ಸಮಾಜಮುಖಿಯಾಗಿ ಸೇವೆ ಸಲ್ಲಿಸಿ- ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

Date:

ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಖೋಟ ಮೊದಲನೇ ವರ್ಷದ MBBS ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಸಂಸ್ಥೆಯು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಪ್ರಶಂಸಾರ್ಹ ಕಾರ್ಯ. ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಸ್ಥೆಯ ರೂವಾರಿಗಳು, ಉತ್ತಮ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವುದು ಅನುಕರಣೀಯವಾದುದು ಎಂದು ಪ್ರಶಂಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುರುಡು ದ್ವೇಷದ ಈ ಅಂಧಕಾರಕ್ಕೆ ಅಂತ್ಯವೆಂದು?

ಗಳಿಸಿದ ಸಂಪತ್ತಿನ ಅಲ್ಪಮೊತ್ತ ಸಮಾಜದ ಒಳಿತಿಗೆ ಬಳಸಿ

ವಿದ್ಯಾರ್ಥಿವೇತನ ಪಡೆಯುವ ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು. ಸಮಾಜದಲ್ಲಿ ಜಾತಿವ್ಯವಸ್ಥೆಯಿಂದ ಅಸಮಾನತೆಯಿದೆ. ಸಮಾನತೆಯನ್ನು ಸಾಧಿಸಿ ಸಮಸಮಾಜವನ್ನು ನಿರ್ಮಿಸಬೇಕಿದೆ. ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೇರಿದಾಗ, ಸಮಾಜಿಕ ಚಿಂತನೆಯಿಂದ ದುಡಿಯಬೇಕು. ತಾವು ಗಳಿಸುವ ಸಂಪತ್ತಿನ ಸಣ್ಣ ಪಾಲನ್ನು ಸಮಾಜದ ಒಳಿತಿಗಾಗಿ ಸದ್ಬಳಕೆ ಮಾಡಿ ಎಂದು ಭವಿಷ್ಯದ ವೈದ್ಯರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...