ಸಂಪುಟ ವಿಸ್ತರಣೆಯಾದರೆ ಡಿ ಕೆ ಶಿವಕುಮಾರ್‌ಗೆ ಪಂಗನಾಮ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

Date:

ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ? ಸಂಪುಟ ವಿಸ್ತರಣೆಯಾದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ನಾನು ಪದೇಪದೆ ಹೇಳಿದ್ದೆ. ಆದರೂ ಆ ರೀತಿ ಇಲ್ಲ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಈಗ ಡಿ.ಕೆ.ಶಿವಕುಮಾರ್‌ ಸೋದರರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಸಿಎಂ ಬದಲಾವಣೆ ಇಲ್ಲವೆಂದ ಮೇಲೆ ಎಲ್ಲರೂ ಮಲ್ಲಿಕಾರ್ಜುನ ಖರ್ಗೆಯವನ್ನು ಏಕೆ ಭೇಟಿಯಾಗುತ್ತಿದ್ದಾರೆ” ಎಂದು ಪ್ರಶ್ನಿಸಿದರು.

“ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿದಿಲ್ಲ, ವನ್ಯಜೀವಿ-ಮಾನವ ಸಂಘರ್ಷ ಜೋರಾಗಿದೆ, ಮಳೆ ಹಾನಿ ಪರಿಹಾರ ನೀಡಿಲ್ಲ. ಹೀಗೆ ಅನೇಕ ಸಮಸ್ಯೆಗಳಿದ್ದರೂ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್‌ ಚೇರ್‌ ಸ್ಪರ್ಧೆ ನಡೆಯುತ್ತಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ ಸಿಗಲಿದೆ. ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಬಗ್ಗೆ ಅರಣ್ಯ ಸಚಿವರು ಉತ್ತರ ನೀಡಬೇಕಿದೆ. ಇದು ಆಘಾತಕಾರಿ ಸಂಗತಿಯಾಗಿದ್ದು, ಈ ಬಗ್ಗೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ. ಬೆಳಗಾವಿ ಅಧಿವೇಶನದಲ್ಲಿ ಆರಂಭದಿಂದಲೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಕಳೆದ ಬಾರಿ ಚರ್ಚೆಯಾದ ಸಮಸ್ಯೆಗಳನ್ನು ಪರಿಹರಿಸಲಾಗಿದೆಯೇ ಎಂದು ತಿಳಿಸಬೇಕು. ಕಬ್ಬು ಬೆಳೆಗಾರರ ಸಮಸ್ಯೆ, ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಲಾಗುವುದು. ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ ಅವರ ಜೊತೆ ಈ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡಲಾಗುವುದು” ಎಂದು ಹೇಳಿದರು.

“ಚಾಮರಾಜನಗರದಲ್ಲಿ ರೈತರನ್ನು ಭೇಟಿ ಮಾಡಿದ್ದು, ಬೆಳೆ ಪರಿಹಾರ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇನೆ. ಪರಿಹಾರ ನೀಡದೆಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಭಾಷಣ ಮಾಡುತ್ತಾರೆಯೇ ಹೊರತು ಪರಿಹಾರ ನೀಡುವುದಿಲ್ಲ. ಜಿಎಸ್‌ಟಿ ಸಮಿತಿಯ ಸಭೆಗೆ ಹೋಗದೆ, ಸಲಹೆ ನೀಡಬೇಕಾದ ಸಭೆಗೆ ಹೋಗದೆ ಈಗ ಇಲ್ಲಿ ಬಂದು ಆರೋಪ ಮಾಡುತ್ತಾರೆ. ಇರುವ ಅವಕಾಶಗಳನ್ನು ಬಳಸಿಕೊಳ್ಳದೆಯೇ ಈಗ ಮಾತಾಡಿ ಪ್ರಯೋಜನವಿಲ್ಲ. ಸಿಎಂ ಸಿದ್ದರಾಮಯ್ಯ ಮನವಿ ಕೊಟ್ಟು ಬಂದು ನಾಟಕವಾಡುತ್ತಿದ್ದಾರೆ. ಮನವಿ ಕೊಟ್ಟು ಹೊರಗೆ ಬಂದ ನಂತರ ವಂಚನೆಯಾಗಿದೆ ಎಂದು ಆರೋಪ ಮಾಡುತ್ತಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...