ತಾಯಿ, ಸಹೋದರಿಯರ ಹೆಸರು ಹಿಡಿದು ತುಚ್ಛವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ: ಪ್ರಿಯಾಂಕ್ ಖರ್ಗೆ ಪ್ರಶ್ನೆ

Date:

ಆರ್‌ಎಸ್‌ಎಸ್‌ ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ. ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ತನಗೆ ಬರುತ್ತಿರುವ ನಿರಂತರ ಬೆದರಿಕೆ ಕರೆಗಳೇ ಸಾಕ್ಷಿ ಎಂದಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅದಕ್ಕೊಂದು ಸಣ್ಣ ಉದಾಹರಣೆ ಎಂದು ವ್ಯಕ್ತಿಯೊಬ್ಬ ಕರೆ ಮಾಡಿ ನಿಂದಿಸಿರುವುದನ್ನು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣ ‘ಎಕ್ಸ್’ನ ತನ್ನ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ನಿರಂತರವಾಗಿ ಬೆದರಿಕೆ ಮತ್ತು ನಿಂದನೆಯ ಕರೆಗಳು ಬರುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ, ವಿ.ಸುನೀಲ್ ಕುಮಾರ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ. ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, ಆರ್‌ಎಸ್‌ಎಸ್‌ ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ಧರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ ಎಂದು ಪ್ರಿಯಾಂಕ್ ಹೇಳಿದ್ದಾರೆ.

ಆರ್‌ಎಸ್‌ಎಸ್‌ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ ಎಂದಿರುವ ಪ್ರಿಯಾಂಕ್ ಖರ್ಗೆ, ಮುಗ್ಧ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ ಎಂದು ಹೇಳಿದ್ದಾರೆ.

ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ಧಾತಿಕ ರಾಜಕಾರಣ, ಮುಗ್ಧ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದವರು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...