ಕಾಂಗ್ರೆಸ್ ವಿರುದ್ಧ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಬಿಜೆಪಿಯ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಬಿ ಭಾನುಪ್ರಕಾಶ್ ನಿಧನರಾಗಿದ್ದಾರೆ. ಘಟನೆ ಶಿವಮೊಗ್ಗದ ಸೀನಪ್ಪ ಶೆಟ್ಟಿ ಸರ್ಕಲ್‌ನಲ್ಲಿ ನಡೆದಿದೆ.
ನಗರದ ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಮೃತರ ಸ್ವಗ್ರಾಮ ಮತ್ತೂರಿಗೆ ಮೃತದೇಹವನ್ನು ತೆಗೆದುಕೊಂಡು ಹೋಗಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೀಟಾಗಿಲ್ಲ ಎನ್ನುವುದು ಗೊತ್ತಿದ್ದೂ ಭಂಡತನ ಮೆರೆದ ಬಿಜೆಪಿ
ವಿಪಕ್ಷ ಬಿಜೆಪಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು.ರಾಜ್ಯ ಸರ್ಕಾರ ಶನಿವಾರ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.5 ರೂ.ಗಳಿಗೆ ಹೆಚ್ಚಿಸಿತ್ತು.
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹೃದಯಾಘಾತವಾಗಿ ಬಿಜೆಪಿಯ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಬಿ ಭಾನುಪ್ರಕಾಶ್ ನಿಧನರಾಗಿದ್ದಾರೆ.
ಎಂ ಬಿ ಭಾನುಪ್ರಕಾಶ್ ನಿಧನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಸಂತಾಪ ಸೂಚಿಸಿದ್ದಾರೆ.ಹಿರಿಯರು, ನನ್ನ ಆತ್ಮೀಯರು, ಮಾರ್ಗದರ್ಶಕರು ಆದ ಶ್ರೀ ಎಂ.ಬಿ.ಭಾನುಪ್ರಕಾಶ್ ಅವರ ಹಠಾತ್ ನಿಧನದ ಸುದ್ದಿ ತೀವ್ರ ಆಘಾತ ಮೂಡಿಸಿದೆ. ತಮ್ಮ ಜೀವನದುದ್ದಕ್ಕೂ ಜನಪರ ಹೋರಾಟ, ಸಂಘರ್ಷ, ಸಂಘಟನೆಯಲ್ಲೇ ಕಳೆದ ಭಾನುಪ್ರಕಾಶ್ ಅವರು ತಮ್ಮ ಕೊನೆ ಉಸಿರನ್ನೂ ಹೋರಾಟದಲ್ಲೇ ಕಳೆದಿದ್ದು ಅವರ ಹೋರಾಟದ ಬದುಕಿನ ದ್ಯೋತಕವಾಗಿದೆ.
ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ ತಮ್ಮ ಸರಳತೆ, ಸಜ್ಜನಿಕೆಗೆ ಹೆಸರಾಗಿದ್ದ ಭಾನುಪ್ರಕಾಶ್ ಅವರು ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ಮಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಕುಟುಂಬ ಸದಸ್ಯರು, ಬಂಧು-ಬಳಗ ಹಾಗು ಸ್ನೇಹಿತರಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಿರಿಯರು, ನನ್ನ ಆತ್ಮೀಯರು, ಮಾರ್ಗದರ್ಶಕರು ಆದ ಶ್ರೀ ಎಂ.ಬಿ.ಭಾನುಪ್ರಕಾಶ್ ಅವರ ಹಠಾತ್ ನಿಧನದ ಸುದ್ದಿ ತೀವ್ರ ಆಘಾತ ಮೂಡಿಸಿದೆ.
ತಮ್ಮ ಜೀವನದುದ್ದಕ್ಕೂ ಜನಪರ ಹೋರಾಟ, ಸಂಘರ್ಷ, ಸಂಘಟನೆಯಲ್ಲೇ ಕಳೆದ ಭಾನುಪ್ರಕಾಶ್ ಅವರು ತಮ್ಮ ಕೊನೆ ಉಸಿರನ್ನೂ ಹೋರಾಟದಲ್ಲೇ ಕಳೆದಿದ್ದು ಅವರ ಹೋರಾಟದ ಬದುಕಿನ ದ್ಯೋತಕವಾಗಿದೆ.
ಜಿಲ್ಲಾ ಪಂಚಾಯಿತಿ ಸದಸ್ಯರಾಗಿ,… pic.twitter.com/aUwIM5utI6
— R. Ashoka (ಮೋದಿ ಅವರ ಕುಟುಂಬ) (@RAshokaBJP) June 17, 2024





