ಅನರ್ಹರಿಗೆ ಸಿಗುತ್ತಿರುವ ಬಿಪಿಎಲ್ ಕಾರ್ಡ್; ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬಿಪಿಎಲ್ ಕಾರ್ಡ್‌ಗಳು ಅನರ್ಹರಿಗೆ ಸಿಗುತ್ತಿರುವ ಬಗ್ಗೆ ಎಚ್ಚರ ವಹಿಸಬೇಕು. ಬಳ್ಳಾರಿ, ಯಾದಗಿರಿ, ಹಾವೇರಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚಿದೆ. ಅರ್ಹರು ಬಿಟ್ಟು ಹೋಗಬಾರದು, ಅನರ್ಹರು ಸೇರಬಾರದು ಎಂಬ ಎಚ್ಚರಿಕೆ ಸದಾ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯಡಿ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿಯ ದುರುಪಯೋಗಕ್ಕೆ ಬಿಪಿಎಲ್ ಕಾರ್ಡ್‌ಗಳು ಶೇ 90ಕ್ಕಿಂತ ಹೆಚ್ಚಾಗಿರುವುದನ್ನು ಪರಿಶೀಲಿಸಬೇಕು. ಮೂರನೇ ಪಕ್ಷದ ಸಂಸ್ಥೆಗಳಿಂದ ಪರಿಶೀಲನೆ ನಡೆಯಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದೇವದಾಸಿ ಪದ್ಧತಿ ನಿಷೇಧ, ನಡೆದದ್ದು ಗಮನಕ್ಕೆ ಬಂದರೆ ಕಾನೂನು ಕ್ರಮಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿಯ ದುರುಪಯೋಗ ತಡೆಯಿರಿ. ಸಾರ್ವಜನಿಕರು ಮಾರುಕಟ್ಟೆಯಲ್ಲಿ ಮಾರಿಕೊಳ್ಳುವ ಬಗ್ಗೆ ದೂರುಗಳು ಬರುತ್ತಿವೆ. ಇದರ ದುರುಪಯೋಗ ತಡೆಯಲು ಪರ್ಯಾಯವಾಗಿ ಬೇಳೆ, ಎಣ್ಣೆ ಕೊಡಬಹುದಾ ಪರಿಶೀಲಿಸಿ” ಎಂದು ಸಿಎಂ ಸೂಚಿಸಿದರು.

ಜೊತೆಗೆ ರಾಷ್ಟ್ರೀಯ ಹೆದ್ದಾರಿ NH66 ಕಾಮಗಾರಿ 2016ರಿಂದಲೂ ಅಪೂರ್ಣವಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. “ಕಳೆದ ಒಂಬತ್ತು ವರ್ಷಗಳಿಂದ ಕಾಮಗಾರಿ ಮುಗಿಯದಿರುವುದನ್ನು ಒಪ್ಪಲು ಸಾಧ್ಯವಿಲ್ಲ. ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಶೀಘ್ರ ಮುಗಿಸಬೇಕು” ಎಂದು ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

“ಯುವ ನಿಧಿ ಕಾರ್ಯಕ್ರಮದ ಉದ್ದೇಶ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬೇಕು ಎನ್ನುವುದು. ಒಬ್ಬ ಪದವೀಧರನಿಗೆ ಗರಿಷ್ಠ ಎರಡು ವರ್ಷಗಳ ಕಾಲ ನಿರುದ್ಯೋಗ ಭತ್ಯೆ ಸಿಗುತ್ತಿದೆ.‌ ಅವರ ಕೌಶಲ್ಯಕ್ಕೆ ತಕ್ಕಂತೆ ತರಬೇತಿ ನೀಡಿ ಉದ್ಯೋಗ ಸಿಗಲು ಅವಕಾಶವಾಗುವಂತೆ ಕ್ರಮ ವಹಿಸಬೇಕು” ಎಂದರು.

“ಅಕ್ಕ ಕೆಫೆಗಳಿಗೆ ಎಲ್ಲೆಲ್ಲಿ ಜಾಗ ನೀಡಲಾಗಿದೆ ಅಲ್ಲಿ ಕೆಫೆಗಳು ಕಾರ್ಯಾರಂಭ ಮಾಡಬೇಕು” ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

“ಹಿಂದೆಲ್ಲ ಡೈರಿ ಬರೆಯುವ ರೂಢಿ ಇತ್ತು. ಎಷ್ಟು ಜನ ಅಧಿಕಾರಿಗಳಿಗೆ ಡೈರಿ ಬರೆಯುವ ಅಭ್ಯಾಸ ಇದೆ” ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಡೈರಿ ಬರೆಯುವುದು ಉತ್ತಮ ಅಭ್ಯಾಸವಾಗಿದ್ದು ಅದನ್ನು ರೂಢಿಸಿಕೊಳ್ಳಿ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...