ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ತುರ್ತು ವರದಿಗೆ ಬೆಂಗಳೂರು ವಿವಿಗೆ ಹೈಕೋರ್ಟ್‌ ನೋಟಿಸ್‌

Date:

ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಹಲವು ಅಕ್ರಮಗಳು ನಡೆದಿದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್ ಅಕ್ರಮಗಳ ಬಗ್ಗೆ ತುರ್ತಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ನೋಟಿಸ್‌ ಜಾರಿಗೊಳಿಸಿದೆ.

ಅಧಿಸೂಚಿಸಲಾದ ಕೆಎಲ್ಇ ಮತ್ತು ಕೆಂಗೇರಿಯ ಶೇಷಾದ್ರಿಪುರಂ ಅಕಾಡೆಮಿ ಕಾಲೇಜುಗಳಲ್ಲಿ ಜೂನ್‌ 16, 2023ರಂದು ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಯಾಗಲಿ ಅಥವಾ ಪ್ರವೇಶ ಪತ್ರವನ್ನು ಪರಿಶೀಲಿಸದೆ ಪರೀಕ್ಷೆಯನ್ನು ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಕೆಲವು ವಿದ್ಯಾರ್ಥಿಗಳು ಮೊಬೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದು, ಮೊಬೈಲ್ ಮೂಲಕ ರಾಜಾರೋಷವಾಗಿ ಉತ್ತರಗಳನ್ನು ಹುಡುಕಿಕೊಂಡು ಬರೆದಿದ್ದರು.

ಅಕ್ರಮ ಪರೀಕ್ಷೆಗೆ ಸಂಬಂಧಿಸಿದಂತೆ ವಿವಿ ಕುಲಪತಿ, ಮೌಲ್ಯಮಾಪನ ಕುಲಸಚಿವರು, ಪಿಹೆಚ್‌ಡಿ ಪರೀಕ್ಷೆಯ ವಿಶೇಷ ಅಧಿಕಾರಿಗಳಿಗೆ ಪರೀಕ್ಷೆ ರದ್ದುಗೊಳಿಸುವಂತೆ ಅರ್ಜಿದಾರರ ನೇತೃತ್ವದಲ್ಲಿ ವಿದ್ಯಾರ್ಥಿಗಳು ದೂರು ಸಲ್ಲಿಸಿದ್ದರು. ಆದರೆ ವಿವಿಯು ದೂರಿನ ಯಾವುದೇ ಮನವಿ ಪರಿಗಣಿಸದೆ ತರಾತುರಿಯಲ್ಲಿ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿತ್ತು. ತಾತ್ಕಾಲಿಕ ಕೀ ಉತ್ತರಗಳಲ್ಲಿ ಹಲವು ಲೋಪದೋಷಗಳಿರುವ ಕಾರಣ ಪ್ರಕಟಿಸಿದ ಕೀ ಉತ್ತರಗಳನ್ನು ಸರಿಪಡಿಸುವ ನೆಪದಲ್ಲಿ ಮತ್ತೊಂದು ಬಾರಿ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಆಕ್ಷೇಪಣೆಗಳಿಗೆ ಕೇವಲ ಒಂದೇ ದಿನ ಅವಕಾಶವನ್ನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ತನಿಖೆ ಮತ್ತು ಮರು ಪರೀಕ್ಷೆ ನಡೆಸುವಂತೆ ಅರ್ಜಿದಾರರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಅಜ್ಜ-ಅಜ್ಜಿ: ನೆನಪುಗಳು’ | ಕುತೂಹಲಕಾರಿ ಸಂಗತಿಗಳನ್ನು ಅರಹುವ ಆಕರ ಗ್ರಂಥ

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಅಶೋಕ್ ಎಸ್ ಕಿನಗಿ ಅವರ ನೇತೃತ್ವದ ಪೀಠ ವಿಶ್ವವಿದ್ಯಾಲಯಕ್ಕೆ ತಕ್ಷಣವೇ ತುರ್ತು ನೋಟಿಸ್ ಜಾರಿ ಮಾಡಿದೆ.

ಪರೀಕ್ಷೆ ಅಕ್ರಮದ ಬಗ್ಗೆ ನೊಂದ ವಿದ್ಯಾರ್ಥಿಗಳು ಈ ಮೊದಲು ಜುಲೈನಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಆಗಸ್ಟ್‌ನಲ್ಲಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌ ಕುಲಾಧಿಪತಿ, ಕುಲಪತಿ, ಮೌಲ್ಯಮಾಪನ ಕುಲಸಚಿವರು, ವಿಶೇಷ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಿ ಒಂದು ವಾರದೊಳಗೆ ಉತ್ತರವನ್ನು ನೀಡಬೇಕೆಂದು ಆದೇಶಿಸಿತ್ತು.

ನೊಂದ ವಿದ್ಯಾರ್ಥಿಗಳೆಲ್ಲರೂ ವಿವಿ ವಿರುದ್ಧ ಮತ್ತೆ ಹೊಸದಾಗಿ ರಿಟ್ ಅರ್ಜಿಯನ್ನು ಸಲ್ಲಿಸಿ, ಪಿಹೆಚ್‌ಡಿ ಕೌನ್ಸಿಲಿಂಗ್‌ಗೆ ತಡೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೆ.23 ರಂದು ಪುನಃ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಚಾರಣೆ ಅಂತಿಮವಾಗಿ ತೀರ್ಪು ಹೊರಬರುವವರೆಗೂ ನ್ಯಾಯಾಲಯದ ಆದೇಶಕ್ಕೆ ಬದ್ಧರಾಗಿರುವಂತೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...