ಹುದ್ದೆ ಉಳಿದಿದ್ದರೆ ಯಡಿಯೂರಪ್ಪ ಮನೆಯ ಬೆಕ್ಕುಗಳಿಗೂ ಕೊಟ್ಟು ಬಿಡಿ: ಯತ್ನಾಳ ವಾಗ್ದಾಳಿ

Date:

  • ಅಪ್ಪ ಮಗ ಸೇರಿ ನಾಟಕ ಮಾಡಬೇಡಿ: ಯತ್ನಾಳ 
  • ಡಿಕೆಶಿ ವಿರುದ್ಧ ಮತ್ತೊಂದು ಕೇಸ್​ ದಾಖಲಿಸುವೆ

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಅವರು ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ.

ವಿಜಯೇಂದ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ಬಳಿಕ​ ಯತ್ನಾಳ್​ ಕೆಂಡದಂತಾಗಿದ್ದು, ತಮ್ಮ ಮನೆಗೆ ವಿಜಯೇಂದ್ರ ಬರುವುದು ಬೇಡ ಎಂದು ಬಹಿರಂಗವಾಗಿಯೇ ಹೇಳಿದ್ದರು. ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಮೊದಲು ಮಾಜಿ ಮುಖ್ಯಮಂತ್ರಿ ಅಂತಿದ್ದರು. ಮುಖಭಂಗ ಆಗುತ್ತೆ ಅಂತಾ ಈಗ ನಿಕಟಪೂರ್ವ ಎಂದು ಹೇಳುತ್ತಾರೆ. ಅಪ್ಪ, ಮಗ ಸೇರಿ ನಾಟಕ ಮಾಡಬೇಡಿ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಬಿಜೆಪಿಯೊಳಗಿನ ಎಲ್ಲ ಹುದ್ದೆ ತಮ್ಮ ಮಕ್ಕಳಿಗೆ ಬೇಕು. ಇನ್ನೂ ಏನಾದರೂ ಉಳಿದಿದ್ದರೇ ಮನೆಯ ಬೆಕ್ಕುಗಳಿಗೆ ಕೊಟ್ಟು ಬಿಡಿ ಅಂತ ಹೇಳಿದ್ದೇನೆ. ಪ್ರಧಾನ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಅಂತ ಮಾಡಿಕೊಳ್ಳಲಿ” ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೇ 50ರಷ್ಟು ಮಹಿಳಾ ಮುಖ್ಯಮಂತ್ರಿಗಳು!- ಹೇಳಿಕೆಯಾಗೇ ಉಳಿಯದಿರಲಿ, ಅನುಷ್ಠಾನಕ್ಕೂ ಬರಲಿ

“ನಾಟಕ ಮಾಡೋದು, ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು. ಯಾಕಂದ್ರೆ ಆ ಖುರ್ಚಿ ಬಿಡಬಾರದು‌ ಅಂತ. ರೈತರ ಬಗ್ಗೆ ಕಣ್ಣೀರು ಹಾಕೋದು ಎಲ್ಲ ನಾಟಕ” ಎಂದು ಹರಿಹಾಯ್ದರು.

ವಿಜಯಪುರದ ಆನಂದ ನಗರದಲ್ಲಿ ನಡೆದ ದಾನಮ್ಮದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಹರಿಹಾಯ್ದ ಅವರು, “ನನ್ನನ್ನು ಹೆದರಿಸಬೇಕು ಅಂತಾ ಬ್ಲ್ಯಾಕ್​ಮೇಲ್ ಮಾಡುತ್ತಾರೆ. ನನಗೆ ಬ್ಲ್ಯಾಕ್​ಮೇಲ್​ ಮಾಡಲು ಬಂದರೆ, ನಿಮ್ಮದೂ ನನ್ನ ಬಳಿ ಇದೆ” ಎಂದರು.

“ಈಗ ಡಿ ಕೆ ಶಿವಕುಮಾರ್​ ಅವರದ್ದು ತೆಗೆದಿದ್ದೇನೆ. ರಾಜ್ಯವನ್ನು ಲೂಟಿ ಮಾಡಿ 10 ರಿಂದ 20 ಸಾವಿರ ಕೋಟಿ ರೂ. ಲೂಟಿ ಮಾಡಿದ್ದರೂ ಇನ್ನೂ ಸಮಾಧಾನ ಇಲ್ಲ. ಡಿ ಕೆ ಶಿವಕುಮಾರ್​ ವಿರುದ್ಧ ಮತ್ತೊಂದು ಕೇಸ್​ ದಾಖಲಿಸುತ್ತಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...