ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ ತಪಾಸಣೆ ನಡೆಸಲಾಗುತ್ತಿದೆ
ಇಂದು ಬೆಳಿಗ್ಗೆ ಅನಾಮಧೇಯ ಐಡಿಯಿಂದ ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇಮೇಲ್ ಬಂದಿತ್ತು ಎಂದು ವಿಮಾನ ನಿಲ್ದಾಣ ನಗರ ಪೊಲೀಸ್ ಕಮಿಷನರ್ ಆರ್. ಚೇತನ್ ಪಿಟಿಐಗೆ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ
ಬಾಂಬ್ ಬೆದರಿಕೆ ಇಮೇಲ್ ಬಗ್ಗೆ ಮಾಹಿತಿ ಬಂದ ಕೂಡಲೇ ಬಾಂಬ್ ನಿಷ್ಕ್ರಿಯ ದಳವನ್ನು ಅಲ್ಲಿಗೆ ರವಾನಿಸಲಾಯಿತು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಲಾಯಿತು. ವಿಮಾನ ನಿಲ್ದಾಣದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.





