ಅಗ್ನಿ ದುರಂತ ತಡೆಗೆ ಕ್ರಿಯಾ ಯೋಜನೆ ಸಲ್ಲಿಸಿದ ಕಮಲ್‌ ಪಂತ್

Date:

  • ಹಜ್ ಭವನ ಘಟನೆಯ ಬೆನ್ನಿಗೆ ಸಭೆ ಕರೆದ ಕಂದಾಯ ಸಚಿವರು
  • ಅಗ್ನಿ ದುರಂತ ಬಗ್ಗೆ ಅಗ್ನಿಶಾಮಕ ದಳ ಮುಂಜಾಗ್ರತಾ ವಹಿಸಲು ಕ್ರಮ
  • ಕಳೆದ 20 ದಿನಗಳಲ್ಲಿ ಬೆಂಗಳೂರಿನಲ್ಲೇ ಮೂರು ಅಗ್ನಿ ಅನಾಹುತ

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿದೆ. ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದೆ. ಹೀಗಾಗಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು, ಅಗ್ನಿ ಶಾಮಕದಳವನ್ನೂ ಉನ್ನತೀಕರಣಗೊಳಿಸಬೇಕು ಎಂದು ಸಚಿವ ಕೃಷ್ಣಬೈರೇಗೌಡ ಸೂಚಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ಅವರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಚಿವರು, “ಕಳೆದ 20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ಅಗ್ನಿ ದುರಂತಗಳಿಂದ ಜನರೂ ಭಯಭೀತರಾಗಿದ್ದಾರೆ. ಹೀಗಾಗಿ ನಗರ ಭಾಗಗಳೂ ಸೇರಿದಂತೆ ರಾಜ್ಯಾದ್ಯಂತ ಅಗ್ನಿ ದುರಂತಗಳು ಸಂಭವಿಸಿದಂತೆ ಅಗ್ನಿಶಾಮಕ ದಳ ತಡೆಯುವಂತಾಗಬೇಕು” ಎಂದು ಸಲಹೆ ನೀಡಿದರು.

“ಅತ್ತಿಬೆಲೆ ಪಟಾಕಿ ಗೋದಾಮಿನ ದುರಂತದಲ್ಲಿ ತಮಿಳುನಾಡು ಮೂಲದ ರಾಜೇಶ್, ದಿನೇಶ್, ಸಂತೋಷ್ ಕುಮಾರ್, ನಿತೀಶ್, ವೇದಪ್ಪನ್, ಆದಿಕೇಶವನ್, ವಿಜಯರಾಘವನ್, ಆಕಾಶ್ ರಾಜ್, ಗಿರಿ, ಇಂಬರ್ತಿ, ಮುನಿವೇಲ್, ಪ್ರಕಾಶರಾಜ್, ಆಂಥೋನಿ ಪೌಲಾರಾಜ್ ಸೇರಿ 13 ಕಾರ್ಮಿಕರು ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್ 19 ರಂದು ಕೋರಮಂಗಲದ ಮಡ್‌ಪೈಪ್ ಅನ್ನೋ ರೆಸ್ಟೋಕೆಫೆ ಅಗ್ನಿ ದುರಂತಕ್ಕೆ ಈಡಾಗಿತ್ತು. ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಹಲವರು ಗಾಯಾಳುಗಳಾಗಿದ್ದರು. ಇದರ ಬೆನ್ನಿಗೆ ಕಳೆದ ಶನಿವಾರ ಹಜ್ ಭವನವೂ ಬೆಂಕಿಗೆ ಆಹುತಿಯಾಗಿದ್ದು ಕನಿಷ್ಠ 3 ಕೋಟಿ ನಷ್ಟವಾಗಿದೆ. ಎಂದು ಆತಂಕ ಹೊರಹಾಕಿದ ಸಚಿವರು, ಇಂತಹ ದುರಂತಗಳಿಗೆ ಕಾರಣವೇನು? ಇದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳೇನು? ಎಂಬ ಕುರಿತು ಅಗ್ನಿಶಾಮಕ ದಳ ಚಿಂತನೆ ನಡೆಸಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮತ್ತೊಂದು ಅಗ್ನಿ ಅವಘಡ; 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳಿಗೆ ಬೆಂಕಿ

“ಅಗ್ನಿಶಾಮಕ ದಳದ ಉನ್ನತೀಕರಣಗಳ ಬಗ್ಗೆಯೂ ಗಮನವಹಿಸಬೇಕಿದೆ. ಇದರ ಜೊತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗಲೇ ಅಗ್ನಿದುರಂತ ತಡೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆಯೂ ಪರಿಶೀಲಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಉನ್ನತೀಕರಣ ಹಾಗೂ ಹೊಸ ಅಗ್ನಿಶಾಮಕ ದಳಗಳನ್ನು ಸ್ಥಾಪಿಸುವ ಕುರಿತ ಕ್ರಿಯಾ ಯೋಜನೆ ಮಂಡಿಸಿದ ಅಗ್ನಿಶಾಮಕ ದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್, “ಉಡುಪಿ ಜಿಲ್ಲೆಯ ಮಣಿಪಾಲ್, ದಾವಣಗೆರೆಯ ನ್ಯಾಮತಿ, ವಿಜಯಪುರ ಜಿಲ್ಲೆಯ ನಿಡಗುಂದಿ-ಬಬಲೇಶ್ವರ್, ರಾಯಚೂರಿನ ಮಸ್ಕಿ, ಬೆಳಗಾವಿಯ ಮುದಲಗಿ, ಬಳ್ಳಾರಿಯ ಕಂಪ್ಲಿ ಹಾಗೂ ಕಲಬುರಗಿ ಷಹಾಬಾದ್ ಭಾಗದಲ್ಲಿ ನೂತನ ಅಗ್ನಿಶಾಮಕ ದಳ ಸ್ಥಾಪಿಸುವ ಸಂಬಂಧ ಯೋಜನೆ ಮಂಡಿಸಿದರು.

ಬೆಂಗಳೂರು ಸೇರಿದಂತೆ ನಗರ ಭಾಗದಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ತಡೆಗೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು? ಎಂಬ ಕುರಿತು ಶೀಘ್ರದಲ್ಲೇ ಇಲಾಖೆಗೆ ವರದಿ ನೀಡುವುದಾಗಿಯೂ ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸೇರಿದಂತೆ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...