ಒಳಮೀಸಲಾತಿ ಸಮೀಕ್ಷೆ | ‘ಕೊರಮ’ ಅಥವಾ ‘ಕೊರಚ’ ಎಂದು ನಮೂದಿಸಲು ಎಚ್.ಟಿ.ಜಯಣ್ಣ ಮನವಿ

Date:

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ಕೊರಮ ಮತ್ತು ಕೊರಚ ಜನಾಂಗದವರು ಜಾತಿ ಕಾಲಂನಲ್ಲಿ ಕಡ್ಡಾಯವಾಗಿ ‘ಕೊರಮ’ ಅಥವಾ ‘ಕೊರಚ’ ಎಂದಷ್ಟೇ ನಮೂದಿಸಬೇಕು ಎಂದು ನುಲಿಯ ಚಂದಯ್ಯ ಕೊರಮ ಕೊರಚ ಜನಾಂಗದ ಸೇವಾ ಸಂಘದ ರಾಜ್ಯಾಧ್ಯಕ್ಷ ಎಚ್.ಟಿ.ಜಯಣ್ಣ ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಮ್ಮ ವಿವರವನ್ನು ನೀಡಬೇಕು. ಜಾತಿ ಕಾಲಂನಲ್ಲಿ ಕಡ್ಡಾಯವಾಗಿ ‘ಕೊರಮ’ ಅಥವಾ ‘ಕೊರಚ’ ಎಂದಷ್ಟೇ ನಮೂದಿಸಬೇಕು. ಜಾತಿಯ ಮುಂದೆ ಬೇರೆ ಯಾವುದೇ ಉಪ ಕಸಬನ್ನು ಸೇರಿಸಬಾರದು ಎಂದರು.

ರಾಜ್ಯದಲ್ಲಿ ಕೊರಮ ಮತ್ತು ಕೊರಚ ಸಮುದಾಯ ಸುಮಾರು 15 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಹೋಗುವ ಮತ್ತು ಅನಕ್ಷರಸ್ಥರಾಗಿರುವ ಕೊರಮ ಮತ್ತು ಕೊರಚ ಸಮುದಾಯದ ಸಮೀಕ್ಷೆ ನಡೆಸಿ ನಿಖರ ಮಾಹಿತಿ ಪಡೆಯಲು ಸರ್ಕಾರ ನಿಗದಿ ಪಡಿಸಿದ ಅವಧಿ ಸಾಕಾಗದು. ಮೇ 17ರ ವರೆಗೆ ಇರುವ ಈ ಸಮೀಕ್ಷಾ ಅವಧಿಯನ್ನು ಕನಿಷ್ಠ ಒಂದು ತಿಂಗಳು ಮುಂದೂಡಬೇಕು ಎಂದು ಅವರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮೀಕ್ಷೆ ನಡೆಸಲು ಮನೆ ಮನೆ ಬರುತ್ತಿರುವ ಸಿಬ್ಬಂದಿಯಲ್ಲೂ ತರಬೇತಿಯ ಕೊರತೆ ಕಾಣುತ್ತಿದೆ. ಮೊಬೈಲ್ ಆಪ್ ಮೂಲಕ ಮಾಹಿತಿ ತುಂಬಿಸಬೇಕಾಗಿದೆ. ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ನಿರ್ಧಿಷ್ಟ ಗುರಿ ಸಾಧಿಸಲು ಸಿಬ್ಬಂದಿಯಿಂದ ಸಾಧ್ಯವಾಗುತ್ತಿಲ್ಲ. ಹಾಗಾಗಿ ಸಿಬ್ಬಂದಿಗೆ ಹೆಚ್ಚಿನ ತರಬೇತಿ ನೀಡುವುದರ ಜೊತೆ ಸಮೀಕ್ಷಾ ಅವಧಿಯನ್ನು ವಿಸ್ತರಿಸಬೇಕು ಎಂದು ಅವರು ಮನವಿ ಮಾಡಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಹರೀಶ್ ಕುಮಾರ್ ಮಾತನಾಡಿ, ಈ ಸಮೀಕ್ಷೆ ಕೊರಮ, ಕೊರಚ ಸಮುದಾಯದ ಭವಿಷ್ಯದ ಮೀಸಲಾತಿ ಹಕ್ಕುಗಳು ಹಾಗೂ ಅಭಿವೃದ್ಧಿಗೆ ಬುನಾದಿಯಾಗಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷ ಎಸ್.ವೆಂಕಟೇಶ್, ಕಾರ್ಯಕಾರಿಣಿ ಸಮಿತಿ ಸದಸ್ಯ ಚಿಕ್ಕಮಗಳೂರಿನ ಹೋರಿ ತಿಮ್ಮನಹಳ್ಳಿಯ ಶ್ರೀನಿವಾಸ್, ಚಿಕ್ಕಮಗಳೂರು ಜಿಲ್ಲಾ ಅಲೆಮಾರಿ ಅನುಷ್ಠಾನ ಸಮಿತಿ ಸದಸ್ಯ ಮಲ್ಲಿದೇವಿಹಳ್ಳಿ ಶ್ರೀನಿವಾಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...