ಕರ್ನಾಟಕ ‘ದೇವಾಲಯ ಮಸೂದೆ’ಯನ್ನು ರಾಷ್ಟ್ರಪತಿ ಒಪ್ಪಿಗೆಗೆ ಕಾಯ್ದಿರಿಸಿದ ರಾಜ್ಯಪಾಲ

Date:

ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ (ತಿದ್ದುಪಡಿ) ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕಾಯ್ದಿರಿಸಿದ್ದಾರೆ.

“ಈ ಮಸೂದೆಯು ಸಾಂವಿಧಾನಿಕ ನಿರ್ಬಂಧಗಳಿಗೆ ಒಳಪಡುತ್ತಿದೆ. ಪರಿಶೀಲನೆಯ ಅಗತ್ಯವಿದೆ. ಹೀಗಾಗಿ, ಹೆಚ್ಚಿನ ಸಾಂವಿಧಾನಿಕ ತೊಡಕುಗಳನ್ನು ನಿವಾರಿಸಲು ಪ್ರಸ್ತಾವಿತ ಮಸೂದೆಗೆ ಒಪ್ಪಿಗೆ ನೀಡುವ ಬದಲು, ಗೌರವಾನ್ವಿತ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸುವುದು ಸೂಕ್ತವೆಂದು ನಾನು ಭಾವಿಸುತ್ತೇನೆ” ಎಂದು ರಾಜ್ಯಪಾಲ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈ ಮಸೂದೆಯನ್ನು 2024ರ ಮಾರ್ಚ್‌ 6ರಂದು ಸದನದಲ್ಲಿ ಅಂಗೀಕರಿಸಲಾಗಿತ್ತು. ರಾಜ್ಯಪಾಲರ ಅಂಕಿತಕ್ಕಾಗಿ 2025ರ ಮೇ 16ರಂದು ರಾಜ್ಯಪಾಲರ ಕಚೇರಿಗೆ ಸಲ್ಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಸೂದೆಯು, ಹೆಚ್ಚಿನ ಆದಾಯ ಗಳಿಸುವ ದೇವಾಲಯಗಳಿಂದ ಸರ್ಕಾರಕ್ಕೆ ಬರುವ ನಿಧಿಯ ಮೊತ್ತವನ್ನು ಹೆಚ್ಚಿಸುವುದಾಗಿ ಹೇಳುತ್ತದೆ. ಇದರಡಿ, ಒಂದು ಕೋಟಿ ರೂ.ಗೂ ಅಧಿಕ ಆದಾಯ ಪಡೆಯುವ ಧಾರ್ಮಿಕ ಸಂಸ್ಥೆಗಳ ಒಟ್ಟು ಆದಾಯದಲ್ಲಿ ದತ್ತಿ ಇಲಾಖೆಗೆ ಬರುವ ಪಾಲನ್ನು 10%ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ಆ ಹಣವನ್ನು ಕಡಿಮೆ ಮತ್ತು ಅತೀ ಕಡಿಮೆ ಆದಾಯ ಹೊಂದಿರುವ ವರ್ಗ-ಬಿ ಮತ್ತು ವರ್ಗ-ಸಿ ದೇವಾಲಯಗಳ ಅಭಿವೃದ್ಧಿಗೆ ವರ್ಗಾಯಿಸಲು ಮಸೂದೆಯಲ್ಲಿ ಸರ್ಕಾರ ಪ್ರಸ್ತಾಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...