ಸಿದ್ದರಾಮಯ್ಯ ಬೇಡ ಎಂದರೆ, ಪರಮೇಶ್ವರ್ ಸಿಎಂ ಆಗಲಿ: ಸಹಕಾರ ಸಚಿವ ಕೆ ಎನ್‌ ರಾಜಣ್ಣ

Date:

  • ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ತನಕ ಅವರ ಪರ’
  • ‘ಎಐಸಿಸಿ ಮುಖಂಡರ ಯಾವ ಸೂಚನೆಗೂ ಅಂಜುವವನಲ್ಲ’

ಗೃಹ ಸಚಿವ ಜಿ.ಪರಮೇಶ್ವರ್ ಬೇಕಾದರೆ ಮುಖ್ಯಮಂತ್ರಿಯಾಗಲಿ. ಬೇರೆಯವರಿಗೆ ಆ ಸ್ಥಾನ ನೀಡಬಾರದು.  ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ತನಕ ಅವರ ಪರ ನಾನು, ‍ಅವರು ಬೇಡ ಎಂದರೆ ಪರಮೇಶ್ವರ್ ಸಿಎಂ ಆಗಲಿ, ನಾವು ಅವರ ಪರ ಇರುತ್ತೇವೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.

ತುಮಕೂರಲ್ಲಿ ಶುಕ್ರವಾರ ಪೊಲೀಸ್ ವಸತಿ ಸಮುಚ್ಚಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮುಂದಿನ ಐದು ವರ್ಷ ನಾನೇ ಮುಖ್ಯಮಂತ್ರಿ’ ಎಂದು ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಪರೋಕ್ಷವಾಗಿ ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಬೇಡ ಎಂಬುದನ್ನು ತಿಳಿಸಿದ್ದಾರೆ.

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಬೇಡ ಎಂದು ಹೇಳಿದರೆ ಪರಮೇಶ್ವರ್ ಮುಖ್ಯಮಂತ್ರಿ ಆಗಬೇಕು. ನಾಯಕತ್ವ ಬದಲಾವಣೆ, ಸರ್ಕಾರದ ವಿಚಾರದಲ್ಲಿ ಏನೂ ಮಾತನಾಡಬಾರದು ಎಂದು ಎಐಸಿಸಿ ಮುಖಂಡರು ಹೇಳಿದ್ದಾರೆ. ನಾನು, ಇಂತಹ ಯಾವ ಸೂಚನೆಗೂ ಅಂಜುವವನಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐದು ವರ್ಷ ನಮ್ಮದೇ ಸರ್ಕಾರ, ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

“ಈಗ ಮಾತನಾಡಿದ್ದೇನೆ, ಮುಂದೆಯೂ ಮಾತನಾಡುತ್ತೇನೆ. ಏನು ಬೇಕಾದರೂ ಮಾಡಿಕೊಳ್ಳಲಿ. ಮುಂದೆ ಯಾವ ಚುನಾವಣೆಗೂ ನಾನು ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ” ಎಂದು ಹೈಕಮಾಂಡ್ ವಿರುದ್ಧ ಗುಡುಗಿದರು.

“ಪರಮೇಶ್ವರ್ ಅವರಿಗೆ ಅದೃಷ್ಟ ಇದೆ. ಮುಂದೆ ಏನು ಬೇಕಾದರೂ ಆಗಬಹುದು. ಜಿಲ್ಲೆಯಿಂದ ಒಬ್ಬರು ಮುಖ್ಯಮಂತ್ರಿಯಾದರೆ, ನಾನು ಮುಖ್ಯಮಂತ್ರಿಯಾದಂತೆ. ಅವರಿಗೆ ಉಜ್ವಲ ರಾಜಕೀಯ ಭವಿಷ್ಯ ಇದೆ. ಅದನ್ನು ನೋಡಲು ಕಾತರನಾಗಿದ್ದೇನೆ. ಅದಕ್ಕೆ ಪೂರಕವಾಗಿ ಕೆಲಸ ಮಾಡುತ್ತೇನೆ” ಎನ್ನುವ ಮೂಲಕ ಕುತೂಹಲ ಸೃಷ್ಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...