ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

Date:

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ. ಆದರೆ, ಒಳಮೀಸಲಾತಿ ವಿಚಾರದಲ್ಲಿ ಅವರು ನುಡಿದಂತೆ ನಡೆದಿಲ್ಲ. ಯಾರು ಅವರನ್ನು ತಡೆದಿದ್ದಾರೆ? ಸರ್ಕಾರವು 56,000 ಹುದ್ದೆಗಳನ್ನು ಭರ್ತಿಮಾಡಲು ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದರು.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. “ದೇಶಾದ್ಯಂತ 35 ಕೋಟಿಗೂ ಹೆಚ್ಚು ಮಂದಿ ಎಸ್‌ಸಿ/ಎಸ್‌ಟಿ ಸಮುದಾಯದ ಜನರಿದ್ದೇವೆ. ಎಲ್ಲ ಸಮುದಾಯಗಳು ಮತ್ತು ಒಳ ಪಂಗಡಗಳಿಗೂ ಸಮಾನ ಅವಕಾಶ ಸಿಗಬೇಕೆಂದು ಹೋರಾಟಗಳು ನಡೆದಿವೆ. ಒಳಮೀಸಲಾತಿಗಾಗಿ ಸದಾಶಿವ ಆಯೋಗದ ಶಿಫಾರಸುಗಳನ್ನು ಕಾಂಗ್ರೆಸ್‌ ಸರ್ಕಾರ ಕಡೆಗಣಿಸಿತು. ನಾಗಮೋಹನ್ ದಾಸ್ ನೇತೃತ್ವದಲ್ಲಿ ಹೊಸ ಆಯೋಗ ರಚಿಸಿತು. ಈಗ, ದಾಸ್‌ ಆಯೋಗದ ಶಿಫಾರಸುಗಳನ್ನೂ ಕಡೆಗಣಿಸಿ, ಒಳಮೀಸಲಾತಿ ಹಂಚಿಕೆ ಮಾಡಲಾಗಿದೆ. ಆದರೂ, ಜಾರಿಗೊಳಿಸಲು ಹಿಂದೇಟು ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಹೈಕಮಾಂಡ್‌ ದಲಿತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತೇವೆಂದು ಕಾಂಗ್ರೆಸ್‌ ಹೈಕಮಾಂಡ್‌ ನಿರಂತರವಾಗಿ ಹೇಳಿಕೊಂಡು ಬಂದಿದೆ. ಆದರೆ, ನಿರಂತರವಾಗಿ ಎಸ್‌ಸಿ/ಎಸ್‌ಟಿ ಸಮುದಾಯವನ್ನು ವಂಚಿಸಿದೆ. ಒಳಮೀಸಲಾತಿ ಜಾರಿಮಾಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ, ಸಮುದಾಯವನ್ನು ವಂಚಿಸುತ್ತಿದೆ. ಫೆಬ್ರವರಿ 27ರ ನಂತರ ಸಚಿವ ಸಂಪುಟ ಸಭೆಯನ್ನೇ ನಡೆಸದೆ, ಮುಂದೂಡಲಾಗಿದೆ. ಈಗ, ಈ ತಿಂಗಳ ಕೊನೆಗೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇದು ಅನ್ಯಾಯ. ಸರ್ಕಾರವು ಎಚ್ಚೆತ್ತುಕೊಂಡು ಒಳಮೀಸಲಾತಿ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ನೇಮಕಾತಿಯ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...