ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಮುಖ್ಯಮಂತ್ರಿ ಸಿದ್ದರಾಮಯ್ಯ

Date:

“ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ. ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದಿನಿಂದ ಮೂರು ದಿನ ನಡೆಯಲಿರುವ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಮುಖ ನೀತಿಗಳ ರಚನೆ-ಐತಿಹಾಸಿಕ ಹೆಜ್ಜೆ

ಈ ಶೃಂಗಸಭೆಯಲ್ಲಿ, ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025–2030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030 ಮತ್ತು ಸ್ಟಾರ್ಟ್ಅಪ್ ನೀತಿ 2025-2030 ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ, ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್ ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. 2034 ರ ವೇಳೆಗೆ ಕರ್ನಾಟಕವನ್ನು ಭಾರತದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಪರಿವರ್ತಿಸುವ ನಮ್ಮ ಗುರಿಗೆ ಬಾಹ್ಯಾಕಾಶ ತಂತ್ರಜ್ಞಾ ನೀತಿ 2025-30 ಸಹಕಾರಿಯಾಗಲಿದೆ. ಹೊಸ ಸ್ಟಾರ್ಟ್ಅಪ್ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ ಬಂಡವಾಳ ನೆರವು, ಮಾರುಕಟ್ಟೆ ಅವಕಾಶ, ಮೂಲಸೌಲಭ್ಯ, ಕೌಶಲ್ಯಾಭಿವೃದ್ಧಿಯಂತಹ ಕ್ರಮಗಳ ಮೂಲಕ 25,000 ಸ್ಟಾರ್ಟ್ಅಪ್ಗಳ ಸ್ಥಾಪನೆಗೆ ನೆರವಾಗುವ ಗುರಿಯನ್ನು ಸರ್ಕಾರ ಹೊಂದಿದೆ.ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ

ಕಳೆದ ಮೂರು ದಶಕಗಳಿಂದ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿರುವ  ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಅಂತರರಾಷ್ಟ್ರೀಯ ಸಹಭಾಗಿತ್ವದಲ್ಲಿ ನಾವೀನ್ಯತೆ  ಮತ್ತು ತಂತ್ರಜ್ಞಾನದಲ್ಲಿ ಹೊಸ  ಆವಿಷ್ಕಾರಗಳನ್ನು ಸಂಶೋಧಿಸಿ, ಸೃಷ್ಟಿಸಿ   ಹೊಸ ದಿಕ್ಕಿನಲ್ಲಿ ಹೆಜ್ಜೆಗಳನ್ನಿಟ್ಟು ವಿಶ್ವದ ಗಮನವನ್ನು ಕರ್ನಾಟಕದತ್ತ ಸೆಳೆಯುತ್ತಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ .
  
ಈ ಸಮಾವೇಶದಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಪರಿಣತರು ತಮ್ಮ  ಜ್ಞಾನ, ಕೌಶಲ್ಯಗಳನ್ನು ಈ ವೇದಿಕೆಯಲ್ಲಿ ಹಂಚಿಕೊಂಡು ರಾಜ್ಯದ ಭವಿಷ್ಯವನ್ನು ರೂಪಿಸುವಲ್ಲಿ ಪರಿವರ್ತನೆಯ ಹರಿಕಾರರಾಗುತ್ತಾರೆಂದು ಎಂದರು .

ಪರಿವರ್ತನೆಯ ಮನ್ವಂತರಕ್ಕೆ ವೇದಿಕೆ

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಒಂದು ಸಮಾವೇಶಕ್ಕಿಂತಲೂ ಹೆಚ್ಚಾಗಿ ಹೊಸ ಹೊಸ ವಿಚಾರಗಳು, ಸಂವಾದಗಳು, ಬಂಡವಾಳ ಹೂಡಿಕೆ ಆವಿಷ್ಕಾರ ಮತ್ತು ಪರಿವರ್ತನೆಯ ಮನ್ವಂತರಕ್ಕೆ
ವೇದಿಕೆಯಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಹಲವು ಉತ್ತಮ ಅವಕಾಶಗಳಿಗೆ ಜಾಗತಿಕ ವೇದಿಕೆಯಾಗಿ ಹೊಸ ಮುನ್ನುಡಿ ಬರೆಯಲಿ ಎಂದು ಹಾರೈಸುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ  ವರ್ಷದ ಧ್ಯೇಯವಾಕ್ಯ: “ಭವಿಷ್ಯೀಕರಣಗೊಳ್ಳಿ-ಅಜ್ಞಾತವನ್ನು ರೂಪಿಸುತ್ತಾ, ಊಹಿಸಿಲಾಗದ್ದನ್ನು ಅಳೆಯುತ್ತಾ , ಜಗತ್ತನ್ನು ಮುಂದೆ  ಕೊಂಡೊಯ್ಯುವುದು” ಎಂಬುದಾಗಿದೆ. ಈ ಆಶಯ  ನಮ್ಮ ಸಾಮೂಹಿಕ ಧ್ಯೇಯದ  ಸಂಕಲ್ಪವನ್ನು ಎತ್ತಿ ಹಿಡಿಯುತ್ತದೆ.

