ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ಮೇ 6) ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರಿನಲ್ಲಿಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ. ಗಂಟೆಗೆ 30-40 ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್, 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿದ್ದೀರಾ? ಏಪ್ರಿಲ್-ಜೂನ್ ತಿಂಗಳುಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ: ಹವಾಮಾನ ಇಲಾಖೆ ಮುನ್ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಬೆಳ್ಳಾರಿ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.

ಚಿಕ್ಕಮಗಳೂರು, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡದ ಒಂದೆರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...