ಕಸಾಪದಲ್ಲಿ ಅಕ್ರಮ ಪ್ರಕರಣ: ಮಹೇಶ್‌ ಜೋಶಿಗೆ ಹೈಕೋರ್ಟ್ ನೋಟಿಸ್

Date:

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಆಡಳಿತಾಧಿಕಾರಿ ಜಾರಿ ಮಾಡಿರುವ ಶೋಕಾಸ್ ನೋಟಿಸ್‌ಗೆ ಮಾರ್ಚ್ 2ರೊಳಗೆ ಉತ್ತರಿಸುವಂತೆ ಕಸಾಪ ಮಾಜಿ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ಅಲ್ಲದೆ, ಈ ಪ್ರಕರಣದಲ್ಲಿ ಮಹೇಶ್ ಜೋಶಿ ಅವರ ವಿರುದ್ಧ ತಳೆಯುವ ಯಾವುದೇ ದಂಡನೀಯ ನಿಲುವನ್ನು (ಕ್ರಮವನ್ನು) ಮುಂದಿನ ವಿಚಾರಣೆಯವರೆಗೆ ಜಾರಿಗೊಳಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ.

ಕಸಾಪ ಅಕ್ರಮಗಳಿಗೆ ಸಂಬಂಧಿಸಿದಂತೆ ಆಡಳಿತಾಧಿಕಾರಿ ನೀಡಿರುವ ಶೋಕಾಸ್ ನೋಟಿಸ್ ಅನ್ನು ಪ್ರಶ್ನಿಸಿ ಮಹೇಶ್ ಜೋಶಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪ್ರೀಮಿಯಂ ಲೇಖನ | ಜಾಗತಿಕ ಆರ್ಥಿಕತೆಯ ಅವಳಿ ಅಸ್ತ್ರಗಳು: ಐಎಂಎಫ್, ವಿಶ್ವಬ್ಯಾಂಕ್‌ನ ಒಳಹೊರಗು

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, “ಶೋಕಾಸ್ ನೋಟಿಸ್‌ಗೆ ಪ್ರತಿಕ್ರಿಯೆ ಸಲ್ಲಿಸುವ ಕಾಲಾವಧಿ ಈಗಾಗಲೇ ಮುಕ್ತಾಯಗೊಂಡಿದ್ದರೂ, ಅರ್ಜಿದಾರರಿಗೆ ತಮ್ಮ ಉತ್ತರ ಸಲ್ಲಿಸಲು ಸಕಾರಣವಾದ ಕಾಲಾವಕಾಶ ಒದಗಿಸಬೇಕಿದೆ. ಹೀಗಾಗಿ ಮಾರ್ಚ್ 2ರ ಒಳಗೆ ಜೋಶಿ ಅವರು ನೋಟಿಸ್‌ಗೆ ಉತ್ತರಿಸಬೇಕು. ಎಲ್ಲಾ ವಿಚಾರಗಳನ್ನು ಪರಿಗಣಿಸಲಾಗಿದ್ದು, ಮುಂದಿನ ವಿಚಾರಣೆಯವರೆಗೆ ಜೋಶಿ ವಿರುದ್ಧ ಕೈಗೊಳ್ಳುವ ಕ್ರಮವನ್ನು ಜಾರಿಗೊಳಿಸಕೂಡದು” ಎಂದು ಸರ್ಕಾರಕ್ಕೆ ನಿರ್ದೇಶಿಸಿತು.

“ಮೇಲ್ನೋಟಕ್ಕೆ, ಆಡಳಿತಾಧಿಕಾರಿಗೆ ಶೋಕಾಸ್ ನೋಟಿಸ್ ನೀಡುವ ಅಧಿಕಾರ ವ್ಯಾಪ್ತಿ ಇದೆಯೇ ಎಂಬುದನ್ನು ಸಮರ್ಥಿಸಿದ್ದಾರೆಯೇ ಎಂಬ ಪ್ರಶ್ನೆ ಇದೆ. ಈ ಕುರಿತು ಪಕ್ಷಕಾರರ ವಾದ ಆಲಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು” ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...