ಉದ್ಯೋಗ ಮಾಹಿತಿ | ಉಡುಪಿಯಲ್ಲಿ ಕೇಂದ್ರ ಸರ್ಕಾರಿ ಕೆಲಸಕ್ಕೆ ಅರ್ಜಿ ಆಹ್ವಾನ

Date:

ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಉಡುಪಿಯ ಮಲ್ಪೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್’ (UCSL) ಕಂಪನಿಯಲ್ಲಿ ಶಾಶ್ವತ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಮಲ್ಪೆಯ ಯುಸಿಎಸ್‌ಎಲ್‌ನಲ್ಲಿ ಖಾಲಿ ಇರುವ 2 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
1. ವ್ಯವಸ್ಥಾಪಕ (ಯೋಜನೆ ಮತ್ತು ವ್ಯವಹಾರ ಅಭಿವೃದ್ಧಿ) – 1 ಹುದ್ದೆ,
2. ಉಪ ವ್ಯವಸ್ಥಾಪಕ (ಇಲೆಕ್ಟ್ರಿಕಲ್ ಡಿಸೈನ್) – 1 ಹುದ್ದೆ ಖಾಲಿ ಇದ್ದು ಅರ್ಹರು ಅರ್ಜಿ ಸಲ್ಲಿಸಬಹುದು.
ವ್ಯವಸ್ಥಾಪಕ ಹುದ್ದೆಯು ಸಾಮಾನ್ಯ ವರ್ಗಕ್ಕೆ ನೀಡಲಾಗಿದ್ದು, ಯಾರು ಬೇಕಿದ್ದರೂ ಅರ್ಜಿ ಸಲ್ಲಿಸಬಹುದು, ಉಪ ವ್ಯವಸ್ಥಾಪಕ ಹುದ್ದೆಯನ್ನು OBC ವರ್ಗಕ್ಕೆ ಮೀಸಲಾತಿ ನೀಡಲಾಗಿದ್ದು, ಒಬಿಸಿ ಸಮುದಾಯದವರು ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಸಲು ಆಗಸ್ಟ್‌ 14 ಕಡೆಯ ದಿನವಾಗಿದೆ. https://udupicsl.com ಅಥವಾ www.cochinshipyard.inನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಹತೆ: ವ್ಯವಸ್ಥಾಪಕ ಹೆದ್ದೆಗೆ; ಮೆಕಾನಿಕಲ್, ಎಲೆಕ್ಟ್ರಿಕಲ್, ನಾವಲ್ ಆರ್ಕಿಟೆಕ್ಚರ್ ಅಥವಾ ಮೆರೈನ್ ಇಂಜಿನಿಯರಿಂಗ್‌ನಲ್ಲಿ ಕನಿಷ್ಟ 60% ಅಂಕಗಳೊಂದಿಗೆ ಪದವಿ.
ಉಪ ವ್ಯವಸ್ಥಾಪಕಗೆ; ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಅಥವಾ ಎಲೆಕ್ಟ್ರಿಕಲ್ & ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪದವಿ.

ಅನುಭವ: ವ್ಯವಸ್ಥಾಪಕ: 9 ವರ್ಷಗಳ ಅನುಭವ, ಮತ್ತು ಉಪ ವ್ಯವಸ್ಥಾಪಕ: 7 ವರ್ಷಗಳ ಅನುಭವ
ಎರಡೂ ಹುದ್ದೆಗಳಿಗೆ ಕಡ್ಡಾಯವಾಗಿ ಶಿಪ್ ಬಿಲ್ಡಿಂಗ್, ಶಿಪ್ ರಿಪೇರ್, ಮೆರೈನ್ ಅಥವಾ ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಅನುಭವ ಹೊಂದಿರಬೇಕು.

ವಯೋಮಿತಿ: ವ್ಯವಸ್ಥಾಪಕ: ಗರಿಷ್ಠ 40 ವರ್ಷ, ಉಪ ವ್ಯವಸ್ಥಾಪಕ: ಗರಿಷ್ಠ 35 ವರ್ಷ
ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಮಾಜಿ ಸೈನಿಕರಿಗೆ ಗರಿಷ್ಠ 10 ವರ್ಷ

ಅರ್ಜಿ ಶುಲ್ಕ: ಸಾಮಾನ್ಯ/OBC ಅಭ್ಯರ್ಥಿಗಳಿಗೆ ₹1000 (ಅಪರಿಹಾರ್ಯ), SC/ST ಅಭ್ಯರ್ಥಿಗಳಿಗೆ ಶುಲ್ಕವಿಲ್ಲ

ಆಯ್ಕೆ ವಿಧಾನ: ಅರ್ಹ ಅಭ್ಯರ್ಥಿಗಳಿಗೆ PowerPoint Presentation (30 ಅಂಕ), ಕೆಲಸದ ಅನುಭವ (40 ಅಂಕ), ಗುಂಪು ಚರ್ಚೆ (10 ಅಂಕ), ಮತ್ತು ಸಂದರ್ಶನ (20 ಅಂಕ) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...