‘ನನ್ನಿಂದ ತಪ್ಪಾಗಿದೆ…’: ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಸನ್ಮಾನಿಸಿದ್ದಕ್ಕೆ ಜಸ್ಟಿಸ್ ಸಂತೋಷ್ ಹೆಗ್ಡೆ ವಿಷಾದ

Date:

ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹಿಂದುತ್ವವಾದಿ ಕೋಮು ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಸನ್ಮಾನ ಮಾಡಿದ್ದಾರೆ. ಕಾರ್ಯಕ್ರಮದ ಬಳಿಕ ಪ್ರತಿಕ್ರಿಯಿಸಿರುವ ಅವರು, ‘ಯಾರಿಗೆ ಸನ್ಮಾನ ಅಂತ ನನಗೆ ಗೊತ್ತಿರಲಿಲ್ಲ. ನಾನು ಆ ಕಾರ್ಯಕ್ರಮಕ್ಕೆ ಹೋಗಬಾರದಿತ್ತು. ಒಳ್ಳೆಯ ಸಂಘಟನೆ ಅಂತ ಹೋಗಿದ್ದೆ’ ಎಂದು ಹೇಳಿದ್ದಾರೆ. ನನ್ನಿಂದ ತಪ್ಪಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

‘ದಿ ನ್ಯೂಸ್‌ ಪೇಪರ್ ಅಸೋಷಿಯೇಷನ್ ಆಫ್ ಕರ್ನಾಟಕ’ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂತೋಷ್‌ ಹೆಗ್ದೆ ಭಾಗವಹಿಸಿದ್ದರು. ಈ ವೇಳೆ, ಸಂತೋಷ್ ಹೆಗ್ಡೆ ಅವರು ಪುನೀತ್ ಕೆರೆಹಳ್ಳಿಗೆ ಶಾಲು ಪೇಟ ತೊಡಿಸಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ್ದರು.

ಸನ್ಮಾನದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪುನೀತ್ ಕೆರೆಹಳ್ಳಿ ಹಂಚಿಕೊಂಡಿದ್ದರು. ಚಿತ್ರವನ್ನು ಗಮನಿಸಿದ ನೆಟ್ಟಿಗರು ಸಂತೋಷ್‌ ಹೆಗ್ಡೆ ಅವರು ಸನ್ಮಾನಿಸಿದ್ದನ್ನು ಪ್ರಶ್ನಿಸಿದ್ದಾರೆ. ‘ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಗೆ ಸನ್ಮಾನ ಮಾಡಿದ್ದೀರೀ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆನ್ನಲ್ಲೇ, ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಸಂತೋಷ್ ಹೆಗ್ಡೆ, “ಕಾರ್ಯಕ್ರಮದ ಕುರಿತು ಸಂಪೂರ್ಣ ಮಾಹಿತಿ ನನಗೆ ಗೊತ್ತಿರಲಿಲ್ಲ. ಅರ್ಥಪೂರ್ಣ ಕಾರ್ಯಕ್ರಮವೆಂದು ಭಾವಿಸಿ ಹೋಗಿದ್ದೆ. ವೇದಿಕೆ ಮೇಲೆ ನಾನೊಬ್ಬನೇ ಪ್ರಶಸ್ತಿ ಕೊಟ್ಟಿಲ್ಲ. ನಾನು ಆ ಕಾರ್ಯಕ್ರಮಕ್ಕೆ ಹೋಗಿದ್ದು ತಪ್ಪು, ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...