ಕೆ.ಸಿ ವ್ಯಾಲಿ ನೀರು ಸುರಕ್ಷಿತ: ಮಣ್ಣಿನ ಗುಣಮಟ್ಟವೂ ವೃದ್ಧಿ  

Date:

‘ಕೆ.ಸಿ ವ್ಯಾಲಿ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ಅಂತರ್ಜಲ ವೃದ್ಧಿಸಿದೆ. ಯೋಜನೆಗೂ ಮುನ್ನ 1,800 ಅಡಿಗೂ ನೀರು ಸಿಗುತ್ತಿರಲಿಲ್ಲ. ಈಗ 50ರಿಂದ 100 ಅಡಿಯಷ್ಟರಲ್ಲೇ ನೀರು ಲಭ್ಯವಾಗುತ್ತಿದೆ. ನೀರಿನ ಗುಣಮಟ್ಟವೂ ವೃದ್ಧಿಸಿದೆ. ಅಂತರ್ಜಲ ಐದು ಹಂತದಲ್ಲಿ ಶುದ್ದೀಕರಣವಾಗುತ್ತಿದೆ. ಈ ನೀರನ್ನು ಬಳಸುತ್ತಿರುವ ಜನರು, ಜಾನುವಾರುಗಳ ಆರೋಗ್ಯದಲ್ಲಿ ಯಾವ ಸಮಸ್ಯೆಯೂ ಕಂಡುಬಂದಿಲ್ಲ’ ಎಂದು ಐಐಎಸ್‌ಸಿ ವಿಜ್ಞಾನಿಗಳು ಹೇಳಿದ್ದಾರೆ.

ಮಾರ್ಚ್‌ 23(ಸೋಮವಾರ)ರಂದು ವಿಧಾನಸೌಧದಲ್ಲಿ ಸಣ್ಣ ನೀರಾವರಿ ಸಚಿವ ಎನ್‌.ಎಸ್.ಬೋಸರಾಜು ಅಧ್ಯಕ್ಷತೆಯಲ್ಲಿ ಕೆ.ಸಿ ವ್ಯಾಲಿ, ಎಚ್.ಎನ್ ವ್ಯಾಲಿ ಮತ್ತು ವೃಷಭಾವತಿ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಭಾಗಿಯಾಗಿದ್ದ ಐಐಎಸ್‌ಸಿ ವಿಜ್ಞಾನಿಗಳು, ‘ಕೃಷಿಗೂ ಈ ಯೋಜನೆಯಿಂದ ಯಾವುದೇ ಸಮಸ್ಯೆಯಾಗಿಲ್ಲ. ಮಣ್ಣಿನ ಗುಣಮಟ್ಟವೂ ವೃದ್ಧಿಯಾಗಿದೆ. ಈ ಸಂಬಂಧಿಸಿದಂತೆ ಐಐಎಸ್‌ಸಿ ಅನೇಕ ಬಾರಿ ಅಧ್ಯಯನ ನಡೆಸಿದ್ದು ನೀರಿನಲ್ಲಿ ಹಾಗೂ ಅಂತರ್ಜಲದಲ್ಲಿ ಯಾವುದೇ ಲೋಹದ ಅಂಶಗಳೂ ಪತ್ತೆಯಾಗಿಲ್ಲ’ ಎಂದು ಪ್ರತಿಪಾದಿಸಿಕೊಂಡರು.

