ಕೆಇಎ ಪರೀಕ್ಷಾ ಅಕ್ರಮ | ಒಂಬತ್ತು ಆರೋಪಿಗಳು ಪೊಲೀಸ್ ಕಸ್ಟಡಿಗೆ

Date:

  • ಕೆಇಎ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ಅಕ್ರಮ ಎಸಗಿದ್ದ ಪ್ರಕರಣ
  • ‘ಹೊರಗಿದ್ದು ಪರೀಕ್ಷೆ ಬರೆಯಲು ಸಹಾಯ ಮಾಡಿದ 7 ಜನರು’

ಕಳೆದ‌ 10 ದಿನಗಳ ಹಿಂದೆ ನಡೆದ ಕೆಇಎ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ಅಕ್ರಮ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಜೆಎಂ ನ್ಯಾಯಾಧೀಶರ ಅನುಮತಿ ಪಡೆದು ಬಂಧಿತ 16 ಆರೋಪಿಗಳ ಪೈಕಿ 9 ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಯಾದಗಿರಿ ನಗರದ ಐದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅಕ್ರಮ ನಡೆದಿದ್ದು, ಸಿಪಿಐ ಹಂತದ ಐದು ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ಬಂಧಿತರ ಪೈಕಿ 9 ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಹೊರಗಿದ್ದು ಪರೀಕ್ಷೆ ಬರೆಯಲು ಸಹಾಯ ಮಾಡಿದ 7 ಜನರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.

16 ಆರೋಪಿಗಳ ವಿಚಾರಣೆ ವೇಳೆ ಪೊಲೀಸರಿಗೆ ಸ್ಫೋಟಕ ಮಾಹಿತಿ ಸಿಕ್ಕಿದೆ. ಆರೋಪಿಗಳ ಮೊಬೈಲ್ ಜಪ್ತಿ ಮಾಡಿ ಪರಿಶೀಲನೆ ವೇಳೆ ಮಾಹಿತಿ ಸಿಕ್ಕಿದ್ದು, ಸರ್ಕಾರ ಎಂಬ ಹೆಸರಲ್ಲಿ ಸೇವ್​ ಆಗಿದ್ದ ನಂಬರ್​ನಿಂದ ವಾಟ್ಸಪ್​ ಕಾಲ್​ ಮಾಡಲಾಗಿದೆ. ಪರೀಕ್ಷೆಯ ಹಿಂದಿನ ದಿನ ಬಂಧನಕ್ಕೊಳಗಾದ ಆರೋಪಿ ನಂಬರ್​ಗೆ ಆಡಿಯೋ ಕಾಲ್ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಡಿಯೋ ಕಾಲ್ ಮಾಡಿ ಮಾಹಿತಿ ನೀಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸರ್ಕಾರ ಎಂಬ ಹೆಸರಿನ ನಂಬರ್ ಕಲಬುರಗಿ ಜಿಲ್ಲೆ ಅಫಜಲಪುರದ್ದು. ಬಂಧನಕ್ಕೊಳಗಾದ 16 ಜನರಲ್ಲಿ 15 ಆರೋಪಿಗಳು ಅಫಜಲಪುರದವರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬರ ಪರಿಹಾರ | ರೈತರಿಗೆ ನೆರವು ನೀಡಲು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಚಲುವರಾಯಸ್ವಾಮಿ

ಕಿಂಗ್‌ಪಿನ್ ಆರ್ ಡಿ ಪಾಟೀಲ್ ಜೊತೆ ಡೀಲ್

ಪ್ರಕರಣದ ಕಿಂಗ್‌ಪಿನ್ ಆರ್ ಡಿ ಪಾಟೀಲ್ ಜೊತೆ ಡೀಲ್ ಮಾಡಿಕೊಂಡಿದ್ದ ಪೋಷಕರಿಗೆ ಪೀಕಲಾಟ ಆರಂಭವಾಗಿದೆ. ಅತ್ತ ಮಕ್ಕಳಿಗೆ ನೌಕರಿಯು ಇಲ್ಲದೇ, ಹಣವೂ ಇಲ್ಲದೇ ಪೋಷಕರು ಅಲೆದಾಡುತ್ತಿದ್ದಾರೆ. ಹಣ ವಾಪಸು ಕೊಡುವಂತೆ ಅಭ್ಯರ್ಥಿಗಳ ಪೋಷಕರು ಬೀದರ್‌ನ ಹುಮನಾಬಾದ್ ರಸ್ತೆಯಲ್ಲಿ ಆರ್‌ ಡಿ ಪಾಟೀಲ್​​ ಕಾರನ್ನು ಅಡ್ಡಗಟ್ಟಿದ್ದ ಪ್ರಸಂಗವೂ ನಡೆದಿತ್ತು.

ಆರ್ ಡಿ ಪಾಟೀಲ್ ಬಂಧನಕ್ಕೆ ಆಗ್ರಹ

ಅಕ್ರಮದ ಪ್ರಮುಖ ಆರೋಪಿ ಆರ್ ಡಿ ಪಾಟೀಲರನ್ನು ಬಂಧಿಸುವಂತೆ ಯಾದಗಿರಿಯಲ್ಲಿ ಬಿಜೆಪಿ ಜಿಲ್ಲಾ ಘಕಟದಿಂದ ನಗರದ ಸುಭಾಷ್ ವೃತ್ತದಲ್ಲಿ ನಡೆದ ಪ್ರತಿಭಟನೆ ಮಾಡಲಾಗಿದೆ.

ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಗೆ ಪೊಲೀಸರ ನಿರಾಕರಣೆ ಮಧ್ಯೆಯೂ ಟಯರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದು, ನೀರು ತಂದು ಸ್ವತಃ ಪೊಲೀಸರು ಬೆಂಕಿ ಹಾರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...