Breaking | ಒಳಮೀಸಲಾತಿ ಕುರಿತ ಆ.16ರ ವಿಶೇಷ ಸಂಪುಟ ಸಭೆ ಮಂಗಳವಾರಕ್ಕೆ ಮುಂದೂಡಿಕೆ

Date:

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವರದಿ ಬಗ್ಗೆ ತೀರ್ಮಾನ ಕೈಗೊಳ್ಳಲು ಕರೆಯಲಾಗಿದ್ದ ಆ.16ರ ವಿಶೇಷ ಸಂಪುಟ ಸಭೆಯನ್ನು ಸರ್ಕಾರ ಮುಂದೂಡಿದೆ.

ಒಳಮೀಸಲಾತಿ ಬಗ್ಗೆ ಆ.16ಕ್ಕೆ ವಿಶೇಷ ಸಂಪುಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದರು. ಈಗ ಮುಖ್ಯಮಂತ್ರಿ ಅವರ ಮಾಧ್ಯಮ ನಿರ್ವಾಹಕರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸಚಿವ ಸಂಪುಟದ ವಿಶೇಷ ಸಭೆಯನ್ನು ಮಂಗಳವಾರ ಸಂಜೆ ಐದು ಗಂಟೆಗೆ ಮುಂದೂಡಲಾಗಿದೆ” ಎಂದು ತಿಳಿಸಿದ್ದಾರೆ.

“ಒಳಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ಆಯೋಗ ವರದಿಯನ್ನು ಸಲ್ಲಿಸಿದ್ದಾರೆ.‌ ಶ್ರಮವಹಿಸಿ ಕಡಿಮೆ ಸಮಯದಲ್ಲಿ ವೈಜ್ಞಾನಿಕವಾಗಿರುವ ಅಧ್ಯಯನವನ್ನು ಮಾಡಲಾಗಿದೆ. ಶೇ.92 ರಷ್ಟು ಎಸ್​ಸಿ ಸಮುದಾಯದವರನ್ನು ಸಮೀಕ್ಷೆ ಮಾಡಲಾಗಿದೆ. ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಸ್ವೀಕರಿಸಲಾಗಿದೆ. ಈ ವರದಿಯನ್ನು ಎಲ್ಲಾ ಸಚಿವರಿಗೆ ಅಧ್ಯಯನ ಮಾಡಲು ನೀಡಲಾಗಿದೆ. ಈ ಬಗ್ಗೆ ಆ.16ರಂದು ವಿಶೇಷ ಸಂಪುಟ ಸಭೆ ಕರೆದಿದ್ದು, ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಎಚ್‌ ಕೆ ಪಾಟೀಲ್‌ ಹಿಂದೆ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...