ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರೆಯುವುದು ಗಾಂಧಿ ತತ್ವವೇ?: ಬೊಮ್ಮಾಯಿ ಪ್ರಶ್ನೆ

Date:

  • ‘ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ: ಬೊಮ್ಮಾಯಿ’
  • ‘ಮಾತಲ್ಲಿ ಮಾತ್ರ ಗಾಂಧಿ, ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸ’

ಈಗಿನ ಸರ್ಕಾರ ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ ನೀತಿ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವುದು. ಸಿಕ್ಕಲ್ಲೆಲ್ಲಾ ಮದ್ಯದಂಗಡಿ ಶುರು ಮಾಡಿದ್ದಾರೆ. ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರಯುತ್ತಿದ್ದಾರೆ. ಹೇಳಲು ಮಾತ್ರ ಗಾಂಧಿ, ಶಾಂತಿ ಮಂತ್ರ ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸಗಳು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗಾಂಧಿ ಕಂಡ ಕನಸು ಕರ್ನಾಟಕದಲ್ಲಿ ನನಸು’ ಎಂಬ ಸರ್ಕಾರ ಜಾಹೀರಾತು ನೀಡಿರುವ ಕುರಿತು ಕೇಳಿದ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ” ಎಂದರು.

“ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆ ನಡೆದಿದೆ. ಇಂತಹ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ ಕ್ರಮ ತೆಗೆದುಕೊಂಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗ್ರಾಮಗಳ ಉದ್ಧಾರ ಕುರಿತು ಸರಳ, ವೈಜ್ಞಾನಿಕ ಆರ್ಥಿಕ ನೀತಿ ಕೊಟ್ಟವರು ಗಾಂಧಿ: ಸಿದ್ದರಾಮಯ್ಯ

“ಶಿವಮೊಗ್ಗದ ಮೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂತ ಘಟನೆ ನಡೆಯುತ್ತದೆ. ಇಂತ ಸ್ಟೇಷನ್‌ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿ ಹಾಕಬೇಕು. ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ. ಇದರಿಂದ ಸಮಾಜಘಾತಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆ” ಎಂದರು.

“ಪ್ರತಿ ಡಿಸ್ಟಿಕ್‌ನಲ್ಲಿ ಕ್ಲಬ್, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ಇದನ್ನ ಸಮಗ್ರವಾಗಿ ನಿಭಾಯಿಸಬೇಕು. ಶಾಂತಿ ಕಾಪಾಡಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು. ಅಧಿಕಾರಿಗಳನ್ನು ಯಾವುದೇ ಮುಲಾಜಿಲ್ಲದೆ ಟ್ರಾನ್ಸ್‌ಫರ್ ಮಾಡಿದರೆ ಇಂತಹ ಘಟನೆ ನಿಲ್ಲುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...