ಕಾನೂನು ಬಾಹಿರ ಟೆಂಡರ್ | ಮಾರ್ಕ್ಸ್ ಕಾರ್ಡ್‌ಗಳಲ್ಲಿ ಲೂಟಿಗಿಳಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ

Date:

ಕಾಂಗ್ರೆಸ್ ಸರಕಾರ ಲೂಟಿಯಲ್ಲಿ ತೊಡಗಿದೆ. ಕಾನೂನುಬಾಹಿರವಾಗಿ ಟೆಂಡ‌ರ್‌ಗಳನ್ನು ಮಾಡುತ್ತಿದೆ. ತನಗೆ ಬೇಕಾದವರಿಗೇ ಅವಕಾಶ ನೀಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ವಿಧಾನಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, “ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‍ಮೆಂಟ್ ಪೋರ್ಟಲ್‍ನಲ್ಲಿ ಟೆಂಡರ್‌ಗಳನ್ನು ಹಾಕುತ್ತಾರೆ. ಮಾರ್ಕ್ಸ್ ಕಾರ್ಡ್ ಪ್ರಿಂಟ್ ಮಾಡುವ ಕಾರ್ಯದಲ್ಲಿ ನಮ್ಮ ಸರಕಾರ ಇರುವಾಗಲೂ ಟೆಂಡರ್ ನೀಡಿದ್ದು, ಒಂದು ಮಾರ್ಕ್ಸ್ ಕಾರ್ಡ್ ಮುದ್ರಿಸಲು 9.45 ರೂ.ಗೆ ಟೆಂಡರ್ ಕೊಡಲಾಗಿತ್ತು. ಈ ಸರಕಾರ ಬಂದ ಬಳಿಕ ಪ್ಯಾರಾ ಮೆಡಿಕಲ್ ಬೋರ್ಡಿನ ಟೆಂಡರ್ ಕರೆದಿದ್ದು, ಒಂದು ಮಾರ್ಕ್ಸ್ ಕಾರ್ಡ್ ಮುದ್ರಿಸಲು 100 ರೂ. ಕೋರಿದೆ. ಮಾತುಕತೆ ಬಳಿಕ 91 ರೂ.ಗೆ ಇಳಿಸಲಾಗಿದೆ” ಎಂದು ಆಕ್ಷೇಪಿಸಿದರು.

“ಕೆಲವೆಡೆ ವಿಷಯ ಹೊರಬಂದುದರಿಂದ ಮತ್ತೆ ಮಾತುಕತೆ ಮಾಡಿ ಒಂದು ಮಾರ್ಕ್ಸ್ ಕಾರ್ಡ್ ಮುದ್ರಿಸಲು 44 ರೂ., ಡಿಪ್ಲೊಮಾ ಸರ್ಟಿಫಿಕೇಟಿಗೆ 47 ರೂ. ಎಂದು ಬದಲಿಸಿದ್ದರು. ಇಂಟರ್ನ್‍ಶಿಪ್ ಸರ್ಟಿಫಿಕೇಟ್‍ಗೆ 44 ರೂ. ನಿಗದಿ ಮಾಡಿ ವರ್ಕ್ ಆರ್ಡರ್ ಕೊಟ್ಟಿದ್ದಾರೆ. ಕಳೆದ ನವೆಂಬರ್ 29ರಂದು ಈ ವರ್ಕ್ ಆರ್ಡರ್ ಕೊಡಲಾಗಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಸಂಜಯನಗರದ ಊರ್ದವ್ ಮೆನೇಜ್‍ಮೆಂಟ್ ಪ್ರೈವೇಟ್ ಲಿಮಿಟೆಡ್‍ಗೆ ಈ ವರ್ಕ್ ಆರ್ಡರ್ ಕೊಡಲಾಗಿದೆ. ಇದು ಗೊತ್ತಾಗಿ ಜನವರಿ 8 ರಂದು ನಾನು ಸರಕಾರದ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ. ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಆಗಿದೆ ಎಂದು ಗಮನ ಸೆಳೆದಿದ್ದೆ. ಇದುವರೆಗೂ ಉತ್ತರ ಕೊಟ್ಟಿಲ್ಲ. ಇದರ ಹಣಕಾಸಿನ ಬಿಡ್ 4-12-2024ರಂದು ಅನುಮೋದನೆ ಪಡೆದಿದೆ ಎಂದು ಗಮನ ಸೆಳೆದರು. ಮೊದಲೇ ವರ್ಕ್ ಆರ್ಡರ್ ಕೊಡಲಾಗಿದೆ. ಇದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲರ ಖಾತೆಗೆ ಸೇರಿದ್ದು” ಎಂದರು.

