ವಿಜಯೇಂದ್ರ ಬಗ್ಗೆ ಆರೋಪ ಮಾಡಿದ್ದ ಸಿದ್ದರಾಮಯ್ಯ ದೊಡ್ಡ ಪ್ರಾಮಾಣಿಕರಾ : ಕುಮಾರಸ್ವಾಮಿ ಪ್ರಶ್ನೆ

Date:

  • ಯತೀಂದ್ರ ಅವರಿಗೆ ಕಾಲ್‌ ಮಾಡಿ ಮಾತನಾಡಿರುವ ಸಂಗತಿ ಯಾವುದು?
  • ಸಿಎಂಗೆ ಯತೀಂದ್ರ ಅವರ ವಿಡಿಯೋಗಿಂತ ದೊಡ್ಡ ಸಾಕ್ಷಿ ಬೇಕಾ?

ಸಿಎಂ ಸಿದ್ದರಾಮಯ್ಯ ಅವರು ದೊಡ್ಡ ಪ್ರಾಮಾಣಿಕರಲ್ವಾ? ತಾವು ಯತೀಂದ್ರ ಅವರಿಗೆ ಕಾಲ್‌ ಮಾಡಿ ಮಾತನಾಡಿರುವ ಸಂಗತಿ ಯಾವುದು? ಆ ಮಹಾದೇವ ಅಧಿಕಾರಿ ಯಾರು? ನಾನು ಹೇಳಿದ್ದು ಅಷ್ಟೇ ಮಾಡಿ ಎನ್ನುವ ಯತೀಂದ್ರ ಅವರ ವಿಡಿಯೋಗಿಂತ ದೊಡ್ಡ ಸಾಕ್ಷಿ ಬೇಕಾ? ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

ಯತೀಂದ್ರ ಅವರು ಫೋನ್‌ ಕಾಲ್‌ ವಿಡಿಯೋ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಈ ಸರ್ಕಾರ ರಚನೆ ಆದಾಗಿನಿಂದ ಹಲವಾರು ವಿಚಾರ ಪ್ರಸ್ತಾಪ ಮಾಡಿದ್ದೇನೆ. ಕುಮಾರಸ್ವಾಮಿ ಹತಾಶೆಯಿಂದ ಮಾತನಾಡುತ್ತಿದ್ದಾನೆ ಎಂದು ಲಘುವಾಗಿ ಪ್ರತಿಕ್ರಿಯಿಸಿದರು. ಈಗ ಏನು ಹೇಳಬೇಕು?” ಎಂದರು.

ಇದೇ ಸಿದ್ದರಾಮಯ್ಯನವರು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಒಂದು ಹೇಳಿಕೆ ನೀಡಿದ್ದರು. ಯಡಿಯೂರಪ್ಪ ಸರ್ಕಾರದಲ್ಲಿ ವಿಜಯೇಂದ್ರ ಅವರದೇ ಅಧಿಕಾರ. ಯಡಿಯೂರಪ್ಪ ಅವರು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಚೆಕ್‌ ನಲ್ಲಿ ಹಣ ತೆಗೆದುಕೊಳ್ಳುತ್ತಿದ್ದರು. ಆದರೆ ವಿಜಯೇಂದ್ರ ಆರ್‌ಟಿಜಿಎಸ್‌ ನಲ್ಲಿ ಹಣ ತೆಗೆದುಕೊಳ್ಳುತ್ತಿದಾರೆ. ಅನ್‌ಅಫೀಶಿಯಲಿ ವಿಜಯೇಂದ್ರ ಅವರೇ ಸಿಎಂ ಆಗಿದ್ದಾರೆ ಎಂದಿದ್ದರು. ಈಗ ಯತೀಂದ್ರ ಏನು ಆಗಿದ್ದಾರೆ. ದೊಡ್ಡ ಪ್ರಾಮಾಣಿಕರಂತೆ ಸಿದ್ದರಾಮಯ್ಯ ಪೋಸು ಕೊಡುತ್ತಾರೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ನಾನು ಹೇಳಿದವರಷ್ಟನ್ನೇ ಮಾಡಿ’ ಎನ್ನುವ ವ್ಯಕ್ತಿ ಸಿಎಂ ಮಗನೋ ಅಥವಾ ಸೂಪರ್ ಸಿಎಮ್ಮೋ?: ಎಚ್‌ಡಿಕೆ ಕಿಡಿ

ಕೆರೆಗಳನ್ನು ನುಂಗಿಹಾಕಿದವರಿಂದ ನಾನು ಪಾಠ ಕಲಿಯುವ ಅಗತ್ಯವಿಲ್ಲ. ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್‌ನ ಮಹಾನ್‌ ನಾಯಕರು ನನ್ನ ವಿರುದ್ಧ ಆರೋಪ ಮಾಡಿದರು. ನಮ್ಮ ಕಚೇರಿ ಮುಂದೆ ಪೋಸ್ಟರ್‌ ಹಂಚಿದರು. ಕಾಂಗ್ರೆಸ್‌ಗೆ ಇದು ಚಾಳಿ ಆಗಿದೆ. ಹಿಂದಿನ ಸರ್ಕಾರದ ವಿರುದ್ಧ ಪೇ ಸಿಎಂ ಅಂತ ಹಿಂದೆ ಪೋಸ್ಟರ್‌ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ಒಳ್ಳೆ ನೀರನ್ನು ತೆಗೆದುಕೊಳ್ಳುವುದಿಲ್ಲ. ಚರಂಡಿ ನೀರನ್ನೇ ತೆಗೆದುಕೊಳ್ಳುವುದು. ಈ ಮಾತನ್ನು ಅವರದ್ದೇ ಪಕ್ಷದ ಕೆ ಎನ್‌ ರಾಜಣ್ಣ ಹೇಳಿದ್ದಾರೆ ಎಂದು ಜೆಡಿಎಸ್‌ ನಾಯಕರ ಕಾಂಗ್ರೆಸ್‌ ಸೇರ್ಪಡೆಗೆ ಲೇವಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...