ಜನಿವಾರ ವಿವಾದ | ರಾಜ್ಯ ಸರ್ಕಾರ ಮತ್ತು ಕೆಇಎಗೆ ಹೈಕೋರ್ಟ್ ನೋಟಿಸ್

Date:

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ‘ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಜಿಲ್ಲೆ ಜಿಲ್ಲೆಯಲ್ಲೂ ಬ್ರಾಹ್ಮಣ ಸಮುದಾಯ ಪ್ರತಿಭಟನೆಗೆ ಮುಂದಾಗಿತ್ತು. ಶಿವಮೊಗ್ಗ, ಬೀದರ್​, ಧಾರವಾಡ, ಸಾಗರದಲ್ಲಿ ಜನಿವಾರ ತೆಗೆಸಿದನ್ನು ವಿರೋಧಿಸಿ ಪ್ರತಿಭಟನೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಈ ಸಂಬಂಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಸ್.ಶ್ರೀರಂಗ ಅವರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ ನಿರ್ವಾಹಕ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...