ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದ ರಾಮನಗರ ಜಿಲ್ಲಾಧಿಕಾರಿ ವರದಿಯನ್ನು ಹೈಕೋರ್ಟ್‌ಗೆ ಸರ್ಕಾರ ಸಲ್ಲಿಸಿದೆ. ಹಾಗೆಯೇ ವಿಚಾರಣೆಯನ್ನು ಬುಧವಾರಕ್ಕೆ(ಅ.29) ಮುಂದೂಡಿದೆ.
ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವಂತೆ ಎಚ್‌ಡಿಕೆ ಅವರಿಗೆ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದರು. ಇದಕ್ಕೆ ಏಕಸದಸ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.
ಇದನ್ನು ಓದಿದ್ದೀರಾ? ಎಚ್‌ಡಿಕೆ ಭೂ ಒತ್ತುವರಿ ಕೇಸ್: ಸಮಗ್ರ ವರದಿ ಕೇಳಿದ ಹೈಕೋರ್ಟ್; ಏನಿದು ಪ್ರಕರಣ?
ಈ ತಡೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿ ಡಿ.ಕೆ.ಸಿಂಗ್ ಹಾಗೂ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ.
ಈ ವೇಳೆ ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದ್ದಾರೆ. ನ್ಯಾಯಾಲಯದ ಹಿಂದಿನ ನಿರ್ದೇಶನದಂತೆ ಜಿಲ್ಲಾಧಿಕಾರಿ ವರದಿ ಸಲ್ಲಿಸಲಾಗಿದೆ ಎಂದು ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕಿರಣ್ ರೋಣ್ ಹೈಕೋರ್ಟ್‌ಗೆ ತಿಳಿಸಿದ್ದಾರೆ. ವಾದ ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ರಾಮನಗರದ ಕೇತಗಾನಹಳ್ಳಿ ಗ್ರಾಮದ ಬಿಡದಿ ಹೋಬಳಿಯಲ್ಲಿ ಎಚ್ ಡಿ ಕುಮಾರಸ್ವಾಮಿ ತೋಟದ ಮನೆಗೆ ಹೊಂದಿಕೊಂಡಿರುವ 6 ಎಕರೆ 6 ಗುಂಟೆ ಸರ್ಕಾರಿ ಭೂಮಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.





