹೋಗಬಾರದು ಎನ್ನುವ ಕಾರಣದಿಂದ ಶೂ ಭಾಗ್ಯ ತಂದೆ. ಎಲ್ಲಾ ಭಾಗ್ಯಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ” ಎಂದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...