ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಯನ್ನು ಕೂಡಲೇ ಜಾರಿಗೊಳಿಸಿ: ಟಿ ಎ ನಾರಾಯಣಗೌಡ

Date:

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು, ದ್ವಿಭಾಷಾ ನೀತಿ ಜಾರಿಯ ಘೋಷಣೆ ಮಾಡಬೇಕು, ಕನ್ನಡ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬೆಂಗಳೂರಿನ ಗಾಂಧಿನಗರದ ಕರ್ನಾಟಕ ರಕ್ಷಣಾ ವೇದಿಕೆ ಕೇಂದ್ರ ಕಚೇರಿಯ ಮುಂಭಾಗ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು.

ಅಧಿಕಾರ ಶಾಶ್ವತವಲ್ಲ, ಅಧಿಕಾರ ಇದ್ದಾಗ ಮಾಡಿದ ಕಾರ್ಯಗಳು ಶಾಶ್ವತವಾಗಿ ಉಳಿಯುತ್ತವೆ. ಕರ್ನಾಟಕದ ಜನತೆ ಶಾಶ್ವತವಾಗಿ ನೆನಪಲ್ಲಿ ಇಟ್ಟುಕೊಳ್ಳುವ ಕಾರ್ಯವನ್ನು ಸರ್ಕಾರಗಳು ಮಾಡಬೇಕು ಎಂದು ಅವರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದಲ್ಲಿ ಹಿಂದಿ ಸಾಮ್ರಾಜ್ಯಶಾಹಿಗಳು ಅಬ್ಬರಿಸುತ್ತಿದ್ದಾರೆ. ಗುಜರಾತಿ ಮೂಲದ ಕಿರಣ್ ಮಜುಂದಾರ್, ಕೊಂಕಣಿ ಮೂಲದ ಮೋಹನ್ ದಾಸ್ ಪೈ ಎಂಬ ಉದ್ಯಮಿಗಳ ಗೊಡ್ಡು ಬೆದರಿಕೆಗೆ ಹೆದರಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಯನ್ನು ಜಾರಿ ಮಾಡುವ ಕಾರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಡೆ ಹಿಡಿದರು. ಕನ್ನಡಿಗರಿಗೆ ಉದ್ಯೋಗ ಕೊಡುವುದಾದರೆ ಇಲ್ಲಿ ಬದುಕಿ, ಇಲ್ಲದಿದ್ದಲ್ಲಿ ಕರ್ನಾಟಕ ಬಿಟ್ಟು ತೊಲಗಿ ಎಂದು ಇಂಥ ಕನ್ನಡ ದ್ರೋಹಿಗಳಿಗೆ ಸಿದ್ದರಾಮಯ್ಯನವರು ಹೇಳಬೇಕಿತ್ತು ಎಂದು ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಿಕೆಶಿ – ತೇಜಸ್ವಿ ಸೂರ್ಯ ಕಚ್ಚಾಟದಲ್ಲಿ ಬೆಂಗಳೂರಿಗಿಲ್ಲ ಲಾಭ!

ಪ್ರತಿದಿನ ಸಾವಿರಾರು ಮಂದಿ ಬೆಂಗಳೂರಿಗೆ ಉತ್ತರ ಭಾರತದಿಂದ ವಲಸೆ ಬರುತ್ತಿದ್ದಾರೆ, ಕರ್ನಾಟಕದ ಇತರ ನಗರಗಳಿಗೂ ಇದೇ ರೀತಿ ವಲಸೆ ನಡೆಯುತ್ತಿದೆ. ಕರ್ನಾಟಕವನ್ನು ಈ ಆಡಳಿತ ವ್ಯವಸ್ಥೆ ಏನು ಮಾಡಲು ಹೊರಟಿದೆ ? ಹೊರಗಿಂದ ಬಂದವರು ಈಗ ನಮ್ಮನ್ನೇ ಅಲ್ಪಸಂಖ್ಯಾತರು ಎಂದು ಹೇಳುತ್ತಿದ್ದಾರೆ. ಇದನ್ನು ನೋಡಿ ಸಹಿಸಿಕೊಂಡು ಇರಬೇಕಾ ಎಂದು ಪ್ರಶ್ನಿಸಿದ ಅವರು, ಕನ್ನಡಿಗರ ಇಂದಿನ ಅತಂತ್ರ ಸ್ಥಿತಿಗೆ ನಮ್ಮನ್ನು ಆಳುತ್ತಿರುವ ಜನ ನಾಯಕರೇ ಕಾರಣ, ಅವರಿಗೆ ಕನ್ನಡ ಅಭಿಮಾನವಿಲ್ಲ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷರಾದ ಡಾ. ಆರ್. ಅರುಣಾಚಲಂ, ಸುರೇಶ್, ಪಾಲನಹಳ್ಳಿ ಮಠದ ಸ್ವಾಮೀಜಿ ಸೇರಿದಂತೆ ಕರವೇ ಮುಖಂಡರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...