ಆಲಮಟ್ಟಿ ಅಣೆಕಟ್ಟೆ ಎತ್ತರಿಸುವ ಕರ್ನಾಟಕದ ಯೋಜನೆಗೆ ಆಂಧ್ರ ಸಿಎಂ ಆಕ್ಷೇಪ

Date:

ಕೃಷ್ಣಾ ಮೇಲ್ದಂಡೆಯ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಕ್ರಮಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಜೊತೆ ನಡೆದ ಸಭೆಯಲ್ಲಿ, ಕರ್ನಾಟಕವು ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಿದರೆ, ಆಂಧ್ರಪ್ರದೇಶದಲ್ಲಿ ನೀರಿನ ಲಭ್ಯತೆಯ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ ಎಂದು ನಾಯ್ಡು ಕಳವಳ ವ್ಯಕ್ತಪಡಿಸಿದ್ದಾರೆ.

ಅಂತರ ರಾಜ್ಯ ನೀರಿನ ಸಮಸ್ಯೆಗಳ ಕುರಿತು ಗಮನಸೆಳೆದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶ-ಒಡಿಶಾ ವಂಶಧಾರ ನದಿ ನೀರಿನ ವಿವಾದವನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಒತ್ತಾಯಿಸಿದರು. ವಂಶಧಾರ ಜಲ ವಿವಾದದ ಕುರಿತು ನ್ಯಾಯಮಂಡಳಿಯ ಅಂತಿಮ ವರದಿಯನ್ನು ವಿಳಂಬ ಮಾಡದೆ ಗೆಜೆಟ್‌ನಲ್ಲಿ ಪ್ರಕಟಿಸಬೇಕು ಎಂದು ಆಗ್ರಹಿಸಿದರು.ಜೊತೆಗೆ ಗೋದಾವರಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ನಡೆಯುತ್ತಿರುವ ವಿವಾದದ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಕ್ಸಲ್ ನಿಗ್ರಹದ ನೆಪದಲ್ಲಿ ಪ್ರಕೃತಿ ಸಂಪತ್ತಿನ ಲೂಟಿಗಿಳಿಯಿತೇ ಸರ್ಕಾರ?

ಉಭಯ ರಾಜ್ಯಗಳ ನಡುವೆ ನದಿ ನೀರಿನ ಸಮಾನ ಹಂಚಿಕೆ ಮಾಡುವ ಕುರಿತು ಜಲ ವಿವಾದ ನ್ಯಾಯಮಂಡಳಿಯು ತಕ್ಷಣ ಸಂಧಾನಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.ಕೇಂದ್ರ ನೀರಾವರಿ ಸಚಿವರ ಜೊತೆಗಿನ ಸಭೆಯಲ್ಲಿ ಆಂಧ್ರಪ್ರದೇಶಕ್ಕೆ ಸಂಬಂಧಿಸಿದಂತೆ ಅನೇಕ ನೀರಾವರಿ ಮತ್ತು ಜಲ ಭದ್ರತಾ ಯೋಜನೆಗಳಿಗೆ ಅನುಮೋದನೆ ಹಾಗೂ ಆರ್ಥಿಕ ಸಹಾಯ ನೀಡುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ಹಿತಾಸಕ್ತಿಗಳನ್ನು ಕಾಪಾಡಲು, ರೈತರ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಮತ್ತು ಆಂಧ್ರಪ್ರದೇಶಕ್ಕೆ ಕುಡಿಯುವ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಈ ಯೋಜನೆಗಳು ಅತ್ಯಗತ್ಯ ಎಂದು ನಾಯ್ಡು ಒತ್ತಿ ಹೇಳಿದರು.ಜೊತೆಗೆ, ಪೋಲಾವರಂ ಯೋಜನೆಯ ಮೇಲೆ ವಿಧಿಸಿರುವ ನಿಲುಗಡೆ ಆದೇಶವು ಯೋಜನೆಯ ಸುಗಮ ಅನುಷ್ಠಾನಕ್ಕೆ ಅಡ್ಡಿಯಾಗುತ್ತಿದೆ ಹಾಗಾಗಿ ಆದೇಶವನ್ನು ಶಾಶ್ವತವಾಗಿ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...