ಕೇರಳ ಬಾಂಬ್ ಸ್ಫೋಟ | ಸುದ್ದಿ ಮಾಧ್ಯಮಗಳ ಸಮಾಜಘಾತಕ ವರ್ತನೆ ಕುರಿತು ತಾಹೇರ್ ಹುಸೇನ್ ಟೀಕೆ

Date:

  • ‘ಪ್ರಯತ್ನ ವಿಫಲವಾಗಿದ್ದರಿಂದ ಹತಾಶೆಯಾದ ಮಾಧ್ಯಮಗಳು’
  • ಮುಸ್ಲಿಮ್ ಸಮುದಾಯದ ಮೇಲೆ ಗೂಬೆ ಕೂರಿಸಲು ಪ್ರಯತ್ನ

ಕೇರಳದಲ್ಲಿ ನಡೆದ ಬಾಂಬ್ ಸ್ಫೋಟವನ್ನು ನಿರ್ದಿಷ್ಟ ಸಮುದಾಯದ ತಲೆಗೆ ಕಟ್ಟುವ ಆತುರ ತೋರಿಸಿದ ಮಾಧ್ಯಮಗಳ ಮನಸ್ಥಿತಿ ಹೆಚ್ಚು ಅಪಾಯಕಾರಿ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ, “ಕೇರಳದ ನಡೆದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿ ಈಗಾಗಲೇ ಮಾರ್ಟಿನ್ ಎಂಬ ವ್ಯಕ್ತಿ ಮಧ್ಯಾಹ್ನದೊಳಗೆ ಶರಣಾಗಿದ್ದು ಇಲ್ಲಿನ ಕೆಲವು ಮಾಧ್ಯಮಗಳಿಗೆ ತೀವ್ರ ಸ್ವರೂಪದ ಹತಾಶೆ ತರಿಸಿದೆ. ಯಾಕೆಂದರೆ ಸ್ಪೋಟ ನಡೆದ ತಕ್ಷಣ ಮುಸ್ಲಿಮ್ ಸಮುದಾಯದ ಮೇಲೆ ಗೂಬೆ ಕೂರಿಸಲು ತೋರಿದ ಪ್ರಯತ್ನ ವಿಫಲವಾಗಿದ್ದರಿಂದ ಹತಾಶರಾಗಿದ್ದಾರೆ” ಎಂದು ಟೀಕಿಸಿದ್ದಾರೆ.

“ಪವರ್ ಟಿವಿ ಮುಸ್ಲಿಮ್ ಟೋಪಿದಾರಿ ವ್ಯಕ್ತಿಯ ಫೋಟೋ ಹಾಕಿ ಸುಳ್ಳು ಹರಡಲು ತೀವ್ರ ಆತುರ ತೋರಿತ್ತು. ಪವರ್ ಮಾತ್ರವಲ್ಲ ಇನ್ನು ಕೆಲ ಮಾಧ್ಯಮಗಳು ಆತುರದ ವರದಿ ಪ್ರಕಟಿಸಿ ಈಗ ಕೈ ಹಿಚುಕಿಕೊಂಡಿದ್ದಾರೆ. ಕೆಲವು ಪೀತ ಮಾಧ್ಯಮಗಳು ಸಮಯೋಚಿತವಾಗಿ ವರ್ತಿಸುವ ಬದಲಿಗೆ ಸಮಾಜಘಾತಕವಾಗಿ ವರ್ತಿಸಿವೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಧಾನಸೌಧ ವ್ಯಾಪಾರಸೌಧ ಮಾಡಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಕಿಡಿ

“ಆರೋಪಿ ಮುಸ್ಲಿಮ್ ನಾಮಧಾರಿಯಲ್ಲ ಎಂಬುದು ಅವರನ್ನು ಹತಾಶೆಗೊಳಗಾಗುವಂತೆ ಮಾಡಿತು. ಕೆಲವರು ಈ ಬಾಂಬ್‌ ಸ್ಫೋಟವನ್ನು ಇಸ್ರೇಲ್ ವಿರುದ್ದದ ಪ್ರತಿಭಟನೆಗೆ ಜೋಡಿಸಿ ದ್ವೇಷ ಹಬ್ಬಿಸುವ ಎಲ್ಲ ಪ್ರಯತ್ನ ಮಾಡಿದವು. ಮಾರ್ಟಿನ್ ತಾನೇ ಬಾಂಬ್ ಇರಿಸಿದ್ದು ಎಂದು ತಪ್ಪೊಪ್ಪಿಕೊಂಡರೂ ಆತನನ್ನು ತೀವ್ರ ವಿಚಾರಣೆಗೊಳಪಡಿಸಬೇಕು. ವಾಸ್ತವ ವಿಚಾರ ಬಹಿರಂಗವಾಗಬೇಕು” ಎಂದು ಆಗ್ರಹಿಸಿದ್ದಾರೆ.

“ನೆರೆಯ ರಾಜ್ಯದಲ್ಲಿ ಈ ಘಟನೆ ನಡೆದರೂ ಕೆಲವು ಮಾಧ್ಯಮಗಳ ಪೂರ್ವಗ್ರಹ ಪೀಡಿತ ನಡೆಯು ಪ್ರಾಮಾಣಿಕ ಪತ್ರಕರ್ತರ ಮೇಲೆಯೂ ನಂಬಿಕೆ ಕಳಕೊಳ್ಳುವಂತೆ ಮಾಡುತ್ತಿದೆ. ಇಂತಹ ಸಮಾಜಘಾತಕ ಪ್ರಕ್ರಿಯೆಯ ವಿರುದ್ದ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು” ತಾಹಿರ್ ಹುಸೇನ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...