ಕರ್ನಾಟಕ | ಖಾಸಗಿ ಕಂಪನಿಗಳಲ್ಲಿ ಕೆಲಸದ ಸಮಯ 10 ಗಂಟೆಗೆ ವಿಸ್ತರಣೆ – ಪ್ರಸ್ತಾಪ; ತೀವ್ರ ಆಕ್ರೋಶ

Date:

ರಾಜ್ಯದಲ್ಲಿ ಖಾಸಗಿ ಕಂಪನಿಗಳಲ್ಲಿ ದುಡಿಯುತ್ತಿರುವ ನೌಕರರ ಕೆಲಸದ ಅವಧಿಯನ್ನು 10 ಗಂಟೆಗಳಿಗೆ ವಿಸ್ತರಿಸಲು ರಾಜ್ಯ ಸರ್ಕಾರವು ಪ್ರಸ್ತಾಪಿಸಿದೆ ಎಂದು ವರದಿಯಾಗಿದೆ. ಸರ್ಕಾರದ ಈ ಚಿಂತನೆಯ ವಿರುದ್ಧ ಐಟಿ/ಬಿಟಿ ಸೇರಿದಂತೆ ಖಾಸಗಿ ವಲಯದ ಉದ್ಯೋಗಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲಸದ ಅವಧಿಯಲ್ಲಿ ಯಾವುದೇ ಬದಲಾವಣೆ ಮಾಡದಂತೆ ಆಗ್ರಹಿಸಿದ್ದಾರೆ.

ಸದ್ಯಕ್ಕೆ, ರಾಜ್ಯದಲ್ಲಿ ಖಾಸಗಿ ನೌಕರರ ಕೆಲಸದ ಅವಧಿಯಲ್ಲಿ 8ರಿಂದ 9 ಗಂಟೆ ಇದೆ. ಅದನ್ನು ವಿಸ್ತರಿಸಿ 10 ಗಂಟೆಗಳ ಅವಧಿಗೆ ವಿಸ್ತರಿಸುವಂತೆ ಖಾಸಗಿ ಕಂಪನಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಅದರಂತೆ, ಸಮಯ ವಿಸ್ತರಣೆಯ ಕುರಿತು ರಾಜ್ಯ ಸರ್ಕಾರ ಚರ್ಚೆ ನಡೆಸುತ್ತಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿರುವ, ‘ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ-1961ರ ಸೆಕ್ಷನ್ 7ರ ಪ್ರಕಾರ, ಕೆಲಸದ ಅವಧಿ ದಿನಕ್ಕೆ 9 ಗಂಟೆ ಮೀರಬಾರದು. ಒಂದು ವೇಳೆ, ಹೆಚ್ಚಿನ ಸಮಯ ದುಡಿಸಿಕೊಂಡರೆ ಹೆಚ್ಚುವರಿ ಪಾವತಿ (ಒಟಿ) ನೀಡಬೇಕು. ಇದೀಗ, ಆ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ವಿವಿಧ ಕಾರ್ಮಿಕ ಸಂಘಟನೆಗಳ ಜೊತೆ ಕಾರ್ಮಿಕ ಕಾರ್ಯದರ್ಶಿ ರೋಹಿಣಿ ಸಿಂಧೂರಿ ನೇತೃತ್ವದ ರಾಜ್ಯ ಕಾರ್ಮಿಕ ಇಲಾಖೆ ಅಧಿಕಾರಿಗಳು ಚರ್ಚಿಸಿದ್ದಾರೆ. ಕೆಲಸದ ಅವಧಿಯನ್ನು 10 ಗಂಟೆಯಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಪ್ರಸ್ತಾಪ ಸರ್ಕಾರದ ಮುಂದಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ, ಪ್ರಸ್ತಾವಿತ ತಿದ್ದುಪಡಿಯು ಜಾರಿಗೆ ಬಂದಲ್ಲಿ, ಉದ್ಯೋಗಿಗಳಿಗೆ ಕೆಲಸದ ಹೊರೆ ಹೆಚ್ಚಾಗಲಿದೆ. ಅದು ಮಾನಸಿಕ ಒತ್ತಡವನ್ನು ಉಂಟುಮಾಡುತ್ತದೆ ಮಾತ್ರವಲ್ಲದೆ, ಖಾಸಗಿ ಕಂಪನಿಗಳಲ್ಲಿರುವ ಮೂರು ಪಾಳಿಯ ವ್ಯವಸ್ಥೆಯು ರದ್ದಾಗಲಿದೆ. ಬದಲಾಗಿ, ಎರಡು ಪಾಳಿಯ ಕೆಲಸದ ವ್ಯವಸ್ಥೆ ಇರುತ್ತದೆ. ಇದರಿಂದ, ಮತ್ತೊಂದು ಪಾಳಿಯ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಪ್ರಮುಖ ಆತಂಕ ಎದುರಾಗಿದೆ. ಹೀಗಾಗಿಯೇ, ಉದ್ಯೋಗಿಗಳು ಕೆಲಸದ ಅವಧಿ ವಿಸ್ತರಣೆಯನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಸರ್ಕಾರದ ಮುಂದಿರುವ ಪ್ರಸ್ತಾಪವನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿರುವ ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸುಹಾಸ್ ಅಡಿಗ, “ಕೆಲಸದ ಅವಧಿಯ ವಿಸ್ತರಣೆಯು ಕಾರ್ಮಿಕರನ್ನು ಮತ್ತಷ್ಟು ‍ಶೋಷಿಸುತ್ತದೆ. ಕಾರ್ಮಿಕರನ್ನು ಹಿಂಡುತ್ತದೆ. ಕಾರ್ಮಿಕರ ವೈಯಕ್ತಿಕ ಮತ್ತು ಸಾಮಾಜಿಕ ಜೀವನವನ್ನೇ ಕಸಿದುಕೊಳ್ಳುತ್ತದೆ. ಕಾರ್ಮಿಕರನ್ನು ಮನುಷ್ಯರಾಗಿ ಗುರುತಿಸಲು ಸರ್ಕಾರಕ್ಕೆ ಇಷ್ಟವಿಲ್ಲ ಎಂಬಂತೆ ಕಾಣುತ್ತದೆ. ಕಾರ್ಮಿಕರನ್ನು ದುಡಿವ ಯಂತ್ರಗಳಂತೆ ನೋಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...