ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ; ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ಸಂಪುಟ ನಿರ್ಧಾರ

Date:

ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇಲೆಕ್ಟ್ರಾನಿಕ್ ಮತ ಯಂತ್ರ (ಇವಿಎಂ)ದ ಬದಲಾಗಿ ಬ್ಯಾಲೆಟ್ ಪೇಪರ್‌ಗಳನ್ನು ಬಳಸಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಈ ವಿಷಯವನ್ನು ತಿಳಿಸಿದರು.

ಮತಗಳ್ಳತನದ ಪ್ರಕರಣಗಳು ಬಯಲಾದ ಬಳಿಕ ಜನಸಾಮಾನ್ಯರಲ್ಲಿ ಇವಿಎಂ ಮೇಲಿನ ವಿಶ್ವಾಸಾರ್ಹತೆ ಕಡಿಮೆಯಾಗಿದೆ. ಮತಗಳ್ಳತನಕ್ಕೆ ಸಂಬಂಧಿಸಿದಂತೆ ಹಲವಾರು ದೂರುಗಳು ಬಂದಿವೆ. ಆದುದರಿಂದ, ಸಚಿವ ಸಂಪುಟವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇವಿಎಂ ಬದಲು ಬ್ಯಾಲೇಟ್ ಪೇಪರ್ ಬಳಸಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶಪಾಂಡೆ ದುರ್ವರ್ತನೆ: ವಯಸ್ಸಾದರೂ ಬುದ್ಧಿ ಬರಲಿಲ್ಲವೇ?

ರಾಜ್ಯ ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆ. ಅದು ರಾಜ್ಯದ ಕಾನೂನಿನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು, ಪರಿಷ್ಕರಣೆ ಮಾಡಲು ಈಗಾಗಲೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದು ತಿಳಿಸಲಾಗಿದೆ ಎಂದು ಎಚ್ ಕೆ ಪಾಟೀಲ್ ಹೇಳಿದರು.

ಇವಿಎಂ ಬದಲು ಬ್ಯಾಲೇಟ್ ಪೇಪರ್ ಬಳಕೆಗೆ ಅವಕಾಶ ಕಲ್ಪಿಸುವ ಸಂಬಂಧ ಅಗತ್ಯ ಕಾನೂನು ಮತ್ತು ನಿಯಮಾವಳಿಗಳಿಗೆ ಮುಂದಿನ 15 ದಿನಗಳಲ್ಲಿ ತಿದ್ದುಪಡಿ ಮಾಡಲಾಗುವುದು. ಸರ್ಕಾರ ಕಾನೂನು ರೂಪಿಸಿದ ಬಳಿಕ ರಾಜ್ಯ ಚುನಾವಣಾ ಆಯೋಗ ಅದನ್ನು ಪಾಲಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಈ ಹಿಂದಿನ ವಿಧಾನಸಭೆಯಲ್ಲಿ ಸ್ಪೀಕರ್ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಚುನಾವಣಾ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆಯೆ ವಿಶೇಷ ಅಧಿವೇಶನ ಕರೆದಿದ್ದರು. ಅಲ್ಲಿ ನಾನು ಈ ವಿಷಯದ ಕುರಿತು ಸುದೀರ್ಘವಾಗಿ ಮಾತನಾಡಿದೆ. ಅಲ್ಲದೇ, ಸುಮಾರು 3450 ಪುಟಗಳಷ್ಟು ದಾಖಲೆಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಟ್ಟಿದ್ದೆ. ಆದರೆ, ಯಾವುದೆ ಪ್ರಯೋಜನವಾಗಲಿಲ್ಲ ಎಂದು ಎಚ್ ಕೆ ಪಾಟೀಲ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...