ಸಮಗ್ರ ಕೃಷಿ ಪದ್ಧತಿ ವ್ಯವಸಾಯದ ಜೀವಾಳ: ಸಿದ್ದರಾಮಯ್ಯ

Date:

ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ಇಲಾಖೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಲಾಗಿದ್ದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮಂ”ಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು, ಮಂಡ್ಯ ಮೈಸೂರು ಚಾಮರಾಜನಗರ ಕೊಡಗು ಭಾಗದ ರೈತರಿಗಾಗಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಅಗತ್ಯವಿದೆ ಎಂದು ನನಗೂ ಸಹ ತಿಳಿಯಿತು. ನಂತರ ಸದರಿ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಎಲ್ಲಾ ಸಚಿವರ ಒಪ್ಪಿಗೆ ಪಡೆದು ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಡ್ಯ ಭಾಗದ 5 ಜಿಲ್ಲೆಗಳ ಪ್ರಮುಖ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ಕೃಷಿ ಮೇಳದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನವನ್ನು ತಮ್ಮಲ್ಲಿಗೆ ಇಟ್ಟುಕೊಂಡರೆ ಪ್ರಯೋಜನವಿಲ್ಲ ಅದನ್ನು ರೈತರಿಗೆ ತಲುಪಿಸಬೇಕು ಆಗ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಭಾರತ ಕೃಷಿ ಪ್ರಧಾನ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆ ಇಳಿಮುಖವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಮಂಡ್ಯ ಕೃಷಿ ಪ್ರಧಾನವಾದ ಜಿಲ್ಲೆ ನಾನು ರಾಜಕೀಯಕ್ಕೆ ಬರುವ ಮೊದಲು ಸಹ ಕೃಷಿಕನಾಗಿದ್ದೆ. ಮೈಸೂರಿನ ರೈತ ಸಂಘದ ಮೊದಲ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಕೃಷಿಯನ್ನು ವೈಜ್ಞಾನಿಕ ವಿಧಾನದಲ್ಲಿ ಮಾಡಿದಾಗ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದು. ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ತನೆ ಮಾಡಬೇಕು” ಎಂದು ಹೇಳಿದರು.

ಅಂತಾರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿ ಸ್ಥಾಪನೆಗೆ ಬೇಡಿಕೆ

“ಮಂಡ್ಯ ವಿಜ್ಞಾನಿಗಳ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿದ್ದಾರೆ ಸದರಿಯ ಸ್ನಾತಕೋತರ ಪದವಿಯನ್ನು ತೆರೆಯಲು ಪ್ರಯತ್ನ ಪಡುತ್ತೇನೆ. ಕೃಷಿಯ ಕುರಿತಾಗಿ ನನಗೆ ಅಪಾರವಾದ ಕಾಳಜಿ ಇದೆ ನಮ್ಮ ದೇಶದ ಜಿಡಿಪಿಗೆ ಕೃಷಿ ವಲಯ ಹೆಚ್ಚು ಶ್ರಮಿಸುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...