ಕನ್ನಡಿಗರ ಬೆನ್ನಿಗೆ ಚೂರಿ ಇರಿದ ರೈಲ್ವೆ ಇಲಾಖೆ: ಪ್ರತಿಭಟನೆ ಕರೆ ನೀಡಿದ ಕರವೇ

Date:

ನೈರುತ್ಯ ರೈಲ್ವೆ ಇಲಾಖೆ ಪದೋನ್ನತಿ ಪರೀಕ್ಷೆಗಳಲ್ಲಿ ಕನ್ನಡವನ್ನು ಹೊರಗೆ ಇಡುವ ಮೂಲಕ ಕನ್ನಡಿಗರ ಬೆನ್ನಿಗೆ ಚೂರಿ ಹಾಕಿದೆ. ಇದು ಮೋಸದ, ಅನ್ಯಾಯದ, ನಂಬಿಕೆದ್ರೋಹದ, ಮಹಾವಂಚನೆಯ ನಿರ್ಧಾರವಾಗಿದೆ. ಈ ಕ್ರೂರ ದ್ರೋಹದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನಾಳೆಯಿಂದಲೇ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಿದೆ ಎಂದು ಕರವೇ ರಾಜ್ಯಾಧ್ಯಕ್ಷರು ಟಿ. ಎ. ನಾರಾಯಣಗೌಡ ತಿಳಿಸಿದ್ದಾರೆ.

ಈ ಬಗ್ಗೆ ನಾರಾಯಣಗೌಡ ಅವರು ಪತ್ರಿಕಾ ಹೇಳಿಕೆ ನೀಡಿದ್ದು, “2025ರ ಸೆ.25ರಂದು ಗೂಡ್ಸ್ ಟ್ರೇನ್ ಮ್ಯಾನೇಜರ್ (ಶೇ.60 ಪ್ರಮೋಷನಲ್ ಕೋಟಾ) 194 ಹುದ್ದೆ ಹಾಗೂ 2025ರ ನ.5ರಂದು ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ (Limited departmental compitetive examination) (ಶೇ.15 ಪ್ರಮೋಷನಲ್ ಕೋಟಾ) 101 ಮುಂಬಡ್ತಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಲಾಗಿತ್ತು. ಅಧಿಸೂಚನೆಯ ಪ್ರಕಾರ ಹಿಂದಿ ಮತ್ತು ಇಂಗ್ಲಿಷ್‌ ನಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸಲು ಹೊರಟಿದ್ದ ರೈಲ್ವೆ ಇಲಾಖೆಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕೆಪಿಎಸ್‌ಸಿ ಕರ್ಮಕಾಂಡ | ಮತ್ತೆ ಮರುಪರೀಕ್ಷೆಗೆ ಆಗ್ರಹಿಸಿ ಫೆ.18ರಂದು ಕರವೇ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸಂದರ್ಭದಲ್ಲಿ ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳ ಆಹ್ವಾನದ ಮೇರೆಗೆ ನಾನು ಇಲಾಖೆಯ ಪ್ರಧಾನ ಕಚೇರಿಯಲ್ಲಿ ಸುದೀರ್ಘ ಸಭೆ ನಡೆಸಿದ್ದೆ. ಈ ಸಂದರ್ಭದಲ್ಲಿ ಆಗಿರುವ ತಪ್ಪನ್ನು ಒಪ್ಪಿಕೊಂಡ ಅಧಿಕಾರಿಗಳು ನಿಯಮಾವಳಿಗಳ ಪ್ರಕಾರ ಕನ್ನಡದಲ್ಲೂ ಪರೀಕ್ಷೆ ನಡೆಸುವುದಾಗಿ ಭರವಸೆ ನೀಡಿದ್ದರು. ಪರೀಕ್ಷಾರ್ಥಿಗಳೂ ಸಹ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು” ಎಂದಿದ್ದಾರೆ.

