ರಾಜ್ಯಗಳ ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Date:

ರಾಜ್ಯಗಳ ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಗಣರಾಜ್ಯೋತ್ಸವ ಅಂಗವಾಗಿ ಮಾತನಾಡಿದ ಅವರು, ಪ್ರಮುಖವಾಗಿ ಗ್ಯಾರಂಟಿ ಯೋಜನೆ ಸರ್ಕಾರದ ಸಾಧನೆ. ಗ್ಯಾರಂಟಿ ಯೋಜನೆಯ ಹೊರತಾಗಿಯೂ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಯಾವೆಲ್ಲ ಅಭಿವೃದ್ಧಿ ಕೆಲಸ, ಅಭಿವೃದ್ಧಿ ಯೋಜನೆಗಳು ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

2024-25ನೇ ಸಾಲಿನಲ್ಲಿ 18.51 ಲಕ್ಷ ರೈತರಿಗೆ 15,612.24 ಕೋಟಿ ಮೌಲ್ಯದ ಅಲ್ಪಾವಧಿ ಬೆಳೆ ಸಾಲ ನೀಡಲಾಗಿದೆ. 39,439 ರೈತರಿಗೆ 1,165.12 ಕೋಟಿ ಮೌಲ್ಯದ ಮಧ್ಯಮ ಮತ್ತು ದೀರ್ಘಾವಧಿಯ ಕೃಷಿ ಸಾಲ ನೀಡಲಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಕರ್ನಾಟಕ ಆಸ್ತಿ ಸಮೀಕ್ಷೆಗೆ ಡ್ರೋನ್ ಸರ್ವೆ ನಡೆಸಿ ಸ್ವಾಮಿತ್ವ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿದೆ. ಹಾಲು ಉತ್ಪಾದಕರ ಪ್ರೊತ್ಸಾಹ ಯೋಜನೆ ಅಡಿ 8.90 ಲಕ್ಷ ಹಾಲು ಉತ್ಪಾದಕರಿಗೆ 1,124.15 ಕೋಟಿ ಪ್ರೊತ್ಸಾಹ ಧನ ನೀಡಲಾಗಿದೆ. ಮತ್ಸ್ಯ ಯೋಜನೆ ಪರಿಹಾರ ಮೊತ್ತ 1,500 ರಿಂದ 3 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೌಷ್ಟಿಕ ಆಹಾರ ಯೋಜನೆಯಡಿ 12 ಪರಿಶಿಷ್ಟ ಸಮುದಾಯಗಳ 47,859 ಕುಟುಂಬಗಳಿಗೆ 120 ಕೋಟಿ ಪೌಷ್ಟಿಕ ಆಹಾರ ವಿತರಣೆ ಮಾಡಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿ ನೌಕರರು ಅಪಘಾತದಲ್ಲಿ ಮೃತರಾದರೆ ಒಂದು ಕೋಟಿ ರೂ. ವಿಮಾ ಯೋಜನೆ ಜಾರಿ ಮಾಡಲಾಗಿದೆ. ಕರ್ನಾಟಕ ರಾಜ್ಯ ಪೊಲೀಸರು, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ ಮತ್ತು ಅಪರಾಧ ಪತ್ತೆ ಮತ್ತು ನಿಯಂತ್ರಣದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಎಲ್ಲ ರೀತಿಯ ಅಪರಾಧ ಸಂಖ್ಯೆಗಳು ಕಡಿಮೆ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ಹೆಸರಘಟ್ಟ ಹುಲ್ಲುಗಾವಲು ಪ್ರದೇಶವನ್ನು ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಎಂದು ಘೋಷಣೆ ಮಾಡಲು ನಿರ್ಧರಿಸಲಾಗಿದೆ. ಶಾಲಾ ಮಕ್ಕಳಿಗೆ 6 ದಿನ ಮೊಟ್ಟೆ ನೀಡಲಾಗುತ್ತಿದೆ. ಬೆಳಗಾವಿಯಲ್ಲಿ ಗಾಂಧಿ ಭಾರತ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬಿಡಿಎ 34 ಸ್ಥಳಗಳಲ್ಲಿ ವಸತಿ ಸಂಕೀರ್ಣಗಳನ್ನು ನಿರ್ಮಿಸುವ ಮೂಲಕ 30 ಸಾವಿರ ವಸತಿ ಘಟಕಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

2024-25ರ ಅವಧಿಯಲ್ಲಿ 2,491 ಕಿಲೋ ಮೀಟರ್ ರಾಜ್ಯ ಹೆದ್ದಾರಿಗಳು, 3,103 ಕಿ.ಮೀ ಪ್ರಮುಖ ಜಿಲ್ಲಾ ರಸ್ತೆಗಳ ಸುಧಾರಣೆ ಮತ್ತು ನವೀಕರಣ ಪೂರ್ಣಗೊಂಡಿದೆ. 190 ಸೇತುವೆ ನಿರ್ಮಾಣ ಮಾಡಲಾಗಿದೆ. ರಾಜ್ಯ ಸ್ವಸಂಗ್ರಹದಲ್ಲಿ ರಾಜ್ಯ ಸರ್ಕಾರ ಪ್ರಗತಿ ಸಾಧಿಸಿದೆ. ಡಿಸೆಂಬರ್ ವೇಳೆಗೆ 1,81,908 ಕೋಟಿ ಅದಾಯ ಸಂಗ್ರಹ ಮಾಡಲಾಗಿದೆ. ಶೇ. 13 ಬೆಳವಣಿಗೆ ಸಾಧಿಸಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...