‘ವಾಸನೆಯಿಲ್ಲದೆ ಶುದ್ಧ ನೀರು ಲಭ್ಯವಾಗುವಂತಾಗಿದೆ. ಕೆರೆಗಳ ವ್ಯಾಪ್ತಿಯಲ್ಲಿ ಪಕ್ಷಿಗಳ ಸಂಕುಲವೂ ಹೆಚ್ಚಾಗಿದೆ, ಜಲಚರ ಜೀವಿಗಳ ಆರೋಗ್ಯ ಮಟ್ಟ ಕೂಡ ಹೆಚ್ಚಿದೆ ಎನ್ನುವುದು ನಮ್ಮ ಅಧ್ಯಯನದಲ್ಲಿ ತಿಳಿದು ಬಂದಿದೆ. ಇಡೀ ದೇಶದಾದ್ಯಂತ ಈ ಯೋಜನೆಯನ್ನು ಅನುಸರಿಸಬೇಕು ಎಂಬ ಅಭಿಪ್ರಾಯವನ್ನು ಅನೇಕ ಸಂಸ್ಥೆಗಳು ಅಭಿಪ್ರಾಯಪಟ್ಟಿವೆ. ಕೋಲಾರದಲ್ಲೀಗ ನೀರು ಹರಿಯದ ಪ್ರದೇಶಗಳಿಗೂ ನೀರು ಹರಿಯುತ್ತಿರುವುದು ಮಣ್ಣಿನ ಗುಣಮಟ್ಟವೂ ಹೆಚ್ಚಳವಾಗಿದೆ. ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ’ ಎಂದು ವಿವರಿಸಿದ್ದಾರೆ.

ಬೆಂಗಳೂರು ಮಹಾನಗರದ ಕೊಳಚೆ ನೀರನ್ನು ಈ ಯೋಜನೆಗಳಡಿ ಎರಡು ಹಂತದಲ್ಲಿ ಸಂಸ್ಕರಣೆ ಮಾಡಿ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ಹರಿಸಲಾಗುತ್ತಿದೆ. ಶಾಶ್ವತ ನೀರಾವರಿ ಹೋರಾಟಗಾರರು, ರೈತ ಸಂಘಟನೆಗಳ ಮುಖಂಡರು ಈ ನೀರನ್ನು ಮೂರು ಹಂತದಲ್ಲಿ ಸಂಸ್ಕರಿಸಿ ಹರಿಸಬೇಕು ಎಂದು ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಚಿಕ್ಕಬಳ್ಳಾಪುರ ಬಂದ್‌ ಕೂಡ ನಡೆದಿತ್ತು. ಈ ಬೆನ್ನಲ್ಲೇ ಈ ಮಹತ್ವದ ಸಭೆ ನಡೆದಿದೆ. ಐಐಎಸ್‌ಸಿ ವಿಜ್ಞಾನಿಗಳು ಶುದ್ಧ ನೀರು ಲಭ್ಯವಾಗುತ್ತಿರುವುದಾಗಿ ಹೇಳಿದ್ದಾರೆ.

ಸಭೆಯಲ್ಲಿ ಭಾಗಿಯಾಗಿದ್ದ ಐಐಎಸ್‌ಸಿ ವಿಜ್ಞಾನಿಗಳಿಂದ ಸಮಗ್ರ ಮಾಹಿತಿ ಪಡೆದ ಸಚಿವ ಎನ್.ಎಸ್ ಬೋಸರಾಜು, ಕೆ.ಸಿ ವ್ಯಾಲಿ, ಎಚ್‌.ಎನ್ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಅತ್ಯುತ್ತಮ ಗುಣಮಟ್ಟದ್ದಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ)ಯ ವಿಜ್ಞಾನಿಗಳು ನಡೆಸಿದ ಅಧ್ಯಯನಗಳಿಂದ ಇದು ದೃಢಪಟ್ಟಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಇನ್ನು, ಸಭೆಯಲ್ಲಿ ಭಾಗಿಯಾಗಿದ್ದ ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ, ಯೋಜನೆಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಲ್ಲಿರುವ ಜಲಚರಗಳ ಆರೋಗ್ಯವನ್ನು ಹಾಗೂ ಮಾಂಸದ ಗುಣಮಟ್ಟವನ್ನು ಆರು ತಿಂಗಳಿಗೊಮ್ಮೆ ಪರಿಶೀಲಿಸಲು ಸೂಚಿಸಿದ್ದಲ್ಲದೆ, ಮುಂದಿನ ಐದರಿಂದ ಹತ್ತು ವರ್ಷಗಳವರೆಗೆ ಐಐಎಸ್‌ಸಿಯು ಈ ಯೋಜನೆ ಬಗ್ಗೆ ಅಧ್ಯಯನ ಮುಂದುವರಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕ‌ರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿಗಳು, ಜಲಮಂಡಳಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...