ಲೋಕಸಭಾ ಚುನಾವಣೆ ಹಿನ್ನೆಲೆ: ಪಿಎಸ್ಐ ಪರೀಕ್ಷೆ ಮುಂದೂಡಿಕೆ

Date:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ.08ರಂದು ನಡೆಸಲು ನಿಗದಿಯಾಗಿದ್ದ ಪಿಎಸ್‌ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿತ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌ ರಮ್ಯಾ ತಿಳಿಸಿದ್ದಾರೆ.

ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಿಕೆ ಮಾಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದೇಶದ ವಿವರ

ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ – ಪಿಎಸ್‌ಐ (402) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಎಂಬ ವಿಷಯವನ್ನು ಪ್ರಕಟಣೆ ಒಳಗೊಂಡಿದೆ ಸರ್ಕಾರದ ಆದೇಶ ದಿನಾಂಕ 22/02/2024ರನ್ವಯ ಪೊಲೀಸ್‌ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿರುತ್ತದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಅದರಂತೆ ದಿನಾಂಕ 08/05/2024ರಂದು ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಆದರೆ ದೇಶಾದ್ಯಂತ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, ನೀತಿ ಸಂಹಿತೆ ಜಾರಿಯಲ್ಲಿರುವ ದಿನಾಂಕ 08/05/2024ರಂದು ನಡೆಸಲು ತೀರ್ಮಾನಿಸಲಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದೆ.

ಯುಪಿಎಸ್‌ಸಿ ಪರೀಕ್ಷೆಯೂ ಮುಂದೂಡಿಕೆ

ಲೋಕಸಭೆಗೆ ಮೇ 26ರಂದು ಚುನಾವಣೆ ನಿಗದಿಯಾಗಿರುವ ಹಿನ್ನಲೆಯಲ್ಲಿ ಅಂದು ನಿಗದಿಯಾಗಿರುವ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆಯಾಗಿದೆ. ಜೂನ್ 16ರಂದು ಪರೀಕ್ಷೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...