ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಇಂದು ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಿದೆ. ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ.
ಕರ್ನಾಟಕದ 967 ಕೇಂದ್ರಗಳಲ್ಲಿ ಮೇ 26ರಿಂದ ಜೂನ್ 2ರವರೆಗೆ ಎಸ್ಎಸ್ಎಲ್ ಪರೀಕ್ಷೆ-2 ನಡೆದಿತ್ತು. ಮೇ 24ರಂದು ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.62.34ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.
ಈ ಬಾರಿ 8,42,173 ಮಕ್ಕಳ ಪೈಕಿ 5,24,984 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಶೇ.74ರಷ್ಟು ಬಾಲಕಿಯರು ಉತ್ತೀರ್ಣರಾಗಿ ಮೇಲುಗೈ ಸಾಧಿಸಿದ್ದರು.
ಶೇ.91.12ರಷ್ಟು ಫಲಿತಾಂಶದ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದು, ಎರಡನೇ ಸ್ಥಾನದಲ್ಲಿ ಉಡುಪಿ, 3ನೇ ಸ್ಥಾನದಲ್ಲಿ ಉತ್ತರ ಕನ್ನಡ ಜಿಲ್ಲೆ ಇತ್ತು. ಶೇ.42 ಫಲಿತಾಂಶದ ಮೂಲಕ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿತ್ತು. ಈ ಬಾರಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದರು.
ಫಲಿತಾಂಶ ನೋಡುವುದು ಹೇಗೆ?
karresults.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಮುಖಪುಟದಲ್ಲಿ, KSEAB 10ನೇ SSLC ಪರೀಕ್ಷೆಯ 2 ನೇ ಫಲಿತಾಂಶಗಳು 2025 ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಸಲ್ಲಿಸಿ.
ಬಳಿಕ ಪರದೆಯ ಮೇಲೆ ನಿಮ್ಮ ಫಲಿತಾಂಶ ಕಾಣಿಸಿಕೊಳ್ಳುತ್ತದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.