WhatsApp Image 2025 11 18 at 12.44.48 PM

ಈ ಧ್ಯೇಯ ವಾಕ್ಯದ ಆಶಯದಂತೆ ಬೆಂಗಳೂರು  ತಂತ್ರಜ್ಞಾನ ಶೃಂಗಸಭೆ- 2025, ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ 600ಕ್ಕೂ ಹೆಚ್ಚು ಜಾಗತಿಕ ಭಾಷಣಕಾರರು, 1200ಕ್ಕೂ ಹೆಚ್ಚು ಪ್ರದರ್ಶಕರು, 60ಕ್ಕೂ ಹೆಚ್ಚು ದೇಶದ ನಿಯೋಗಗಳು ಮತ್ತು ಸಾವಿರಾರು ಪರಿಣತರು ಮುಂದಿನ ದಶಕಗಳಲ್ಲಿ ತಂತ್ರಜ್ಞಾನದ ರೂಪುರೇಷೆಗಳನ್ನು , ಹೊಸ ಸಾಧ್ಯತೆಗಳನ್ನು ಇಲ್ಲಿ ಸಂವಾದಿಸಿ, ಕೇವಲ ಕರ್ನಾಟಕಕ್ಕಾಗಲಿ ಅಥವಾ ಭಾರತಕ್ಕೆ ಆಗಲಿ ಮಾತ್ರವಲ್ಲ, ಇಡೀ ಜಗತ್ತಿಗೇ ತೆರೆದಿಡುತ್ತಾರೆ.

ಬೆಂಗಳೂರು ತಂತ್ರಜ್ಞಾನ ಶೃಂಗಸಭೆ- 2025  ಪರಿವರ್ತನೆಯ ಹರಿಕಾರ ಎಂಬುದನ್ನು ಈಗಾಗಲೇ ಹೇಳಿದ್ದೇನೆ. ಇದು ಶೈಕ್ಷಣಿಕ ವಲಯವನ್ನು ಉದ್ಯಮಕ್ಕೆ ಬೆಸೆಯುತ್ತದೆ. ನವೋದ್ಯಮಗಳನ್ನು ಹೂಡಿಕೆದಾರರಿಗೆ
ಪರಿಚಯಿಸುತ್ತದೆ. ಅನ್ಯ ದೇಶಗಳ ಪರಿಣಿತರನ್ನು ಸಂಶೋಧಕರನ್ನು, ನೀತಿ ನಿರೂಪಕರನ್ನು ಪರಸ್ಪರ ಬೆಸೆಯುವುದಲ್ಲದೇ, ಜಾಗತಿಕ ಮಾರುಕಟ್ಟೆಗಳನ್ನು ಸಂಪರ್ಕಿಸಲು ಬೃಹತ್ ವೇದಿಕೆಯಾಗಿದೆ ಎಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದರು.

ಸುಸ್ಥಿರ ಅಭಿವೃದ್ಧಿ ನಮ್ಮ ಧ್ಯೇಯ

ಭವಿಷ್ಯೀಕರಣಗೊಳ್ಳಿ ಎನ್ನುವ ಆಶಯ ನುಡಿಯಂತೆ ತಂತ್ರಜ್ಞಾನವು ಸಾಮಾಜಿಕ ಒಳಿತನ್ನು, ಆರ್ಥಿಕ ನ್ಯಾಯವನ್ನು, ಸುಸ್ಥಿರ ಅಭಿವೃದ್ಧಿಯನ್ನು ಮತ್ತು  ಸಮಾಜದ ಎಲ್ಲರಿಗೂ ಸಮೃದ್ಧಿಯನ್ನು ಒದಗಿಸಬೇಕು ಎಂಬ ನಮ್ಮ ನಂಬಿಕೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...