ರಾಜ್ಯಾದ್ಯಂತ ಜನತಾ ದರ್ಶನ; 6,684 ಅರ್ಜಿಗಳ ಸ್ವೀಕಾರ

Date:

ಎರಡು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ಏಕಕಾಲದಲ್ಲಿ ನಡೆದ ಜನತಾ ದರ್ಶನದಲ್ಲಿ ಸಂಜೆ 6.30 ರವರೆಗೆ 6,684 ದೂರುಗಳು ಮತ್ತು ಕುಂದುಕೊರತೆಗಳ ಕುರಿತ ಅರ್ಜಿಗಳನ್ನು ಸ್ವೀಕರಿಸಿರುವುದು ತಿಳಿದುಬಂದಿದೆ.

ಆಯಾ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನತಾ ದರ್ಶನದಲ್ಲಿ ಶಾಸಕರು, ಸಂಸದರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

“ರಾಜ್ಯಾದ್ಯಂತ ಸಂಜೆ 6.30 ರವರೆಗೆ 6,684 ದೂರುಗಳು ಮತ್ತು ಕುಂದುಕೊರತೆಗಳನ್ನು ಸ್ವೀಕರಿಸಲಾಗಿದ್ದು, 21 ಸಮಸ್ಯೆಗಳ ಕುರಿತು ಸ್ಥಳದಲ್ಲೇ ಪರಿಹರಿಸಲಾಗಿದೆ. ಉಳಿದ 6,663 ಅರ್ಜಿಗಳನ್ನು ನೋಂದಾಯಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗಿದೆ” ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಅಂದರೆ 2,100 ದೂರುಗಳು ದಾಖಲಾಗಿವೆ. ಆರ್‌ಡಿಪಿಆರ್ ಇಲಾಖೆಗೆ 1,000 ಕ್ಕೂ ಅಧಿಕ ದೂರುಗಳು ಬಂದಿವೆ. ಹೆಚ್ಚಿನ ದೂರುಗಳನ್ನು ಆಯಾ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಸಲ್ಲಿಸಲಾಗಿದ್ದರೆ, ಕೆಲವು ದೂರುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ, ಕೆಲವೇ ದೂರುಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಜನತಾ ದರ್ಶನ ಕಾರ್ಯಕ್ರಮದಿಂದ ಸಾರ್ವಜನಿಕರ ಸಮಸ್ಯೆಗಳು ನಿವಾರಿಸಲು ಸಾಧ್ಯ: ಸಚಿವ ಈಶ್ವರ ಖಂಡ್ರೆ

ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು 774 ದೂರುಗಳು ದಾಖಲಾಗಿದ್ದು, ಕೋಲಾರದಲ್ಲಿ 432 ದೂರುಗಳು ದಾಖಲಾಗಿವೆ.
ಹಾವೇರಿ ಜಿಲ್ಲೆಯಲ್ಲಿ ಬೆಳೆಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಸಾವಿರಾರು ಅರ್ಜಿಗಳು ಬಂದಿವೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...