ಒಳಮೀಸಲಾತಿ: ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆ

Date:

ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ನೇಮಕಾತಿ ಆದೇಶಕ್ಕೆ ತಡೆ ನೀಡಿದೆ. ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ಕೋರ್ಟ್ ಮೆಟ್ಟಿಲೇರಿದ್ದವು.

ಪರಿಶಿಷ್ಟ ಜಾತಿಗಳನ್ನು ಉಪವರ್ಗೀಕರಿಸಿ ಒಳಮೀಸಲಾತಿ ಕಲ್ಪಿಸಿ ಸರ್ಕಾರ ಹೊರಡಿಸಿದ್ದ 25.08.2025ರ ಆದೇಶವನ್ನು ಕರ್ನಾಟಕ ಅಸ್ಪೃಶ್ಯ ಅಲೆಮಾರಿಗಳ ಮಹಾ ಒಕ್ಕೂಟ ಮತ್ತು ಇತರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಇದನ್ನೂ ಓದಿರಿ: ಬಾಬಾಸಾಹೇಬರನ್ನು ‘ಮಹಾರ್’ ಜಾತಿಗಷ್ಟೇ ಸೀಮಿತ ಮಾಡುತ್ತಿದ್ದಾರೆ: ಪ್ರೊ. ಪೋತೆ ಬೇಸರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ 16.10.2025 ರಂದು ವಾದ ಆಲಿಸಿದ ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ನೀಡಿ ನೇಮಕಾತಿ ಆದೇಶ ಮಾಡದಂತೆ ಮಧ್ಯಂತರ ಆದೇಶ ಹೊರಡಿಸಿದೆ. ನೇಮಕಾತಿ ‌ಪ್ರಕ್ರಿಯೆ ಮಾಡಬಹುದಾದರೂ ನೇಮಕಾತಿ ಆದೇಶ ಹೊರಡಿಸುವಂತಿಲ್ಲ ಎಂದು ಹೇಳಿರುವ ನ್ಯಾಯಾಲಯವು ಸರ್ಕಾರಕ್ಕೆ ತಕರಾರು ಸಲ್ಲಿಸಲು ಕಾಲಾವಕಾಶ ಕಲ್ಪಿಸಿ ವಿಚಾರಣೆಯನ್ನು ದಿನಾಂಕ ನವೆಂಬರ್ 13ಕ್ಕೆ ಮುಂದೂಡಿದೆ.

ಒಳಮೀಸಲಾತಿ ಜಾರಿಗಾಗಿ ಜಸ್ಟಿಸ್ ಎಚ್.ಎನ್.ನಾಗಮೋಹನ ದಾಸ್ ಆಯೋಗ ನೀಡಿದ್ದ ವರದಿಯನ್ನು ಸರ್ಕಾರ ಪರಿಷ್ಕರಿಸಿತ್ತು. ಐದು ವಿಭಾಗಗಳನ್ನಾಗಿ ಮಾಡಿದ್ದ ಆಯೋಗ, ಅಲೆಮಾರಿಗಳನ್ನು ‘ಪ್ರವರ್ಗ ಎ’ನಲ್ಲಿ ಇಟ್ಟು ಶೇ.1ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿತ್ತು. ಆದರೆ ಸರ್ಕಾರ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಮೂರು ವರ್ಗಗಳನ್ನಾಗಿ ವರ್ಗೀಕರಿಸಿ, ಸ್ಪೃಶ್ಯ ಜಾತಿಗಳ ಗುಂಪಿನೊಂದಿಗೆ ಅಲೆಮಾರಿಗಳನ್ನು ವಿಲೀನ ಮಾಡಿ, ‘ಪ್ರವರ್ಗ ಸಿ’ ಅಡಿ ಶೇ.5ರಷ್ಟು ಮೀಸಲಾತಿ ನೀಡಿತ್ತು. “ಬಲಾಢ್ಯರೊಂದಿಗೆ ತಮ್ಮನ್ನು ಸೇರಿಸಿರುವುದರಿಂದ ಅನ್ಯಾಯವಾಗಿದೆ, ನಮ್ಮ ಅನ್ನದ ಬಟ್ಟಲನ್ನು ಸರ್ಕಾರ ಕಿತ್ತುಕೊಂಡಿದೆ” ಎಂದು ಅಲೆಮಾರಿಗಳು ಸಂಕಟ ವ್ಯಕ್ತಪಡಿಸಿದ್ದರು. ನಿರಂತರ ಹೋರಾಟ ಮಾಡಿದರೂ ಸರ್ಕಾರ ನಿರ್ಲಕ್ಷ್ಯ ತಾಳಿದ್ದರಿಂದ ಕೋರ್ಟ್ ಕದ ತಟ್ಟಿದ್ದರು. ಮತ್ತೊಂದೆಡೆ ದೆಹಲಿಗೂ ತೆರಳಿ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತರುವ ಪ್ರಯತ್ನವನ್ನು ಅಲೆಮಾರಿಗಳು ಮಾಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...