ಸಭಾಪತಿ ಸ್ಥಾನದಿಂದ ಇಳಿಸುವ ಪ್ರಯತ್ನ ನಡೆದರೆ ನಾನೇ ತಕ್ಷಣ ರಾಜೀನಾಮೆ ನೀಡುವೆ: ಹೊರಟ್ಟಿ

Date:

ಪಕ್ಷದ ಬಲಾಬಲ ಬದಲಾದರೂ ಸಭಾಪತಿಯನ್ನು ಬದಲಾವಣೆ ಮಾಡಿದ್ದು ಕಡಿಮೆ. ಕಾಂಗ್ರೆಸ್ ಅಂತಹ ಇತಿಹಾಸ ನಿರ್ಮಾಣ ಮಾಡುವುದಾದರೆ ಮಾಡಲಿ. ಈ ಕುರ್ಚಿ ಯಾರಿಗೂ ಶಾಶ್ವತವಲ್ಲ. ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಶಿರಸಿ ನಗರದ ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಶುಕ್ರವಾರ ಹೆಗಡೆ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

“ವಿಧಾನಪರಿಷತ್​ನಲ್ಲಿ ಕಾಂಗ್ರೆಸ್​ಗೆ ಬಹುಮತ ಬಂದರೂ ನಾನು ಅಧಿಕಾರಕ್ಕೆ ಅಂಟಿಕೊಂಡ ವ್ಯಕ್ತಿಯಲ್ಲ. ಒಂದು ವರ್ಷ ಸಭಾಪತಿ ಆದರೂ ಮಾಜಿ ಸಭಾಪತಿ ಅಥವಾ ಹತ್ತು ವರ್ಷ ಮಾಡಿದರೂ ಮಾಜಿ ಎನ್ನುತ್ತಾರೆ. ಹೀಗಾಗಿ ಸಭಾಪತಿ ಸ್ಥಾನದಿಂದ ಇಳಿಸುವ ಪ್ರಯತ್ನ ನಡೆದಾಗ ತಕ್ಷಣ ರಾಜೀನಾಮೆ ನೀಡುತ್ತೇನೆ. ಹಿಂದೆ ಉಗ್ರಪ್ಪ ಹಾಗೂ ಶಂಕರಮೂರ್ತಿ ಅವರನ್ನು ಮಾತ್ರ ಪಕ್ಷ ಬದಲಾದಾಗ ಅಧಿಕಾರದಿಂದ ಇಳಿಸಲಾಗಿತ್ತು. ಈಗ ಕಾಂಗ್ರೆಸ್ ಅಂತಹ ಕೆಲಸ ಮಾಡಿದಲ್ಲಿ ಇತಿಹಾಸ ನಿರ್ಮಿಸಿದಂತಾಗಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಪರಿಷತ್ ನಲ್ಲಿ ಮಾತ್ರವಲ್ಲದೇ ಎಲ್ಲಿಯೂ ಮೌಲ್ಯ ಉಳಿದಿಲ್ಲ. ಅವೆಲ್ಲವೂ ರಾಮಕೃಷ್ಣ ಹೆಗಡೆ ಅವರ ಕಾಲದಲ್ಲೇ ಮುಗಿದಿದೆ. ದುಡ್ಡು ತೆಗೆದುಕೊಂಡು ಮತ ಹಾಕುವುದು. ದುಡ್ಡು ಕೊಟ್ಟು ಮತ ಪಡೆಯುವುದು ಮಾತ್ರ ನಡೆಯುತ್ತಿದೆ. ಮೌಲ್ಯ ಯಾರಾದರೂ ಉಳಿಸಿದಲ್ಲಿ ಅದು ಮಾಧ್ಯಮದಿಂದ ಮಾತ್ರ ಸಾಧ್ಯವಿದೆ ಎಂದ ಅವರು, ನಾವೂ ಸಹ ವಿವಿಧ ತರಬೇತಿ ಶಿಕ್ಷಣದ ಮೂಲಕ ಮೌಲ್ಯ ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...