ದಲಿತ ಮಹಿಳೆಯರಿಗೆ ಅವಮಾನ: ಶಾಸಕ ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ ಮಹಿಳಾ ಮುನ್ನಡೆ ಆಗ್ರಹ

Date:

‘ನಾಡಹಬ್ಬ ದಸರಾದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲು ಬಾನು ಮುಷ್ತಾಕ್‌ಗೆ ಮಾತ್ರವಲ್ಲ, ಯಾವ ದಲಿತ ಮಹಿಳೆಯರಿಗೂ ಅವಕಾಶವಿಲ್ಲ’ ಎಂದು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ದಲಿತ ಮಹಿಳೆಯರಿಗೆ ಅವಮಾನ ಮಾಡಿ, ಅಸ್ಪೃಶ್ಯತೆ ಆಚರಿಸಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮುನ್ನಡೆ ಆಗ್ರಹಿಸಿದೆ.

ಶನಿವಾರ ಮಹಿಳಾ ಮುನ್ನಡೆಯ ರಾಜ್ಯ ಸಮಿತಿ ಸದಸ್ಯೆ ಪವಿತ್ರಾ ಪತ್ರಿಕಾ ಹೇಳಿಕೆ ನೀಡಿದ್ದು, ನಮ್ಮ ಭಾರತದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶಗಳನ್ನು ನೀಡಬೇಕು ಎಂದು ಹೇಳುತ್ತದೆ. ಜವಾಬ್ದಾರಿಯುತ ಶಾಸಕ ಸ್ಥಾನದಲ್ಲಿರುವ ಯತ್ನಾಳ್ ಸಂವಿಧಾನದ ಮೂಲ ಆಶಯಗಳಿಗೆ ತದ್ವಿರುದ್ಧವಾಗಿ ಹೇಳಿಕೆಗಳನ್ನು ನೀಡುತ್ತಾ, ನಾಡಿನ ಜನತೆಯಲ್ಲಿ ಅಸ್ಪೃಶ್ಯತೆ, ಕೋಮುವಾದ, ವಿಷ ಬೀಜವನ್ನು ಬಿತ್ತುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದಾ ಮಹಿಳೆಯರ ಬಗ್ಗೆ ಅಗೌರವದಿಂದಲೇ ಹೇಳಿಕೆ ನೀಡುವ ಇಂತಹ ಶಾಸಕರಿಗೆ ಸರಕಾರ ಮತ್ತು ನ್ಯಾಯಾಲಯ ತಕ್ಕ ಪಾಠ ಕಲಿಸಬೇಕು. ಜಾತಿ, ಧರ್ಮಗಳ ನಡುವೆ ಸೌಹಾರ್ದ ಭಾವನೆಯನ್ನು ಉತ್ತೇಜಿಸುವ ಬದಲಿಗೆ, ಕೋಮುದ್ವೇಷವನ್ನು ಬಿತ್ತುವುದೇ ಆದ್ಯತೆಯನ್ನಾಗಿಸಿಕೊಂಡಿದ್ದಾನೆ. ಇಂತಹ ಮನುಸ್ಮೃತಿ ಮನಸ್ಥಿತಿಯುಳ್ಳ ಯತ್ನಾಳ ಜನಪ್ರತಿನಿಧಿಯಾಗಲು ಯೋಗ್ಯನಲ್ಲ ಎಂದು ಅವರು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೆಎಂಎಫ್‌ ಉತ್ಪನ್ನಗಳ ಮೇಲಿನ ದರ ಇಳಿಕೆ, ಹಾಲು & ಮೊಸರಿನ ದರ ಯಥಾಸ್ಥಿತಿ: ಬಿ. ಶಿವಸ್ವಾಮಿ

ದಮನಿತ ಸಮುದಾಯದ ಬಗ್ಗೆ ಮತ್ತು ಮಹಿಳೆಯರ ಬಗ್ಗೆ ಕೀಳು ಮಾನೋಭಾವ ಹೊಂದಿರುವ ಯತ್ನಾಳ್‌ರನ್ನು ಕೂಡಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಮತ್ತು ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು ಮಾಡಬೇಕು. ದಲಿತ ಸಮುದಾಯದ ಮಹಿಳೆರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಮಹಿಳಾ ಮುನ್ನಡೆ ಸಂಘಟನೆಯ ಪವಿತ್ರಾ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...