ಸಮೀಕ್ಷೆ ವೇಳೆ ಕುರುಬ ಎಂದು ಬರೆಸಿದರೆ ಮಾತ್ರ ಸಮಾಜದ ಸ್ಪಷ್ಟ ಚಿತ್ರಣ ಲಭ್ಯ: ಸಿಎಂ ಸಿದ್ದರಾಮಯ್ಯ

Date:

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ‌ ಅನುಕೂಲಗಳು ಸಿಗುತ್ತವೆ ಎಂದು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಜಾತಿ ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ಕಲಬುರಗಿಯ ಕರ್ನಾಟಕ ರಾಜ್ಯ ಕುರುಬಗೊಂಡ ಸಂಘ ಮತ್ತು ಸಂಗೊಳ್ಳಿ ರಾಯಣ್ಣ ಯುವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಣ್ಣ ಅವರ ಮೂರ್ತಿ ಅನಾವರಣಗೊಳಿಸಿ, ನಗರ ಸಿಟಿ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣರ ಹೆಸರು ನಾಮಕರಣ ಮಾಡಿ ಮಾತನಾಡಿದರು.

ಕುರುಬ ಸಮುದಾಯವನ್ನು ST ಗೆ ಸೇರಿಸಲು ಹಿಂದೆಯೂ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಕೇಂದ್ರ ಸರ್ಕಾರ ವಾಪಸ್ ಕಳುಹಿಸಿದೆ. ಹೀಗಾಗಿ ಮತ್ತೆ ಹೆಚ್ಚುವರಿ ಅಂಕಿಅಂಶಗಳು ಮತ್ತು ದಾಖಲೆಗಳ ಸಮೇತ ಕೇಂದ್ರಕ್ಕೆ ಮತ್ತೆ ಶಿಫಾರಸ್ಸು ಕಳುಹಿಸಲಾಗುವುದು ಎಂದು ಸಿ.ಎಂ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಣ್ಣ ಜನ್ಮದಿನ ಸ್ವಾತಂತ್ರ್ಯೋತ್ಸವದ ಆಗಸ್ಟ್ 15. ರಾಯಣ್ಣರನ್ನು ಬ್ರಿಟಿಷರು ಗಲ್ಲಿಗೆ ಏರಿಸಿದ್ದು ಜನವರಿ 26ರ ಗಣರಾಜ್ಯೋತ್ಸವ ದಿನದಂದು. ಇದು ಕಾತಾಳೀಯ ಆದರೂ ಸತ್ಯವಾದ ಸಂಗತಿ ಎಂದರು. ಸ್ವಾತಂತ್ರ್ಯ ಸೇನಾನಿ ರಾಯಣ್ಣ ಯುವಕರಿಗೆ ಪ್ರೇರಣೆ ಆಗಿದ್ದಾರೆ ಎಂದರು.‌

ಶೇ.7 ರಷ್ಟಿರುವ ಕುರುಬ ಸಮುದಾಯ ಶಿಕ್ಷಣದಲ್ಲಿ ಬಹಳ ಹಿಂದುಳಿದಿದೆ. ಆದ್ದರಿಂದ ಸಮುದಾಯದ ಪ್ರತಿಯೊಬ್ಬರೂ ವಿದ್ಯಾವಂತರಾಗುವುದು ಅವಶ್ಯವಾಗಿದೆ. ಸಮುದಾಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಉನ್ನತೀಕರಿಸಬೇಕಿದೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ |ಅಂಧಭಕ್ತರ ಕಿವಿಗೆ ಹೂ ಮುಡಿಸಿದ ಮೋಶಾ ಜೋಡಿ!

ಇಡೀ ರಾಜ್ಯ ಪ್ರವಾಸ ಮಾಡಿ ಕನಕ ಗುರುಪೀಠ ಸ್ಥಾಪಿಸಿದೆವು. ಪೀಠದ ಉದ್ದೇಶ, ಎಲ್ಲ ಶೋಷಿತ ಸಮುದಾಯಗಳಿಗೂ ಶಿಕ್ಷಣ ನೀಡುವುದಾಗಿತ್ತು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ನಾರಾಯಣ ಗುರು ಇಬ್ಬರೂ ಶಿಕ್ಷಣದಿಂದ ಸ್ವತಂತ್ರ ರಾಗಬಹುದು, ಸ್ವಾಭಿಮಾನಿಗಳಾಗಬಹುದು ಎಂದು ಹೇಳಿದ್ದಾರೆ. ಜಾತಿ ವ್ಯವಸ್ಥೆಯ ಕಾರಣಕ್ಕೆ ಅಸಮಾನತೆ ಸೃಷ್ಟಿಯಾಗಿದೆ ಎಂದರು.

ಜಾತಿ ರಹಿತ, ವರ್ಗ ರಹಿತ ಸಮಾಜ ಆಗಬೇಕು ಎನ್ನುವುದು ಬುದ್ದ, ಬಸವ, ಅಂಬೇಡ್ಕರ್ ಎಲ್ಲರ ಆಶಯವಾಗಿತ್ತು. ನಮ್ಮ ಸರ್ಕಾರ ಕೂಡ ಅಸಮಾನತೆ ಹೋಗಲಾಡಿದರು ಹತ್ತು ಹಲವು ಭಾಗ್ಯಗಳನ್ನು ನೀಡಿ, ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಎಂದರು.

ಆರ್ಥಿಕ ಚಲನೆ ಇಲ್ಲದ ಸಮಾಜ ಪ್ರಗತಿ ಕಾಣಲು ಸಾಧ್ಯವಿಲ್ಲ. ಆದ್ದರಿಂದ ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಿತ ಸಮುದಾಯಗಳು ಚಲನೆ ಕಂಡುಕೊಳ್ಳಬೇಕು. ಆಗಲೇ ಬುದ್ದ, ಬಸವ, ಅಂಬೇಡ್ಕರ್ ಕನಸು ನನಸಾಗುತ್ತದೆ. ಈ ಕನಸು ನನಸಾಗುವ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದವರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಿಸಿದ್ಧೆ ಎಂದರು.

ರಾಜ್ಯ ಸುತ್ತಿ ಮಠ ಮಾಡಿದ್ದು ನಾವು: ಸಿಎಂ

ಇಡೀ ರಾಜ್ಯ ಸುತ್ತಿ ಮಠ ಮಾಡಿದ್ದು ನಾವು. ಆದರೆ ಈಗ ಕೆಲವು ಡೋಂಗಿ ಜನ‌ ನಾವೇ ಮಠ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರ ಮಾತು ನಂಬಬೇಡಿ. ತೀರ್ಮಾನ ನಿಮಗೆ ಬಿಡ್ತೀನಿ. ನಿಮ್ಮ ಪ್ರೀತಿ, ವಿಶ್ವಾಸ ಸದಾ ನನ್ನ ಮೇಲೆ ಇರಲಿ. ನಾನು ರಾಜಕಾರಣ ಮಾಡೋದೇ ಸಾಮಾಜಿಕ ನ್ಯಾಯಕ್ಕಾಗಿ. ನಾನು ಅಧಿಕಾರದಲ್ಲಿ ಇರಲಿ, ಬಿಡಲಿ ಸಾಮಾಜಿಕ ನ್ಯಾಯಕ್ಕಾಗಿಯೇ ಕೆಲಸ ಮಾಡ್ತೀನಿ. ನಾವೆಲ್ಲರೂ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣ ಅವರು ನಡೆದ ದಾರಿಯಲ್ಲೇ ನಡೆಯೋಣ ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...