“ಊರ್ದವ್ ಮೆನೇಜ್‍ಮೆಂಟ್ ಪ್ರೈವೇಟ್ ಲಿಮಿಟೆಡ್‍ನ ನಿರ್ದೇಶಕ ವೆಂಕಟರೆಡ್ಡಿ ಪಾಟೀಲರಿಗೆ ಇದನ್ನು ಕೊಟ್ಟಿದ್ದು, ಅವರು ಸಚಿವ ಡಾ.ಶರಣಪ್ರಕಾಶ್ ಪಾಟೀಲರ ಹತ್ತಿರದ ಸಂಬಂಧಿ. ಈ ಊರ್ದವ್ ಮೆನೇಜ್‍ಮೆಂಟ್ ಪ್ರೈವೇಟ್ ಲಿಮಿಟೆಡ್ ಎಂಬುದು ಈವೆಂಟ್ ಮೆನೇಜ್‍ಮೆಂಟ್ ಕಂಪೆನಿ. ಇದಕ್ಕೂ ಪ್ರಿಂಟಿಂಗ್‍ಗೂ ಏನೂ ಸಂಬಂಧ ಇಲ್ಲ. ಅವರು ಯಾವತ್ತೂ ಮುದ್ರಣದ ಕೆಲಸ ಮಾಡಿಲ್ಲ” ಎಂದು ದೂರಿದರು.

“ಸಚಿವರಿಗೆ ಬೇಕಾದವರಿಗೆ ಕೊಡಲು ಕ್ರಮ ಕೈಗೊಂಡಿದ್ದಾರೆ. ಇದು ಬ್ಲ್ಯಾಕ್ ಲಿಸ್ಟೆಡ್ ಕಂಪೆನಿ. ಇದರ ಮೇಲೆ ಸುಮಾರು 20-25 ಕೇಸುಗಳಿವೆ. ಇಂಥ ಕಂಪೆನಿಗೆ ಟೆಂಡರ್ ಕೊಡಲಾಗಿದೆ. ಬ್ಲ್ಯಾಕ್ ಲಿಸ್ಟೆಡ್ ಕಂಪೆನಿಗೆ ಟೆಂಡರ್ ಕೊಟ್ಟಿದ್ದಾರೆ. ಹಣಕಾಸಿನ ಬಿಡ್ ಇಲ್ಲದೆ ಟೆಂಡರ್ ನೀಡಿದ್ದಾರೆ. ನಾವು 9 ರೂ. 45 ಪೈಸೆಗೆ ಕೊಟ್ಟಾಗ 2.45 ಲಕ್ಷ ಎಂದು ತಿಳಿಸಿದ್ದೆವು. ಈ ಬಿಡ್‍ನಲ್ಲಿ ಎಷ್ಟು ಸಂಖ್ಯೆಯ ಸರ್ಟಿಫಿಕೇಟ್ ಮುದ್ರಣ ಎಂದು ತಿಳಿಸಿಲ್ಲ; ಅಂದರೆ ಅವರು ಎಷ್ಟು ಬೇಕಿದ್ದರೂ ಸಂಖ್ಯೆ ಹೇಳಿಕೊಳ್ಳಬಹುದು ಎಂದು ಟೀಕಿಸಿದರು. ಈ ಸಂಬಂಧ ನಾನು ಎರಡು-ಮೂರು ಪತ್ರ ಬರೆದರೂ ಮುಖ್ಯ ಕಾರ್ಯದರ್ಶಿ, ಇಲಾಖೆಯಿಂದ ಒಂದೇ ಒಂದು ಉತ್ತರ ಬಂದಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...