“ಈ ವಿಷಯವನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹಾಗು ಹಿರಿಯ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರ ಗಮನಕ್ಕೂ ತರಲಾಗಿತ್ತು. ಕನ್ನಡಿಗರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಉಭಯ ಸಚಿವರ ಭರವಸೆಯೂ ಸುಳ್ಳಾಗಿದೆ. ಪದೋನ್ನತಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಕನ್ನಡದಲ್ಲಿ ಅಭ್ಯಾಸ ನಡೆಸಿದ್ದ ಕನ್ನಡಿಗ ಉದ್ಯೋಗಿಗಳು ಅತಂತ್ರರಾಗಿದ್ದಾರೆ. ಈ ವಂಚನೆಯನ್ನು ಹೇಗೆ ಸಹಿಸಿಕೊಳ್ಳುವುದು? ನಾಳೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದೇ ಹೋದರೆ ಈ ಕನ್ನಡಿಗ ಉದ್ಯೋಗಿಗಳ ಭವಿಷ್ಯವೇ ಹಾಳಾಗಲಿದೆ. ಇವರಿಗೆ ಆಗುವ ಅನ್ಯಾಯಕ್ಕೆ ಜವಾಬ್ದಾರಿ ಹೊರುವವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಪರೀಕ್ಷೆಗೆ ಕೇವಲ ನಾಲ್ಕು ದಿನಗಳು ಇರುವಂತೆ ನೋಟಿಫಿಕೇಷನ್‌ ಹೊರಡಿಸಲಾಗಿದೆ. ಪರೀಕ್ಷಾರ್ಥಿಗಳು ಯಾವುದೇ ರೀತಿಯ ಮೇಲ್ಮನವಿ ಸಲ್ಲಿಸದಂತೆ ತರಾತುರಿಯಲ್ಲಿ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಇದರ ಹಿಂದೆ ಬಹುದೊಡ್ಡ ಷಡ್ಯಂತ್ರವೇ ಇರುವ ಹಾಗೆ ಕಾಣುತ್ತಿದೆ. ಕಾಣದ ಕೈಗಳು ಕನ್ನಡಿಗ ನೌಕರರ ಬಡ್ತಿಗೆ ಅಡ್ಡಿಯಾಗಿರುವ ಹಾಗೆ ಕಾಣುತ್ತಿದೆ. ಕದ್ದುಮುಚ್ಚಿ ಕುತಂತ್ರ ನಡೆಸುತ್ತಿರುವ ಈ ದ್ರೋಹಿಗಳನ್ನು ಬಯಲಿಗೆಳೆಯುವ ಕಾರ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆ ಮಾಡಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ರೈಲ್ವೆ ಇಲಾಖೆಯಲ್ಲಿರುವ ಉತ್ತರ ಭಾರತೀಯ ಅಧಿಕಾರಿಗಳು ಪದೇ ಪದೇ ಕನ್ನಡಿಗರಿಗೆ ಅನ್ಯಾಯವೆಸಗುತ್ತಾ, ನಮ್ಮ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ. ಕನ್ನಡಿಗರು ಇಂಥ ಅನ್ಯಾಯಗಳ ವಿರುದ್ಧ ಸಿಡಿದೆದ್ದರೆ ಏನಾಗುತ್ತದೆ ಎಂಬುದು ಇವರಿಗೆ ಅರಿವಿಲ್ಲವೇ? ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ಅದಕ್ಕೆ ಈ ಬೇಜವಾಬ್ದಾರಿಯುತ ಅಧಿಕಾರಿಗಳೇ ಕಾರಣರಾಗುತ್ತಾರೆ. ಕರ್ನಾಟಕ ರಕ್ಷಣಾ ವೇದಿಕೆ ಯಾವುದೇ ಕಾರಣಕ್ಕೂ ಈ ಪರೀಕ್ಷೆಗಳನ್ನು ನಡೆಯಲು ಬಿಡುವುದಿಲ್ಲ. ಯಾವುದೇ ಬೆಲೆ ತೆತ್ತಾದರೂ ಕನ್ನಡಿಗರ ಹಕ್ಕುಗಳನ್ನು ರಕ್ಷಿಸುವ ಕಾರ್ಯವನ್ನು ನಾವು ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...