ತೆರಿಗೆ ಹಂಚಿಕೆಗೆ ಅಸಮಾಧಾನ; ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಡಿ ಕೆ ಸುರೇಶ್

Date:

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಪಾವತಿಸುವ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವಾ ಪ್ರತ್ಯೇಕ ದಕ್ಷಿಣ ಭಾರತದ ಕೂಗು ಸಹ ಅಗಾಗ ಕೇಳಿಬರುತ್ತದೆ. ಆದರೆ ಈಗ ಈ ವಿಷಯವಾಗಿ ಸಂಸದ ಡಿ ಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ರಾಜ್ಯದ ಹಣ ನಮಗೇ ಹಂಚಿಕೆಯಾಗಬೇಕಾದರೆ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ. ದಕ್ಷಿಣ ಭಾರತದಲ್ಲಿ ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಇದಕ್ಕೂ ಮುನ್ನ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ಹಣವನ್ನು ದಕ್ಷಿಣ ಭಾರತಕ್ಕೆ ಖರ್ಚು ಮಾಡಬೇಕು. ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂಬುದಾಗಿ ತಿಳಿಸಿದರು.

ಡಿ ಕೆ ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸೋದರರು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್,  ಸುರೇಶ್ ಅವರು ಹೇಳಿರುವುದು ಜನರ ಅಭಿಪ್ರಾಯವಾಗಿದೆ. ನಾನು ಅಖಂಡ ಭಾರತದ ಪರ. ಅವರು ಜನರ ಅಭಿಪ್ರಾಯ ತಿಳಿಸಿದ್ದಾರೆ. ನಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಜನರು ಭಾವಿಸಿದ್ದಾರೆ.ಇಡೀ ದೇಶ ಒಂದಾಗಿದ್ದರೂ ಜನರಿಗೆ ಅನ್ಯಾಯವಾಗುತ್ತಲೇ ಇದೆ. ಅದನ್ನೇ ಸುರೇಶ್ ಹೇಳಿದ್ದಾರೆ. ಭಾರತ ಒಟ್ಟಾಗಿ ಒಂದಾಗಿರಬೇಕು.ನಾವೆಲ್ಲರೂ ಒಂದು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ನಾವು ಒಂದು. ಪ್ರತಿ ಗ್ರಾಮಕ್ಕೂ ನ್ಯಾಯ ಒದಗಿಸಬೇಕಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...