ಒಳಮೀಸಲಾತಿ | ಆಯೋಗದ ಮಧ್ಯಂತರ ವರದಿ ಗುರುವಾರ ಸರ್ಕಾರಕ್ಕೆ ಸಲ್ಲಿಕೆ

Date:

ಒಳಮೀಸಲಾತಿ ವಿಚಾರ ತಾರ್ಕಿಕ ಅಂತ್ಯದ ಕಡೆ ಸಾಗುವಂತೆ ಕಾಣುತ್ತಿದೆ. ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ಗುರುವಾರ (ಮಾ.27) ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಿದೆ.

ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರದ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ನವೆಂಬರ್ ತಿಂಗಳಿನಲ್ಲಿಯೇ ರಚಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಆಯೋಗಕ್ಕೆ ಹೊಣೆ ನಿಗದಿಪಡಿಸಲಾಗಿತ್ತು. ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ದ ಒಳ ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಆಯೋಗ ವರದಿ ನೀಡುತ್ತಿದೆ.

ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ (ಉಪ ವರ್ಗೀಕರಣ)ಜಾರಿ ಕುರಿತು ಹೋರಾಟ ಆರಂಭವಾಗಿ ಸುಮಾರು ಮೂರು ದಶಕಗಳೇ ಸಂದಿವೆ. ಆದರೂ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ರಾಜ್ಯದಲ್ಲೂ ಒಳಮೀಸಲಾತಿ ಜಾರಿ ಮಾಡುವುದಾಗಿ ಸರ್ಕಾರ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಎಡಗೈ-ಬಲಗೈ ಎಂಬ ಅಪಸ್ವರ ಎತ್ತದೆ ಎಲ್ಲರೂ ಒಕ್ಕೊರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಪರಿಶಿಷ್ಟ ಸಮುದಾಯದ ಸಚಿವರು, ಶಾಸಕರು ನಿರ್ಧರಿಸಿದ್ದಾರೆ. ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ನಿವಾಸದಲ್ಲಿ ಪರಿಶಿಷ್ಟ ಸಮುದಾಯದ ಸಚಿವರು, ಶಾಸಕರು ಹಾಗೂ ಕೆಲವು ಮುಖಂಡರು ದೀರ್ಘ ಸಮಾಲೋಚನೆ ನಡೆಸಿ ಒಂದು ತೀರ್ಮಾನಕ್ಕೆ ಬಂದಿದ್ದಾರೆ.

ಹಾಗೆಯೇ ಗೃಹ ಸಚಿವ ಜಿ. ಪರಮೇಶ್ವರ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ, ಶಾಸಕರಾದ ಪ್ರಸಾದ್ ಅಬ್ಬಯ್ಯ, ದರ್ಶನ್ ಧ್ರುವನಾರಾಯಣ, ಎನ್. ಶ್ರೀನಿವಾಸ, ವಿಧಾನ ಪರಿಷತ್‌ ಸದಸ್ಯ ಎಚ್.ಪಿ. ಸುಧಾಮ್ ದಾಸ್, ಡಾ.ಡಿ. ತಿಮ್ಮಯ್ಯ ಮುಂತಾದವರು ಸೇರಿ ಈಗಾಗಲೇ ಸಭೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...