ನಾರಾಯಣಮೂರ್ತಿಯನ್ನು ಹೀಯಾಳಿಸುವುದು ಮೂರ್ಖತನ: ಯತ್ನಾಳ್‌ ಕಿಡಿ

Date:

  • ‘ರಾಜಕೀಯ ಅಜೆಂಡಾವನ್ನು ವಿಸ್ತರಿಸಲು ತೆಗಳುವುದು ಸರಿಯಲ್ಲ’
  • ‘ಇನ್ಫೋಸಿಸ್ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿ ಮಾಡುತ್ತದೆ’

ಜನರಿಗೆ ಉಚಿತಗಳನ್ನು ಸುಮ್ಮನೆ ಕೊಟ್ಟರೆ ಸಮಾಜಕ್ಕೆ ಮಾರಕ ಎಂದು ಹೇಳಿಕೆ ನೀಡಿ ಪರೋಕ್ಷವಾಗಿ ‘ಗ್ಯಾರಂಟಿ’ ಯೋಜನೆಗಳನ್ನು ಟೀಕಿಸಿದ್ದ ಇನ್ಫೋಸಿಸ್​​ ಮುಖ್ಯಸ್ಥ ನಾರಾಯಣಮೂರ್ತಿ ಮಾತಿಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

ಕಾಂಗ್ರೆಸ್‌ನ ಕೆಲವು ಸಚಿವರಿಂದ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ನಾರಾಯಣಮೂರ್ತಿ ಮಾತುಗಳನ್ನು ಕಟುವಾಗಿ ಟೀಕಿಸಲಾಗುತ್ತಿದೆ. ಈ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾರಾಯಣಮೂರ್ತಿ ಪರ ನಿಂತು ಹೇಳಿಕೆ ನೀಡಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ, “ಸೈದ್ಧಾಂತಿಕ, ವೈಚಾರಿಕ ಭಿನ್ನಾಭಿಪ್ರಾಯಗಳನ್ನು ಬಿಟ್ಟು ದೇಶವನ್ನು ಕಟ್ಟುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿರುವ ನಾರಾಯಣಮೂರ್ತಿಗಳನ್ನು ನಿಮ್ಮ ರಾಜಕೀಯ ಅಜೆಂಡಾವನ್ನು ವಿಸ್ತರಿಸಲು ತೆಗಳುವುದು, ಹೀಯಾಳಿಸುವುದು ಮೂರ್ಖತನ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕವಿದೆಯೇ?

“ಇನ್ಫೋಸಿಸ್ ದೇಶಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿ ಮಾಡುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಕೇವಲ ರಾಜಕಾರಣಿಗಳಿಗೆ ಸೀಮಿತವಲ್ಲ, ಅದು ಎಲ್ಲರಿಗೂ ಇರುವ ಹಕ್ಕು” ಎಂದು ಹೇಳಿದ್ದಾರೆ.

“ನಾರಾಯಣಮೂರ್ತಿಗಳು ದೇಶದ ಹಾಗೂ ಕರ್ನಾಟಕದ ಹೆಮ್ಮೆ. ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸಿದ ದಿಗ್ಗಜರು. ಐಟಿ ಕ್ಷೇತ್ರದಲ್ಲಿ ಆತ್ಮನಿರ್ಭರತೆಯನ್ನು ಸಾಧಿಸಲು 80 ರ ದಶಕದಲ್ಲೇ ಯಾವುದೇ ಸರ್ಕಾರದ ಯೋಜನೆಯ ಸಹಾಯ ಪಡೆಯದೇ, ಸ್ವತಂತ್ರವಾಗಿ ಇನ್ಫೋಸಿಸ್ ಎಂಬ ದೈತ್ಯ ಸಂಸ್ಥೆಯನ್ನು ಪ್ರಾರಂಭಿಸಿದ ಅದ್ಭುತ ಸಾಹಸಿ” ಎಂದು ಬಣ್ಣಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...