ಒಳಮೀಸಲಾತಿ | ಸರ್ಕಾರದ ಪರ ವಾದಿಸಲು ಉದಯ್ ಹೊಳ್ಳ ನೇಮಕ

Date:

ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿ ಒಳಮೀಸಲಾತಿ ಹೋರಾಟಗಾರರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಹೈಕೋರ್ಟ್‌ನಲ್ಲಿ ಸರ್ಕಾರವು ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಈ ಹಿಂದೆ, ಬಿಜೆಪಿ ಸರ್ಕಾರದಲ್ಲಿ ಅಕ್ಟೋಕೇಟ್ ಜನರಲ್ ಆಗಿದ್ದ ಹಿರಿಯ ವಕೀಲ ಉದಯ್ ಹೊಳ್ಳ ಅವರನ್ನು ನೇಮಕ ಮಾಡಿದೆ.

ರಾಜ್ಯದಲ್ಲಿ ಪರಿಶಿಷ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಲ್ಲಿ ಎಲ್ಲ ಸಮುದಾಯಗಳಿಗೆ ಸರಿಯಾಗಿ ಅವಕಾಶಗಳು ದೊರೆಯಬೇಕೆಂದರೆ ಒಳಮೀಸಲಾತಿ ಜಾರಿಯಾಗಬೇಕೆಂದು ಕಳೆದು 30 ವರ್ಷಗಳಿಂದ ಹೋರಾಟಗಳು ನಡೆದಿದ್ದವು. ಸುದೀರ್ಘ ಹೋರಾಟಕ್ಕೆ ಮಣಿದ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೆ ತಂದಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ‘ಎ, ಬಿ, ಸಿ’ ಪ್ರವರ್ಗಗಳಾಗಿ ಎಸ್‌ಸಿ ಸಮುದಾಯಗಳನ್ನು ವರ್ಗಿಕರಿಸಿದೆ. ಆದಾಗ್ಯೂ, ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಿದೆ.

ಅಲೆಮಾರಿ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿ, ಈ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ಹಂಚಿಕೆ ಮಾಡಲು ನಿರ್ದೇಶಿಸುವಂತೆ ಕೋರಿ ‘ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಒಕ್ಕೂಟ’ ಮತ್ತು ಇತರರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ದೆಹಲಿಯವರೆಗೆ ಹೋಗಿ ಹೋರಾಟ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: RSS- ದೇಶಭಕ್ತರ ಸಂಘಟನೆಯೇ! ಯಶವಂತ್ ಶಿಂದೆ ಅಫಿಡವಿಟ್ ಹೇಳುತ್ತಿರುವುದೇನು?

ಅಲೆಮಾರಿಗೆ ಅನ್ಯಾಯ ಆಗಿದೆ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಆದರೆ, ಸರ್ಕಾರವು ಅಲೆಮಾರಿ ಸಮುದಾಯವನ್ನು ಬಲಗೈ ಸಮುದಾಯಗಳೊಂದಿಗೆ ಸೇರಿಸಿರುವ ತನ್ನ ಧೋರಣೆಯನ್ನು ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ, ಉದಯ್ ಹೊಳ್ಳ ಅವರನ್ನು ವಿಶೇಷ ನ್ಯಾಯವಾದಿಯಾಗಿ ನೇಮಿಸಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...